CrimeNEWSಆರೋಗ್ಯ

ಕೊಳ್ಳೇಗಾಲದಲ್ಲಿ ವೈದ್ಯೆ ಸಿಂಧುಜಾ ಅನುಮಾನಾಸ್ಪದ ಸಾವು

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ವೈದ್ಯೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿ ನಡೆದಿದೆ.

ಕೊಳ್ಳೇಗಾಲ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಅರಿವಳಿಕೆ ವಿಭಾಗದ ಡಾ. ಸಿಂಧುಜಾ (28) ಎಂಬುವರೇ ಅನುಮಾನಾಸ್ಪದವಾಗಿ ಮೃತಪಟ್ಟವರು.

ಮೂಲತಃ ತಮಿಳುನಾಡಿನ ಚೆನ್ನೈನವರಾದ ಸಿಂಧುಜಾ ಅವರು ಎಂಬಿಬಿಎಸ್ ಮುಗಿಸಿ ಬಳಿಕ ಸ್ನಾತಕೋತ್ತರ ಪದವಿಗೆ ಸೇರಿದ್ದರು. ಸ್ನಾತಕೋತ್ತರ ಪದವಿ ಶಿಕ್ಷಣದ ಭಾಗವಾಗಿ ಅವರು ನಗರದ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಜಿಲ್ಲೆಯ ಕೊಳ್ಳೇಗಾಲದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪವಿರುವ ಬಾಡಿಗೆ ಮನೆಯಲ್ಲಿ ವರ್ಷದಿಂದ ವಾಸವಿದ್ದರು. ಆಸ್ಪತ್ರೆಯಲ್ಲಿ ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಸಿಂಧುಜಾ, ಗುರುವಾರ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಿದ್ದರು.

ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಾರದ ಕಾರಣ ವೈದ್ಯೆ ಲೋಕೇಶ್ವರಿ ಅವರು ಸಿಂಧುಜಾ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸಿರಲಿಲ್ಲ. ಅನುಮಾನಗೊಂಡು ವೈದ್ಯರು ಹಾಗೂ ಸಿಬ್ಬಂದಿ ಮನೆಗೆ ಹೋಗಿದ್ದಾರೆ. ಕೂಗಿದರೂ ಬಾಗಿಲು ತೆರೆದಿಲ್ಲ. ನಂತರ ಸಿಬ್ಬಂದಿ ಕಿಟಕಿ ಗಾಜನ್ನು ಒಡೆದು ನೋಡಿದಾಗ ಡಾ.ಸಿಂಧುಜಾ ನೆಲದ ಮೇಲೆ ಬಿದ್ದಿದ್ದರು. ಪಕ್ಕದಲ್ಲಿ ಸಿರಿಂಜ್, ಔಷಧ, ಚಾಕು ಇನ್ನಿತರ ವಸ್ತುಗಳು ಇದ್ದವು ಎಂದು ತಿಳಿದು ಬಂದಿದೆ.

ಸಿಂಧುಜಾ ಅವರಿಗೆ 2024ರ ಜನವರಿ 2ರಂದು ಮದುವೆ ನಿಶ್ಚಯವಾಗಿತ್ತು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಡಿವೈಎಸ್ಪಿ ಸೋಮೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಹಿಂದಿನ ನಿಜಾಂಶ ತಿಳಿದು ಬರಬೇಕಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್