CrimeNEWS

ಕಳ್ಳಭಟ್ಟಿ ತಯಾರಿಕೆ ಅಡ್ಡೆಮೇಲೆ ದಾಳಿ ಆರೋಪಿಗಳ ವಿರುದ್ಧ FIR

ಕೊಡಗು ಜಿಲ್ಲಾದ್ಯಂತ 360 ಕಡೆ ದಾಳಿ, 21 ಪ್ರಕರಣ ದಾಖಲು l ಬಿಂದುಶ್ರೀ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಜಿಲ್ಲೆಯಾದ್ಯಂತ ಒಟ್ಟು 360 ದಾಳಿ ನಡೆಸಿದ್ದು 21 ಪ್ರಕರಣ ದಾಖಲಿಸಲಾಗಿದ್ದು,  128 ಲೀ. ಬೆಲ್ಲದ ಕೊಳೆ, 1805 ಪುಳಗಂಜಿ, 30.500 ಲೀ ಕಳ್ಳಭಟ್ಟಿ ಸಾರಾಯಿ, 8.280 ಲೀ ಅಕ್ರಮ ಮದ್ಯ ಹಾಗೂ ಕಳ್ಳಭಟ್ಟಿ ತಯಾರಿಕೆಗೆ ಬಳಸಲಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ನಿಯಮ ಉಲ್ಲಂಘನೆ ಮಾಡಿರುವ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ ಎಂದು ಕೊಡಗು ಜಿಲ್ಲಾ ಅಬಕಾರಿ ಉಪ ಆಯುಕ್ತೆ ಪಿ.ಬಿಂದುಶ್ರೀ ಮಾಹಿತಿ ನೀಡಿದರು.

ತಾಲೂಕಿನಲ್ಲಿ 9 ಕಳ್ಳಭಟ್ಟಿ ಪ್ರಕರಣ ದಾಖಲಿಸಲಾಗಿದ್ದು, 23 ಲೀ. ಕಳ್ಳಭಟ್ಟಿ, 1665 ಲೀ. ಗೇರು ಹಣ್ಣಿನ ಪುಳಗಂಜಿ ಹಾಗೂ 1 ಸನ್ನದಿನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಿಸುವಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಮದ್ಯ ಮಾರಾಟ ನಿಷೇಧಿಸಿದ್ದು, ಮೇ 3  ರ ವರೆಗೆ ವಿಸ್ತರಿಸಲಾಗಿದೆ ಎಂದು ಪಿ.ಬಿಂದುಶ್ರೀ ತಿಳಿಸಿದ್ದಾರೆ.

ಸೋಮವಾರಪೇಟೆ ತಾಲೂಕಿನಲ್ಲಿ 9 ಪ್ರಕರಣ ದಾಖಲಿಸಿದ್ದು, 2.5 ಲೀ. ಕಳ್ಳಭಟ್ಟಿ, 128 ಲೀ. ಬೆಲ್ಲದ ಕೊಳೆ, 120 ಲೀ. ಬೆಲ್ಲದ ಪುಳಗಂಜಿ ಹಾಗೂ 2 ಸನ್ನದಿನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಹಾಗೆಯೇ ವಿರಾಜಪೇಟೆ ತಾಲ್ಲೂಕಿನಲ್ಲಿ 03 ಪ್ರಕರಣ ದಾಖಲಿಸಲಾಗಿದ್ದು 5 ಲೀ. ಕಳ್ಳಭಟ್ಟಿ, 20 ಲೀ.  ಪುಳಗಂಜಿ ಹಾಗೂ 2 ಸನ್ನದಿನ ಮೇಲೆ ಪ್ರಕರಣ ದಾಖಲಾಗಿದೆ.

ಕಳ್ಳಭಟ್ಟಿ ತಯಾರಿಕೆಯಲ್ಲಿ ಕೊಳೆತ ಹಣ್ಣು, ಕೊಳೆತ ಬೆಲ್ಲ, ಬ್ಯಾಟರಿ ಸೆಲ್, ಯೂರಿಯಾ ಮತ್ತಿತರ ಆರೋಗ್ಯಕ್ಕೆ ಹಾನಿಕರವಾದ ಪದಾರ್ಥಗಳನ್ನು ಮಿಶ್ರಣ ಮಾಡುವ ಸಾಧ್ಯತೆಗಳಿದ್ದು, ಇದು ಪಾನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡಿ ರೋಗ ನಿರೋಧಕ ಶಕ್ತಿ ಕುಂದಿಸಲಿದೆ ಎಂದರು.

ಸಾರ್ವಜನಿಕರಿಗೆ ಕಳ್ಳಭಟ್ಟಿ ಸೇವನೆಯಿಂದ ದೂರವಿರುವಂತೆ ಮನವಿ ಮಾಡಿದೆ ಹಾಗೂ ಯರಾದರೂ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಕೆ, ಮಾರಾಟ ಮಾಡುವುದು ಕಂಡುಬಂದಲ್ಲಿ ಅಬಕಾರಿ ಇಲಾಖೆಗೆ ಮಾಹಿತಿ ನೀಡಲು ಕೋರಿದೆ. ಮಾಹಿತಿ ನೀಡುವವರ ಗೋಪ್ಯತೆ ಕಾಪಾಡಲಾಗುವುದು ಎಂದು ಅಬಕಾರಿ ಉಪ ಆಯುಕ್ತೆ ತಿಳಿಸಿದ್ದಾರೆ.

Leave a Reply

error: Content is protected !!