ಮಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿ ಬಳಲುತ್ತಿದ್ದ ಯುವ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊರವಲಯದ ಚಿತ್ರಾಪುರದ ರೆಹೆಜಾ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ರಮೇಶ್ ಮತ್ತು ಗುಣ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ಚಿಂತೆಗೀಡಾದ ಇವರು ಬೇರೆದಾರಿ ಕಾಣದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರಾಪುರದ ಫ್ಲ್ಯಾಟ್ ನಲ್ಲಿ ವಾಸವಿದ್ದ ದಂಪತಿ ಒಂದು ವಾರದಿಂದ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ನಿರ್ಧಾರಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ರಮೇಶ್ ಪೊಲೀಸ್ ಕಮೀಷನರ್, ಹಿಂದೂ ಸಂಘಟನೆ ಮುಖಂಡರಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ಬಳಿಕ ಶರಣ್ ಪಂಪ್ವೆಲ್, ಸತ್ಯಜಿತ್ ಸುರತ್ಕಲ್ ಗೂ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ.
ಅಂತ್ಯಕ್ರಿಯೆ ಮಾಡುವಂತೆ ವಾಯ್ಸ್ ಮೆಸೇಜ್‍ನಲ್ಲಿ ಮನವಿ ಮಾಡಿದ್ದು, ಅಂತ್ಯಕ್ರಿಯೆಗಾಗಿ ಒಂದು ಲಕ್ಷ ರೂಪಾಯಿ ಇಟ್ಟಿರುವುದಾಗಿ ಹೇಳಿದ್ದಾರೆ. ಅಲ್ಲದೆ ಮನೆಯ ಉಪಕರಣ ಮಾರಿ ಬಡವರಿಗೆ ನೀಡುವಂತೆ ಮನವಿ ಮಾಡಿದ್ದಾರೆ.
ಈ ವಾಯ್ಸ್ ಮೆಸೇಜ್ ಬಂದ ತಕ್ಷಣ ಪೊಲೀಸ್ ಕಮೀಷನರ್ ಅಡ್ರೆಸ್ ಟ್ರ್ಯಾಕ್ ಮಾಡಿದ್ದು, ಪೊಲೀಸರು ಮನೆ ತಲುಪುವ ವೇಳೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದರು ಬಂದಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.
![](https://vijayapatha.in/wp-content/uploads/2024/02/QR-Code-VP-1-1-300x62.png)