NEWSನಮ್ಮರಾಜ್ಯ

ಕರ್ನಾಟಕದಲ್ಲಿ ಏಪ್ರಿಲ್‌ 30ರವರೆಗೂ ಲಾಕ್‌ಡೌನ್‌ ಮುಂದುವರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ವಿಶ್ವ ಪೀಡಿತ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮುಂದುವರಿಸಿರುವುದರಿಂದ ಇದೇ ಏಪ್ರಿಲ್‌ 30ರವರೆಗೂ ಲಾಕ್‌ಡೌನ್‌ ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಧ್ಯಾಹ್ನ 12.30ರಿಂದ ಸುಮಾರು ಒಂದು ವರೆಗೂ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಂಡಿದ್ದು, ಇದೆ 14ರಂದು ತೆರವಾಗಬೇಕಿದ್ದ ಲಾಕ್‌ಡೌನ್‌ ಇನ್ನೂ 16ದಿನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಿಧಿಯಿಲ್ಲದೆ ಕೆಲ ದಿಟ್ಟ ಮತ್ತು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿರುವುದು ಸರ್ಕಾರದ ಜವಾಬ್ದಾರಿಯೂ ಆಗಿದೆ. ಅಷ್ಟೇ ಅಲ್ಲದೆ ರಾಜ್ಯದ ಜನತೆಯೂ ಕೊರೊನಾವನ್ನು ಬಡಿದೋಡಿಸಲು ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಚಾಚು ತಪ್ಪದೆ ಪಾಲಿಸಬೇಕಿದೆ. ಇದು ಪ್ರತಿಯೊಬ್ಬರ ಜವಾಬ್ದಾರಿಯೂ ಹೌದು.

ಒಟ್ಟಾರೆಯಾಗಿ ಕೊರೊನಾದಿಂದ ವಿಶ್ವವೇ ತತ್ತರಿಸಿ ಹೋಗಿದ್ದು, ಅದರಿಂದ ನಮ್ಮ ರಾಜ್ಯವು ಹೊರತಾಗಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಜನತೆ ಸೇರಿದಂತೆ ನಗರ ಪ್ರದೇಶದ ಜನರು ಬಹಳ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕಿದೆ.

ದೇಶದ ವಿವಿಧ ರಾಜ್ಯಗಳು ತಮ್ಮ ರಾಜ್ಯದಲ್ಲಿರುವ ಲಾಕ್‌ಡೌನ್‌ ಅನ್ನು ಮುಂದುವರಿಸುವುದಾಗಿ ಈಗಾಗಲೇ ಘೋಷಣೆ ಮಾಡಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಆಯಾಯ ರಾಜ್ಯಗಳ ಜನರಿಗೆ ಬೇಕಾದ ಮೂಲಭೂತ ಸೌಲಭ್ಯವನ್ನು ಒದಗಿಸಿಕೊಡಲು ಮುಂದಾಗುತ್ತಿದೆ.

Leave a Reply