NEWSನಮ್ಮರಾಜ್ಯಸಂಸ್ಕೃತಿ

ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಹಂಪಿ: ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು ಎಂದರು.

ಇನ್ನು ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ ಎಂದು ಹೇಳಿದರು.

ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ ಎಂದರು.

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್‌ನಲ್ಲೇ “ಕನ್ನಡ ಸಂಭ್ರಮ-50” ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದು ತಿಳಿಸಿದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ. ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ, ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ