CrimeNEWS

ಕಾಳಿಕಾದೇವಿ ಜಾತ್ರಾ ರಥೋತ್ಸವ-15 ಜನರ ವಿರುದ್ಧ FIR

ಲಾಕ್ ಡೌನ್ ಆದೇಶ ಉಲ್ಲಂಘಿಸಿದ ಗೊಲ್ಲರಹಳ್ಳಿಯ ಜನತೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಕೋವಿಡ್-19 ಹಿನ್ನೆಲೆ ಈಗಾಗಲೇ ದೇಶದಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಕೋರೊನಾ ವೈರಸ್ ಸೊಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟುವ ಹಾಗೂ ಅದರ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕರ್ಫ್ಯೂ ಜಾರಿಗೊಳಿಸಲಾಗಿದ್ದರೂ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಳ್ಳಿಯಲ್ಲಿ ಆದೇಶ ಉಲ್ಲಂಘಿಸಿ ಕಾಳಿಕಾದೇವಿ ರಥೋತ್ಸವ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ 15ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಗೊಲ್ಲರಹಳ್ಳಿ ಗ್ರಾಮದ ಮುಖಂಡರಾದ ಕಾಳಪ್ಪ ಫಕ್ಕಿರಪ್ಪ(42),ಜಿ.ಬಿ.ನಾಗರಾಜ (50),ದಾಸರ ವೆಂಕಟೇಶ (46),ಕೋಮಾರಪ್ಪ(70),ಅನಂತಪ್ಪ ಡಿ.ಕೆ(58),ಸುರೇಶ ಮೈಲಪ್ಪ(36),ಕೆಂಚಪ್ಪ ಕಾಳಪ್ಪ(45),ಸಣ್ಣ ಹನುಮಂತಪ್ಪ(85),ನಾಗರಾಜ ಬನ್ನಿಯಪ್ಪ(40),ಈರಮ್ಮನವರ್ ಕೆಂಚಪ್ಪ(70),ಪುರ್ಲಿ ಕಾಳಶ್ರಪ್ಪ(40),ಸೋಮಪ್ಪ ಹುಚ್ಚಪ್ಪ(32),ಸುಣಗಾರ ದುರ್ಗೇಶ(37),ಗುರಿಕಾರ ಕಾಳಪ್ಪ ಮತ್ತು ಬಲವಂತಪ್ಪ ಎಂಬುವರ ವಿರುದ್ಧ   ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಸರಕಾರ ಹಾಗೂ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ 5ಜನಕ್ಕಿಂತ ಹೆಚ್ಚು ಜನ ಸೇರಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ ಪ್ರಾಣಕ್ಕೆ ಅಪಾಯಕಾರಿಯಾದ  ಕೊರೊನಾ ಸಾಂಕ್ರಮಿಕ ರೋಗ ಹರಡುತ್ತದೆ ಅಂತ ಗೊತ್ತಿದ್ದರೂ ನಿರ್ಲಕ್ಷ್ಯ ವಹಿಸಿ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ರಥವನ್ನು ಎಳೆದಿದ್ದಾರೆ.

6ರ ಸುಮಾರಿಗೆ ಎಳೆಯಬೇಕಾದ ತೇರನ್ನು ಮಧ್ಯಾಹ್ನ 3:30ಕ್ಕೆ ಎಳೆಯಲಾಗಿದೆ. ರಥ ಎಳೆಯುವ ಸಮಯದಲ್ಲಿ ಗ್ರಾಮದ ಜಿ.ಬಿ.ನಾಗರಾಜ ಇವರ ಕಾಲಿನ ಮೇಲೆ ರಥದ ಚಕ್ರ ಹಾಯ್ದು ಕಾಲಿಗೆ ರಕ್ತಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದಲ್ಲಿ ಒಂದು ದಿನ ಮುಂಚೆ ತೆರಳಿ ರಥೋತ್ಸವ ಜರುಗಿಸದಂತೆ ಹಾಗೂ ಕೊರೊನಾ ವೈರಸ್ ಕುರಿತು ತಿಳಿವಳಿಕೆ ನೀಡಿ ಬರಲಾಗಿದೆ. ಆದರೂ ಮಾ.29ರಂದು ಆದೇಶ ಉಲ್ಲಂಘಿಸಿ ರಥೋತ್ಸವ ಜರುಗಿಸಲಾಗಿದೆ ಎಂದು ಡಣಾಯನಕೇರೆ ಪಿಡಿಒ ಜಿಲಾನ್ ರಜಾಕ್ ಸಾಬ್ ಅವರು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ