NEWSನಮ್ಮಜಿಲ್ಲೆ

ಕರ್ಫ್ಯೂ ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಕರ್ಫ್ಯೂ ಹೇರಲಾಗಿದೆ. ಇದನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ  ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ  ಅವರು ಸುದ್ದಿಗೋಷ್ಠಿಯಲ್ಲಿ  ಮಾತನಾಡುತ್ತಿದ್ದರು.

ನಿಷೇಧಾಜ್ಞೆ  ಉಲ್ಲಂಘಿಸಿ ಓಡಾಡುವರ ಬೈಕ್‍ಗಳನ್ನು ಜಫ್ತಿ ಮಾಡಬೇಕು. ಕನಿಷ್ಠ ದಿನಕ್ಕೆ 100 ಬೈಕ್ ವಶಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣಗಳು ಸುಳ್ಳು ಸುದ್ದಿ ಪ್ರಕಟಿಸುವ ಮೂಲಕ  ಸಮಾಜದಲ್ಲಿ ಗೊಂದಲ ಉಂಟು ಮಾಡುತ್ತಿವೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬರೀ ಎಚ್ಚರಿಕೆ ನೀಡಿದರೆ ಸಾಲದು, ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಭಿಕ್ಷಕರಿಗೆ ಆಹಾರ ಪೊಟ್ಟಣ ವಿತರಣೆ

ಕೊರೊನಾ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕಲಬುರಗಿ ರೈಲು ನಿಲ್ದಾಣದ ಬಳಿಯಿರುವ ಬಸ್ ನಿಲ್ದಾಣದಲ್ಲಿದ್ದ ಭಿಕ್ಷುಕರು, ನಿರ್ಗತಿಕರಿಗೆ ಆಹಾರ ಪೊಟ್ಟಣ ವಿತರಿಸಿದರು.

ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರೀಷ್ಟಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ, ಡಿಸಿಪಿ ಕಿಶೋರ್ ಬಾಬು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ