ಕರ್ಫ್ಯೂ ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಎಚ್ಚರಿಕೆ
ಕಲಬುರಗಿ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಕರ್ಫ್ಯೂ ಹೇರಲಾಗಿದೆ. ಇದನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ನಿಷೇಧಾಜ್ಞೆ ಉಲ್ಲಂಘಿಸಿ ಓಡಾಡುವರ ಬೈಕ್‍ಗಳನ್ನು ಜಫ್ತಿ ಮಾಡಬೇಕು. ಕನಿಷ್ಠ ದಿನಕ್ಕೆ 100 ಬೈಕ್ ವಶಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಸಾಮಾಜಿಕ ಜಾಲತಾಣಗಳು ಸುಳ್ಳು ಸುದ್ದಿ ಪ್ರಕಟಿಸುವ ಮೂಲಕ ಸಮಾಜದಲ್ಲಿ ಗೊಂದಲ ಉಂಟು ಮಾಡುತ್ತಿವೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬರೀ ಎಚ್ಚರಿಕೆ ನೀಡಿದರೆ ಸಾಲದು, ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಭಿಕ್ಷಕರಿಗೆ ಆಹಾರ ಪೊಟ್ಟಣ ವಿತರಣೆ
ಕೊರೊನಾ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕಲಬುರಗಿ ರೈಲು ನಿಲ್ದಾಣದ ಬಳಿಯಿರುವ ಬಸ್ ನಿಲ್ದಾಣದಲ್ಲಿದ್ದ ಭಿಕ್ಷುಕರು, ನಿರ್ಗತಿಕರಿಗೆ ಆಹಾರ ಪೊಟ್ಟಣ ವಿತರಿಸಿದರು.
ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರೀಷ್ಟಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ, ಡಿಸಿಪಿ ಕಿಶೋರ್ ಬಾಬು ಇದ್ದರು.