ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು
![](https://vijayapatha.in/wp-content/uploads/2024/12/28-Dec-2024-bangla-fire-in-house.jpg)
ಢಾಕಾ: ಮಧ್ಯಂತರ ಸರ್ಕಾರ ಬಾಂಗ್ಲಾದೇಶದಲ್ಲಿ ಬಂದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚಾಗುತ್ತಲೇ ಇದೆ. ಹಿಂದೂ ದೇಗುಲಗಳ ಮೇಲೆ ದಾಳಿ ಮಾಡಿದ ಬಳಿಕ ಈಗ ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿ ಸಂಪೂರ್ಣ ಸುಟ್ಟುಹಾಕಿರುವ ಘಟನೆ ಚಿತ್ತಗಾಂಗ್ ಪ್ರದೇಶದಲ್ಲಿ ನಡೆದಿದೆ.
ಬಂದರ್ಬನ್ ಜಿಲ್ಲೆಯ ನೋಟುನ್ ತೊಂಗ್‌ಹಿರಿ ತ್ರಿಪುರಾ ಪರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 17 ಮನೆಗಳು ಸಂಪೂರ್ಣ ಭಸ್ಮವಾಗಿದ್ದು, ಎರಡು ಮನೆಗಳು ಭಾಗಶಃ ಸುಟ್ಟುಹೋಗಿವೆ. ಈ ಬಗ್ಗೆ ಬಾಂಗ್ಲಾ ಸರ್ಕಾರ ಒಂದೇ ಸಮುದಾಯದ ಎರಡು ಗುಂಪುಗಳ ನಡುವಿನ ವೈಷಮ್ಯವೇ ಇದಕ್ಕೆ ಕಾರಣ ಎಂದು ಹೇಳಿಕೊಂಡಿದೆ.
ಕ್ರಿಸ್ಮಸ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆಂದು ಚರ್ಚ್‌ಗೆ ಹೋಗಿದ್ದಾಗ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಸಮುದಾಯದ ಮುಖಂಡರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.
ಒಟ್ಟಾರೆ ಚಿತ್ತಗಾಂಗ್ ಪ್ರದೇಶದಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಜತೆಗೆ ಹೊಸ ಮನೆಗಳನ್ನು ಕಟ್ಟಿಕೊಡಬೇಕು. ಅಲ್ಲದೆ ಈ ರೀತಿ ದೌರ್ಜನ್ಯ ಎಸಗಿರುವ ಪಾಪಿಗಳ ಹೆಡೆಮುರಿಕಟ್ಟಬೇಕು ಬೇಕು ಮನೆ ಕಳೆದುಕೊಂಡ ಕುಟುಂಬದವರು ಕಣ್ಣೀರು ಹಾಕುತ್ತಿದ್ದಾರೆ.
ಬಾಂಗ್ಲಾ ದೇಶದಲ್ಲಿ ಇತ್ತೀಚೆಗೆ ಭಾರಿ ಪ್ರಮಾಣದಲ್ಲಿ ಮಾನವ ನಷ್ಟ ಹಾಗೂ ಆಸ್ತಿ ಪಾಸ್ತಿಗಳ ನಷ್ಟವಾಗುತ್ತಿರುವುದು ವಿಶ್ವಕ್ಕೆ ಅಘಾತವನ್ನುಂಟು ಮಾಡುತ್ತಿದೆ. ಈ ರೀತಿ ಪಾಪಿಗಳ ದುಶ್ಕೃತ್ಯಕ್ಕೆ ಜನರ ಜೀವ ಹಾಗೂ ಜೀವನ ಹಾಳಾಗುತ್ತಿರುವುದು ಭಾರಿ ನೋವಿನ ಸಂಗತಿಯಾಗಿದೆ ಎಂದು ಸಾಮಾನ್ಯರು ನೊಂದುಕೊಳ್ಳುತ್ತಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)