NEWSಕೃಷಿನಮ್ಮರಾಜ್ಯ

ಕೃಷಿ, ಪೂರಕ ಚಟುವಟಿಕೆಗಳ ಸುಸ್ಥಿರ ಅಭಿವೃದ್ಧಿಗೆ ರೈತರ ಉತ್ಪಾದಕ ಸಂಸ್ಥೆಗಳು ಸಹಕಾರಿ : ಜಿಲ್ಲಾಧಿಕಾರಿ ಆರ್.ಲತಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸಂಘಟಿಸಿ ತಂತ್ರಜ್ಙಾನಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡು, ರೈತರ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸುವ ಮೂಲಕ ಸುಸ್ಥಿರ ಜೀವನೋಪಾಯ ಕ್ರಮಗಳನ್ನು ಬಲಪಡಿಸಬೇಕು,ರೈತ ಉತ್ಪಾದಕ ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಇಂದು ರೈತ ಉತ್ಪಾದಕರ ಸಂಸ್ಥೆಗಳ ರಚನೆ ಮತ್ತು ಉತ್ತೇಜನ ಕಾರ್ಯಕ್ರಮದ ಜಿಲ್ಲಾಮಟ್ಟದ ಮೇಲ್ವಿಚಾರಣಾ ಮತ್ತು ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಆಯ್ದ ಬೆಳೆ ಅಥವಾ ಉತ್ಪನ್ನಗಳಲ್ಲಿ ಸಂಘಟಿತ ಮೌಲ್ಯವರ್ಧನೆ,ಮಾರುಕಟ್ಟೆ ಸರಪಳಿಯನ್ನು ರಚಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು. ಮೀನುಗಾರರು, ನೇಕಾರರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಹಾಗೂ ಮಾರುಕಟ್ಟೆಯನ್ನು ಕಲ್ಪಿಸಬೇಕು.ಸಂಪನ್ಮೂಲ ಸಂಸ್ಥೆಗಳು,ಸರ್ಕಾರೇತರ ಸಂಸ್ಥೆಗಳು ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಈ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು. ಸಾಮರ್ಥ್ಯ ಹೆಚ್ಚಿಸುವುದು,ಕೌಶಲ್ಯ ಬೆಳೆಸುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2022-23ನೇ ಸಾಲಿಗೆ ಜಲಾನಯನ ಅಭಿವೃದ್ಧಿ ಇಲಾಖೆ,, ಕೈಮಗ್ಗ ಮತ್ತು ಜವಳಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನಾ ಇಲಾಖೆಗೆ ಸೇರಿ ಒಟ್ಟು 05 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲು ಗುರಿ ಹೊಂದಲಾಗಿದೆ. ಕೇಂದ್ರ ಪುರಸ್ಕೃತ 10 ಸಾವಿರ ರೈತ ಉತ್ಪಾದಕ ಸಂಸ್ಥೆ ರಚನೆ ಹಾಗೂ ಉತ್ತೇಜನ ಕಾರ್ಯಕ್ರಮದಡಿ ನಬಾರ್ಡ್ ಸಂಸ್ಥೆಯಿಂದ ಒಂದು ರೈತ ಉತ್ಪಾದಕ ಸಂಸ್ಥೆ ಸ್ಥಾಪಿಸಲು ಸಮಿತಿ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಕಳೆದ ವರ್ಷಗಳಲ್ಲಿ ಸ್ಥಾಪಿಸಲಾಗಿರುವ ಉತ್ಪಾದಕ ಸಂಸ್ಥೆಗಳು ಕಡ್ಡಾಯವಾಗಿ ಷೇರುದಾರರನ್ನು ಸಂಘಟಿಸಿ, ಷೇರು ಬಂಡವಾಳ ಹೆಚ್ಚಿಸಿ, ವ್ಯವಹಾರ ವಹಿವಾಟು ಅಭಿವೃದ್ಧಿ ಪಡಿಸಿ ಹೆಚ್ಚಿನ ಆದಾಯ ಪಡೆಯುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ಡಾ. ಲಲಿತಾ ರೆಡ್ಡಿ ಎಸ್.ಎಸ್., ಉಪ ಕೃಷಿ ನಿರ್ದೇಶಕು ಎಂ.ಸಿ.ವಿನುತ, ಲೀಡ್ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ , ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ