NEWSನಮ್ಮರಾಜ್ಯ

ಕರ್ನಾಟಕದಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್‌

ಒಂದೂವರೆ ತಿಂಗಳ ಬಳಿಕ ಒಂದು ಪ್ರಕರಣ l ಇಂದಿನ ಮಟ್ಟಿಗೆ ಇದು ಉತ್ತಮ ಬೆಳವಣಿಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ  ಭಾನುವಾರ ಮಧ್ಯಾಹ್ನದ ವರೆಗೆ  ಬಂದ ವರದಿಯಲ್ಲಿ ಮಾತ್ರ ಒಂದೇಒಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ.

ಇದು ಒಂದೂವರೆ ತಿಂಗಳ ನಂತರ ರಾಜ್ಯದಲ್ಲಿ ಒಬ್ಬರಿಗೆ ಮಾತ್ರ ಕೊರೋನಾ ಪಾಸಿಟಿವ್ ಬಂದಿರುವುದು ಇಂದಿನ ಮಟ್ಟಿಗೆ  ಆಶಾದಾಯಕ ಬೆಳವಣಿಗೆ ಎಂದು ಹೇಳಬಹುದಾಗಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ 47 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಈಕೆ  ಖಾಸಗಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು, 432ನೇ ಸೋಂಕಿತೆ 78 ವರ್ಷದ ವೃದ್ಧೆಯ ಸಂಪರ್ಕಕ್ಕೆ ಬಂದಿದ್ದರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬಂಟ್ವಾಳದ ವೃದ್ಧೆ ಏಪ್ರಿಲ್ 21ರಂದು  ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸೋಂಕಿನಿಂದ ಮೃತಪಟ್ಟಿದ್ದರು. ಈ ವೃದ್ಧೆಯ ಸಂಪರ್ಕದಿಂದ ಸ್ವೀಪರ್ ಕೆಲಸ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಪ್ರದೇಶದ ಈಕೆಗೆ ಭಾನುವಾರ  ಇರುವುದು ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಕೊರೊನಾ  ಸೋಂಕಿನಿಂದ 18 ಮಂದಿ ಅಸುನೀಗಿದ್ದು, 177 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ