NEWSಸಂಸ್ಕೃತಿ

ಕವಿ ಕೆ.ಎಸ್. ನಿಸಾರ್ ಅಹಮದ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರು ಇಂದು ನಿಧನ ಹೊಂದಿದ್ದು, ಹಿರಿಯ ಸಾಹಿತಿಯ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ಅವರು, ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆಮಾತಾಗಿದ್ದರು. ಶಿವಮೊಗ್ಗದಲ್ಲಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು ಹಾಗೂ ವಿಶೇಷ ಬಾಂಧವ್ಯ ಹೊಂದಿದ್ದರು.

2007ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ  ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು.  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಗೆ ಭಾಜನರಾಗಿದ್ದ ಅವರು ಕನ್ನಡದ ಎಲ್ಲಾ ಪ್ರಾಕಾರಗಳನ್ನು ಶ್ರೀಮಂತಗೊಳಿಸಿದ್ದರು.

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿಬಿದ್ದಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ನಿತ್ಯೋತ್ಸವದ ಕವಿ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ನಿಸಾರ್ ಅವರ ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್‍ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ. ಇವರ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮುಸುಕಾದಂತಾಗಿದೆ. ಜೋಗದ ಸಿರಿ ಬೆಳಕಿನಲ್ಲಿ’ ಹಾಡು ನನ್ನ ಕಿವಿಯಲ್ಲಿ ಈಗಲೂ ಅನುರಣಿಸುತ್ತಿದೆ. ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿದ್ದ ನಿಸಾರ್ ಅಹಮದ್ ಅವರ ಸಾಹಿತ್ಯ ಸೇವೆ ಅನನ್ಯ. ನಾಡು ಕಂಡ ಹೆಮ್ಮೆಯ ಸಾಹಿತಿ. 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರ ಕುಟುಂಬದ ಸದಸ್ಯರು ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಕವಿ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಿಬಾರದ ನಷ್ಟ. ಯಾವ ಪಂಥ-ಪಂಗಡಕ್ಕೆ ಕಟ್ಟಿಕೊಳ್ಳದೆ ಸ್ಚಚ್ಛಂದವಾಗಿ ಹಕ್ಕಿಯಂತೆ ಕಾವ್ಯಕಟ್ಟುತ್ತಾ‌ ಸರ್ವಜನ ಪ್ರಿಯರಾಗಿದ್ದ ನಿಸಾರ್ ಅಹ್ಮದ್ ಅವರ ಕಾಯ ಅಳಿದರೂ ಅವರ ಕಾವ್ಯದ ಮೂಲಕ ನಮ್ಮ ನೆನಪಲ್ಲಿ ಸದಾ ಜೀವಂತ. ನನ್ನ ಗೌರವಪೂರ್ಣ ಸಂತಾಪಗಳು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ನವ್ಯಕಾವ್ಯ ಮಾರ್ಗದ ನಿತ್ಯೋತ್ಸವದ ಕವಿ, ಭಾಷಾಂತರಕಾರ, ಪದ್ಮಶ್ರೀ ಪ್ರೊಫೆಸರ್ ಕೆ ಎಸ್ ನಿಸಾರ್ ಅಹಮದ್ ಅವರ ನಿಧನ ಆಘಾತಕರ. ಸಹೃದಯಿ, ವಿನಯಶೀಲರಾದ ನಿಸಾರ್ ಅಹಮದ್ ಅವರಂತಹವರ ಅಗಲಿಕೆ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ನಷ್ಟಉಂಟಾಗಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು  ಸಂತಾಪ ಸೂಚಿಸಿದ್ದಾರೆ.

ಕನ್ನಡದ ಜನ ಮಾನಸದ ಹೆಮ್ಮೆಯ, ನಿತ್ಯೋತ್ಸವದ ಕವಿ ಪ್ರೊ. ಕೆ.ಎಸ್.ನಿಸಾರ್ ಅಹಮದ್ ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ತಮ್ಮ ಕವಿತೆಗಳ ಮೂಲಕ ಕನ್ನಡಿಗರ ಮನೆ, ಮನಗಳನ್ನು ತಲುಪಿದ್ದ ಅವರು ವಿಧಿವಶರಾಗಿರುವುದು ಕನ್ನಡ ಸಾರಸ್ವತ ಲೋಕಕ್ಕೆ ಎಂದೂ ಭರಿಸಲಾಗದ ನಷ್ಟವಾಗಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಸಂತಾಪ ಸೂಚಿಸಿದ್ದಾರೆ.

2 Comments

  • ನಿತ್ಯೋತ್ಸವ ಕವಿಗೆ ನಮ್ಮ ನಮನ ಅವರ ಆತ್ಮಕ್ಕೆ ಶಾಂತಿ ಸಿಗಲಿ

  • ನಿತ್ಯೋತ್ಸವ ಕವಿಗೆ ನಮ್ಮ ನಮನ ಅವರ ಆತ್ಮಕ್ಕೆ ಶಾಂತಿ ಸಿಗಲಿ

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...