NEWSಆರೋಗ್ಯ

ಕೊರೊನಾ ವೈರಸ್ ಕುರಿತು ಸಾರ್ವಜನಿಕರಲ್ಲಿ ಅರಿವು

ಆಟೋ ಧ್ವನಿವರ್ಧಕ ಮೂಲಕ ಜಾಗೃತಿ ಜಾಥಾಗೆ ಸಚಿವ ಶ್ರೀರಾಮುಲು ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ:  ಕೊರೊನಾ ವೈರಸ್ ಕುರಿತು ಆಟೋ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸುವ ಜಾಗೃತಿ ಜಾಥಾಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ  ಬಿ.ಶ್ರೀರಾಮುಲು ಚಾಲನೆ ನೀಡಿದರು.

ನೋವೆಲ್  ಕೊರೊನಾ ವೈರಸ್ ಸಮುದಾಯದಲ್ಲಿ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ  ನಗರದ ಜಿಲ್ಲಾಸ್ಪತ್ರೆ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಜಾಥಾಗೆ ಚಾಲನೆ ನೀಡಿ  ಮಾತನಾಡಿದ ಸಚಿವರು,  ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ. ಇದಕ್ಕಾಗಿ ಅಗತ್ಯ ಕ್ರಮಗಳನ್ನು ತಗೆದುಕೊಂಡಲ್ಲಿ ಸುರಕ್ಷಿತವಾಗಿರಬಹುದು ಎಂದು ತಿಳಿಸಿದರು.

ಪ್ರಧಾನಮಂತ್ರಿಗಳು ಈಗಾಗಲೇ 21 ದಿನಗಳ ಕಾಲ ದೇಶದ್ಯಾಂತ ಲಾಕ್‍ಡೌನ್ ಮಾಡಿದ್ದು, ಸರ್ಕಾರದ ಆದೇಶದಂತೆ ಸಾರ್ವಜನಿಕರು ಪಾಲಿಸಬೇಕು. ಅನಾವಶ್ಯಕವಾಗಿ ಹೊರಗಡೆ ತಿರುಗಾಡುವುದಾಗಲಿ ಮಾಡಬಾರದು ಎಂದರು.

ಆಟೋ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಹೇಳಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಆಟೋ ಮೂಲಕ ಕರೋನಾ ವೈರಸ್ ಕುರಿತು ಜಾಗೃತಿ ನೀಡುವ ಸಂದೇಶಗಳನ್ನು ಸಾರ್ವಜನಿಕರು ಪಾಲಿಸಬೇಕು. ಯಾರದರಾದರೂ ವಿದೇಶಿಯಿಂದ ಬಂದ ವ್ಯಕ್ತಿಗಳ ಇದ್ದಲ್ಲಿ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದರು.

ಯಾರಿಗಾದರೂ ಕೆಮ್ಮು, ಜ್ವರ, ಸೀತ, ನೆಗಡಿ ಕಂಡುಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ, ಸೋಂಕು ಹರಡುವುದನ್ನು ತಡೆಯಲು ಮಾಸ್ಕ್‌ ಬಳಸಿ ಹಾಗೂ ಕೈಗಳನ್ನು ಆಗಾಗ್ಗೆ ಸ್ವಚ್ಛಗೊಳಿಸುತ್ತೀರಿ ಎಂದರು.

ಶಾಸಕ ಸೋಮಶೇಖರೆಡ್ಡಿ, ಗ್ರಾಮೀಣ ಶಾಸಕ ನಾಗೇಂದ್ರ, ಕನಕಗಿರಿ ಶಾಸಕ ಬಸವರಾಜ್ ದಡೆಸೂಗೂರು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಮಲಿಂಗಪ್ಪ.ಬಿ.ಕೆ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ್, ಕಾರ್ಮಿಕ ಇಲಾಖೆಯ ಕಾರ್ಯನಿರ್ವಹಕ ಆರ್.ಎನ್.ಶಿವರಾಜ್  ಇತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ