NEWSಕೃಷಿನಮ್ಮರಾಜ್ಯ

ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಿ

ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ 

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಲಾಕ್‍ಡೌನ್ ಇರುವ ಪ್ರಸ್ತುತ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರದೆ ಕೃಷಿಕರಿಗೆ ಅನುಕೂಲ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19ರ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ, ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ ಚಟುವಟಿಕೆ ಸಂಬಂಧ ಜನಪ್ರತಿನಿಧಿಗಳು, ರೈತ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಇತರೆ ಪರಿಕರಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಜಿಲ್ಲೆಗೆ ಅಗತ್ಯವಿರುವ ಬೇಡಿಕೆಗೆ ಅನುಗುಣವಾಗಿ ಮುಂಚಿತವಾಗಿಯೇ ಕೃಷಿ ಇಲಾಖೆ ಅಧಿಕಾರಿಗಳು ಪಟ್ಟಿ ಸಲ್ಲಿಸಬೇಕು. ರಸಗೊಬ್ಬರ ಇತರೆ ಕೃಷಿ ಸಂಬಂಧಿತ ಸಾಮಗ್ರಿಗಳನ್ನು ಮಾರಾಟ ಮಾಡುವವರು ಕೃತಕ ಅಭಾವ ಸೃಷ್ಠಿಸಬಾರದು. ಕೃಷಿ ಅವಶ್ಯಕ ವಸ್ತುಗಳಿಗೆ ಕೃತಕ ಅಭಾವ ಸೃಷ್ಠಿಸುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದರು.

ಶಾಸಕ ಆರ್. ನರೇಂದ್ರ ಮಾತನಾಡಿ ಎ.ಪಿ.ಎಂ.ಸಿ ಯಲ್ಲಿ ಹಣ್ಣು, ತರಕಾರಿ ಮಾರಾಟ ವಹಿವಾಟಿಗೆ ಹೆಚ್ಚಿನ ಕಾಲಾವಧಿ ನೀಡುತ್ತಿಲ್ಲ. ವಹಿವಾಟು ಬೇಗ ಮುಗಿಸುವಂತೆ ಒತ್ತಡ ಹಾಕಲಾಗುತ್ತಿದೆ. ಇದರಿಂದ ರೈತರಿಗೆ ತೊಂದರೆಯಾಗಿದೆ. ಹೂ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಸಚಿವರ ಗಮನ ಸೆಳೆದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸಹ ಮಾತನಾಡಿ ಎಲ್ಲರಿಗೂ ಮುಕ್ತವಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಬೇಕು ಎಂದರು. ಶಾಸಕ ಎನ್. ಮಹೇಶ್ ಮಾತನಾಡಿ ರೈತರ ಖಾತೆಗೆ ಸರ್ಕಾರ ಜಮೆ ಮಾಡುತ್ತಿರುವ ಅರ್ಥಿಕ ನೆರವು ಅನುಕೂಲವಾಗುತ್ತಿದೆ. ಇದನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬಗ್ಗೆ ದೂರು ಬರುತ್ತಿರುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು ಎಂದರು.

ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಸಹ ಮಾತನಾಡಿ ಪ್ರಸ್ತುತ ಮಳೆಯಾಗಿದೆ. ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅನಾನುಕೂಲವಾಗದಂತೆ ಬಿತ್ತನೆ ಬೀಜ, ರಸಗೊಬ್ಬರ ಲಭ್ಯವಾಗಬೇಕು. ಕೊರತೆ ಕಾಡದಂತೆ ಅಗತ್ಯಕ್ಕೆ ಅನುಗುಣವಾಗಿ ಪೂರೈಸಬೇಕೆಂದರು.

ಹೂ ಬೆಳೆಗಾರರ ಕಷ್ಟದ ಪರಿಸ್ಥಿತಿಯ ಅರಿವು ಸರ್ಕಾರಕ್ಕಿದೆ. ಮುಖ್ಯಮಂತ್ರಿಯವರು ಈಗಾಗಲೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಈ ಸಂಬಂಧ ಅನುಕೂಲ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಒಟ್ಟಾರೆ ಪ್ರಸ್ತುತ ಸಂದರ್ಭದಲ್ಲಿ ಯಾರು ಸಹ ದೃತಿಗೆಡಬಾರದು. ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಸರ್ಕಾರ ರೈತರೊಂದಿಗಿದೆ. ಕೃಷಿಕರಿಗೆ ನೆರವಾಗುವ ನಿಟ್ಟಿನಲ್ಲಿ ಮುಂದಾಗಲಿದೆ ಎಂದು ಸಚಿವರು ಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾತನಾಡಿ ಕೃಷಿಗೆ ಪೂರಕವಾಗಿರುವ ಪರಿಕರ, ಗೊಬ್ಬರ, ಬಿತ್ತನೆ ಬೀಜ ವಿತರಣೆಗೆ ಅನುಕೂಲ ಕಲ್ಪಿಸಲಾಗಿದೆ. ರೈತ ಸಂಪರ್ಕ ಕೇಂದ್ರಗಳು ಕೃಷಿಕರಿಗೆ ನೆರವಾಗುತ್ತಿವೆ. ಕೃಷಿ ಉತ್ಪನ್ನಗಳ ಸಾಗಣೆ ವಾಹನಗಳಿಗೆ ಯಾವುದೇ ತೊಂದರೆ ನೀಡಿಲ್ಲ. ಅಗತ್ಯ ವಸ್ತುಗಳ ಕಾಯ್ದೆಯಡಿ ಹಣ್ಣು, ತರಕಾರಿ ಪೂರೈಕೆಗೆ ಸುಗಮ ವ್ಯವಸ್ಥೆ ಮಾಡಲಾಗಿದೆ ಎಂದರು.

ತೆಂಗು ಬೆಳೆಗಾರರ ಸಂಘದಿಂದ ಕೋವಿಡ್-19 ತಡೆ ಕಾರ್ಯಕ್ರವiಗಳ ನೆರವಿಗಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 1 ಲಕ್ಷ ರೂ. ಚೆಕ್‍ನ್ನು ಕೃಷಿ ಸಚಿವರ ಮೂಲಕ ಹಸ್ತಾಂತರಿಸಲಾಯಿತು.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ