NEWSನಮ್ಮಜಿಲ್ಲೆ

ಕಾರಿನಲ್ಲಿ ಬಂದ ಕಿಡಿಗೇಡಿಗಳು ರಸ್ತೆಯಲ್ಲಿ ಕಾಸು ಚೆಲ್ಲಿ ಪರಾರಿ

ಆತಂಕಗೊಂಡ ಜನರು l ಪಾಲಿಕೆ ಅಧಿಕಾರಿಗಳು, ಪೊಲೀಸರಿಗೆ ಕರೆ ಮಾಡಿದರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಗರದ ಬೋಟಿ ಬಜಾರ್ ರಸ್ತೆಯಲ್ಲಿ ಕಾರಿನಲ್ಲಿ ಬಂದ ಅಪರಿಚಿತ ಕಿಡಿಗೇಡಿಗಳು ಚಿಲ್ಲರೆ ಕಾಸುಗಳನ್ನು ಬಿಸಾಡಿ ಹೋಗಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಇಂದು (ಏ.22) ಬೆಳಗ್ಗೆ ಕಾರಿನಲ್ಲಿ ಬಂದಿರುವ ಕಿಡಿಗೇಡಿಗಳು ರಸ್ತೆಯಲ್ಲಿ ಜನರ ಎದುರಿಗೇ  ಕಾಸುಗಳನ್ನು ಬಿಸಾಡಿ ಹೋಗಿದ್ದಾರೆ. ಇದರಿಂದ ಗಾಬರಿಗೊಂಡ ಜನರು ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರಿಗೆ ಫೋನ್‌ ಮಾಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳು ನಾಣ್ಯಗಳನ್ನು ಸ್ಯಾನಿಟೈಸರ್ ನಿಂದವಾಷ್‌ ಮಾಡಿ ಎತ್ತಿಕೊಂಡು ಹೋಗಿದ್ದಾರೆ.  ಜನತೆಯಲ್ಲಿ ಭೀತಿಯನ್ನು ಸೃಷ್ಟಿಸುವ ಸಲುವಾಗಿಯೇ ಕಿಡಿಗೇಡಿಗಳು ಈ ಕೃತ್ಯವನ್ನು ಎಸಗಿದ್ದಾರೆ.

ಜನತೆ  ಇಂಥ ಕಿಡಿಗೇಡಿಗಳು ಮಾಡುವ ಕೃತ್ಯಕ್ಕೆ ಭಯಪಡಬೇಡಿ ನಿಮ್ಮ ರಕ್ಷಣೆಗೆ ನಾವಿದ್ದೇವೆ. ಈ ರೀತಿ ಮತ್ತೆಲ್ಲಿಯಾದರೂ ಕಂಡು ಬಂದಲ್ಲಿ ನಮ್ಮ ಗಮನಕ್ಕೆ ತನ್ನಿ ಎಂದು ಪೊಲೀಸರು ಧೈರ್ಯ ತುಂಬಿದ್ದಾರೆ.

ಕೊರೊನಾ ವೈರಸ್ ಭೀತಿಯ ಬೆನ್ನಲ್ಲೇ ಈ ನಾಣ್ಯ ಚೆಲ್ಲಿರುವುದು ಜನರಲ್ಲಿ ಕೆಲಕಾಲ ಆತಂಕ ಹುಟ್ಟಿಸಿತ್ತು. ಇನ್ನು ಪೊಲೀಸರು ಹತ್ತಿರದಲ್ಲಿರುವ ಸಿಸಿ ಕ್ಯಾಮರಾ  ಫೂಟೇಜ್ ವೀಕ್ಷಿಸಿ, ಕಾರಿನಲ್ಲಿ ಬಂದವರಾರೆಂದು ಪತ್ತೆ ಹಚ್ಚಿ  ಅವರನ್ನು ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...