NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕೋಲಾರ: ಜೆಡಿಎಸ್‌ ಮುಖಂಡ ಸುಹೆಲ್‌ ದಿಲ್‌ ನವಾಜ್‌ ಎಎಪಿ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಇಲ್ಲಿನ ಜೆಡಿಎಸ್‌ ಮುಖಂಡ ಸುಹೆಲ್‌ ದಿಲ್‌ ನವಾಜ್‌ ಅವರು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರ ಸಮ್ಮುಖ ದೆಹಲಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಸುಹೆಲ್‌ ದಿಲ್‌ ನವಾಜ್‌ ಅವರ ಕುರಿತು ಮಾತನಾಡಿದ ದಿಲೀಪ್‌ ಪಾಂಡೆ, “ಸುಹೆಲ್‌ ಅವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ ಜನಿಸಿದವರು. ಇವರ ತಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಬ್ದುಲ್‌ ಲತೀಫ್‌ ಅವರು ʻಕರ್ನಾಟಕದ ರೇಷ್ಮೆ ಉದ್ಯಮದ ಪಿತಾಮಹʼ ಎಂದೇ ಪ್ರಸ್ತಿದ್ಧರಾಗಿದ್ದರು.

ಸುಹೆಲ್‌ ಅವರು ಇಂಗ್ಲೆಂಡ್‌ನಲ್ಲಿ ಎಂಎ, ಎಲ್‌ಎಲ್‌ಬಿ, ಐಎಲ್‌ಟಿ ಶಿಕ್ಷಣ ಪಡೆದಿದ್ದಾರೆ. ಕಿರಿಯ ವಯಸ್ಸಿನಿಂದಲೂ ರಾಜಕೀಯ ಹೋರಾಟಗಳಲ್ಲಿ ಆಸಕ್ತಿ ಹೊಂದಿದ್ದಾರೆ. ವಿದ್ಯಾರ್ಥಿ ನಾಯಕರಾಗಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ ಅನುಭವ ಹೊಂದಿದ್ದಾರೆ ಎಂದು ಪರಿಚಯಿಸಿದರು.

ಜೆ.ಎಚ್‌.ಪಟೇಲ್‌ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸುಹೆಲ್‌ ಅವರು ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (ಪಿಡಿಎಸ್) ವೆಚ್ಚ ಕಡಿತ ಹಾಗೂ ಇನ್ನಿತರ ಬದಲಾವಣೆಗಳನ್ನು ತಂದಿದ್ದರು. ಕೋಲಾರದ ರೈಲ್ವೆ ಸಂಪರ್ಕ ಅಭಿವೃದ್ಧಿಯಲ್ಲಿ ಸುಹೆಲ್‌ ಅವರ ಪಾತ್ರ ಮಹತ್ವದ್ದಾಗಿದೆ. ಇಂತಹ ಅನುಭವಿ ವ್ಯಕ್ತಿತ್ವ ಹಾಗೂ ಅಪಾರ ಜನಪರ ಕಾಳಜಿಯುಳ್ಳ ನಾಯಕರು ಜೆಡಿಎಸ್‌ ತೊರೆದು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಸಂತಸದ ವಿಚಾರ ಎಂದು ದಿಲೀಪ್‌ ಪಾಂಡೆ ಹೇಳಿದರು.

ಸುಹೆಲ್‌ ದಿಲ್‌ ನವಾಜ್‌ ಮಾತನಾಡಿ, “ಜನಾನುರಾಗಿ ಆಡಳಿತ ಹೇಗಿರುತ್ತದೆ ಎಂಬುದನ್ನು ಆಮ್‌ ಆದ್ಮಿ ಪಾರ್ಟಿಯು ತೋರಿಸಿಕೊಡುತ್ತಿದೆ. ಆರೋಗ್ಯ, ಶಿಕ್ಷಣ, ಸಾರಿಗೆ ಮುಂತಾದ ಕ್ಷೇತ್ರದಲ್ಲಿ ದೆಹಲಿ ಹಾಗೂ ಪಂಜಾಬ್‌ ರಾಜ್ಯಗಳ ಎಎಪಿ ಸರ್ಕಾರಗಳು ಮಾಡಿರುವ ಸಾಧನೆ ಪ್ರಶಂಸನೀಯ.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದರೆ ಮೂಲಭೂತ ಸೌಲಭ್ಯಗಳನ್ನು ಉಚಿತವಾಗಿ ನೀಡಲು ಸಾಧ್ಯವಿದೆ ಎಂಬುದನ್ನು ಪಕ್ಷವು ಸಾಧಿಸಿ ತೋರಿಸಿದೆ. ಕರ್ನಾಟಕದ 40% ಸರ್ಕಾರವನ್ನು ಕಿತ್ತೊಗೆದು, ಪಾರದರ್ಶಕ ಆಡಳಿತ ನೀಡುವ ಆಮ್‌ ಆದ್ಮಿ ಪಾರ್ಟಿಯನ್ನು ಅಧಿಕಾರಕ್ಕೆ ತರಲು ಜನರು ಪಣ ತೊಡಬೇಕು ಎಂದು ಕರೆ ನೀಡಿದರು.

ಸುಹೆಲ್‌ ದಿಲ್‌ ನವಾಜ್‌ ಅವರ ಜೊತೆ ಅವರ 25ಕ್ಕೂ ಹೆಚ್ಚು ಬೆಂಬಲಿಗರು ಆಮ್‌ ಆದ್ಮಿ ಪಾರ್ಟಿ ಸೇರಿದ್ದಾರೆ. ಈ ವೇಳೆ ಕೋಲಾರ ಜಿಲ್ಲಾ ಉಸ್ತುವಾರಿ ರವಿಶಂಕರ್ ಸೇರಿದಂತೆ ಇತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು