NEWSಕೃಷಿನಮ್ಮರಾಜ್ಯ

ಕೃಷಿ ಚಟುವಟಿಗೆ ಅಡ್ಡಿ ಪಡಿಸಿದರೆ ಡಿಸಿಗಳೇ ಕ್ರಮ ಜರುಗಿಸುತ್ತಾರೆ

ಹಾಸನದಲ್ಲಿ ಸಹಕಾರ ಸಚಿವ ಸೋಮಶೇಖರ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರಿಗೆ ಅಗತ್ಯವಿರುವ ಆಲೂಗಡ್ಡೆ ಹಾಗೂ ಇತರ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ಸಾಕಷ್ಟು ದಾಸ್ತಾನು ಇದ್ದು ಯಾವುದೇ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್  ತಿಳಿಸಿದ್ದಾರೆ.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕೃಷಿ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಯಾವುದೇ ಅಡಚಣೆ ಇಲ್ಲ. ಯಾರಾದರು ಅಡ್ಡಿಪಡಿಸಿದರೆ ಅದನ್ನು ಸರಿಪಡಿಸಲು ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದರು.

ಹಾಸನದಲ್ಲಿ ಕೋಲ್ಡ್ ಸ್ಟೋರೇಜ್ ಅವಶ್ಯಕತೆ ಇದ್ದು ಈ ಬಗ್ಗೆ ಶಾಸಕರು ಕೂಡ ಮನವಿ ಮಾಡಿದ್ದಾರೆ, ಅದರಂತೆ ಸೂಕ್ತ ಜಾಗ ಗುರುತಿಸಿ ಪ್ರಸ್ಥಾವನೆ ಸಲ್ಲಿಸಿದ್ದಾರೆ ಎ.ಪಿ.ಎಂ.ಸಿ.ಯಲ್ಲಿ ಶೈಥ್ಯಾಗಾರ ಸ್ಥಾಪನೆಗೆ ಅಗತ್ಯ ಸೌಲಭ್ಯ ಮಾಡಿಸಿಕೊಡಲಾಗುತ್ತದೆ ಎಂದು ಸಚಿವರು ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆಗೆ ಬೇಕಾಗಿರುವ ಸವಲತ್ತುಗಳನ್ನು ಇಲಾಖೆ ವತಿಯಿಂದ ಒದಗಿಸಲಾಗುತ್ತದೆ ಹಾಗೂ ಹಣಕಾಸಿನ ಸಮಸ್ಯೆ ಇದ್ದರೆ ಅದನ್ನೂ ಬಿಡುಗಡೆ ಮಾಡಲಾಗುವುದು ಎಂದು  ತಿಳಿಸಿದರು.

ಕೃಷಿ ಚಟುವಟಿಕೆಗಳಿಗೆ ಬೇಕಾದ ಸಲಕರಣೆಗಳು ಹಾಗೂ ದಿನಸಿ ಮತ್ತು ತರಕಾರಿಗಳನ್ನು ವರ್ತಕರುಗಳು ಕಡಿಮೆ ಬೆಲೆಗೆ ಕೊಂಡುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೋಮಶೇಖರ್ ಹೇಳಿದರು.

ರೈತರು ಬೆಳೆದ ತರಕಾರಿ ಹಣ್ಣುಗಳನ್ನು ಎ.ಪಿ.ಎಂ.ಸಿ.ಗೆ ಸಾಗಿಸುವಾಗ ಚೆಕ್ ಪೋಸ್ಟ್‍ಗಳಲ್ಲಿ ಯಾವುದಾದರು ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳು ಹೈಪವರ್ ಕಮಿಟಿ ರಚನೆ ಮಾಡಿದ್ದು ರೈತರು ಬೆಳೆದ ತರಕಾರಿಗಳನ್ನು ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಬೇಕಾದರೂ ಮಾರಬಹುದು ಎಂದು ತಿಳಿಸಿದ್ದಾರೆ. ಹಲವಾರು ಕಡೆ ರೈತರು ಸಾಗಾಣೆ ಮಾಡಲಾಗುತ್ತಿಲ್ಲ, ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದರೆ ನಷ್ಟವಾಗುತ್ತಿದೆ ಎಂದು ಹಿಂಜರಿಯುತ್ತಿದ್ದಾರೆ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಮಾರ್ಗದರ್ಶನ ಹಾಗೂ ಸಹಕಾರ ನೀಡಬೇಕು ಎಂದರು.

ಶಾಸಕ ಪ್ರೀತಂ ಜೆ ಗೌಡ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರಿನಿವಾಸ್ ಗೌಡ, ಉಪ ವಿಭಾಗಾಧಿಕಾರಿ ಡಾ.ನವೀನ್ ಭಟ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
KSRTC ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದಿಂದ SSLC, PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ನೀಟ್ ವ್ಯವಸ್ಥೆ ಕೊನೆಯಾದರೆ ಮಾತ್ರ ರಾಜ್ಯದ ಮಕ್ಕಳಿಗೆ ನ್ಯಾಯ ಸಿಗಲು ಸಾಧ್ಯ : ಮೋಹನ್ ದಾಸರಿ ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು?