ಕೇಂದ್ರದಿಂದ ನರೇಗಾಕ್ಕೆ 1861 ಕೋಟಿ ರೂ.ಬಿಡುಗಡೆ
ದಿನಗೂಲಿ ಕಾರ್ಮಿಕರ ಕೂಲಿಹಣವನ್ನು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ
ಬೆಂಗಳೂರು: ಕೇಂದ್ರ ಸರ್ಕಾರವು 2020-21 ನೇ ಸಾಲಿನಲ್ಲಿ ಮೊದಲನೇ ಕಂತಿನ ಕೂಲಿ ವೆಚ್ಚಕ್ಕಾಗಿ ರೂ. 1039.97 ಕೋಟಿ ಹಾಗೂ ಸಾಮಗ್ರಿ ವೆಚ್ಚಕ್ಕಾಗಿ ರೂ. 821.62 ಕೋಟಿ ರೂ.ಗಳನ್ನು ಏಪ್ರಿಲ್ 5 ರಂದು ಮಂಜೂರು ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಇಂದು ಅವರು ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 2020-21 ನೇ ಸಾಲಿಗೆ ಕೇಂದ್ರ ಸರ್ಕಾರವು 13 ಕೋಟಿ ಮಾನವ ದಿನಗಳ ಸೃಜನೆ ಮಾಡಲು ಗುರಿ ನಿಗದಿಪಡಿಸಲಾಗಿದೆ. ಕೂಲಿ ದರವನ್ನು ದಿನಕ್ಕೆ ರೂ. 249 ಗಳಿಂದ ರೂ. 275 ಗಳಿಗೆ ಹೆಚ್ಚಿಸಿದೆ ಎಂದು ಹೇಳಿದರು.
ಪ್ರಸ್ತುತ ಸಾಲಿನಲ್ಲಿ 6316 ಕೋಟಿ ರೂ. ಅನುದಾನ ಲಭ್ಯವಾಗುವುದು. ಇದರಲ್ಲಿ ರೂ. 3575 ಕೋಟಿ ಕೂಲಿ ವೆಚ್ಚಕ್ಕೆ ಲಭ್ಯವಿದೆ. ಒಟ್ಟಾರೆ ಈ ಸಾಲಿಗೆ ಮೊದಲನೇ ಕಂತಿನಲ್ಲಿ ಕೇಂದ್ರ ಸರ್ಕಾರವು ರೂ. 1961.59 ಕೋಟಿ ಗಳನ್ನು ಮಂಜೂರು ಮಾಡಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಬಾಕಿ ಉಳಿಸಿಕೊಂಡಿದ್ದ ಮುಂಗಡ ಹಣ ರೂ. 81.80 ಕೋಟಿಗಳನ್ನು ಬಿಡುಗಡೆಗೆ ಮಂಜೂರು ಮಾಡಿದೆ.
ಕೂಲಿ ಬಾಬ್ತು ರೂ. 322.86 ಕೋಟಿ ಬ್ಯಾಂಕಿನಲ್ಲಿ ಪಾವತಿಗೆ ಬಾಕಿ ಉಳಿದಿದ್ದು, ಈ ಹಣವನ್ನು ಈ ಸಾಲಿಗೆ ಬಿಡುಗಡೆ ಮಾಡಿರುವ ರೂ. 1039.97 ಕೋಟಿ ಕೂಲಿ ಅನುದಾನದಿಂದ ಪಾವತಿಸಲಾಗುವುದು. ಪಾವತಿ ನಂತರ ರೂ. 717.00 ಕೋಟಿ ಅನುದಾನವು ಉಳಿಯುವುದು. ಯೋಜನೆಯ ಅನುಷ್ಠಾನಕ್ಕೆ ಅನುದಾನದ ಕೊರತೆ ಈ ಹಂತದಲ್ಲಿ ಇರುವುದಿಲ್ಲ.
ಕರೋನ ಲಾಕ್‍ಡೌನ್ ಕಾರಣದಿಂದಾಗಿ ನಗರ ಪ್ರದೇಶಗಳಾದ ಗ್ರಾಮೀಣ ಪ್ರದೇಶಗಳಿಗೆ ಕೂಲಿಕಾರರು ವ್ಯಾಪಕವಾಗಿ ವಲಸೆ ಬಂದಿದ್ದು, ಅವರಿಗೆ ವಿಳಂಬವಿಲ್ಲದೆ ಯೋಜನೆಯಡಿ ಕೆಲಸ ಒದಗಿಸಲು ಸೂಚಿಸಲಾಗಿದೆ. ವೈಯುಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ 5 ಜನರಿಗಿಂತ ಕಡಿಮೆ ಕೂಲಿಕಾರರ ಗುಂಪುಗಳನ್ನು ಮಾಡಿ ಪರಸ್ಪರ ಸಾಕಷ್ಟು ಅಂತರವಿರುವಂತೆ ಕೆಲಸಕ್ಕೆ ನಿಯೋಜಿಸಲು ಗ್ರಾಮಪಂಚಾಯತಿಗಳಿಗೆ ತಿಳಿಸಲಾಗಿದೆ.
ಗ್ರಾಮೀಣ ನೈರ್ಮಲ್ಯ, ಕೃಷಿ, ಅರಣ್ಯ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ (ಕುರಿ/ದನದ ಶೆಡ್) ಅಂತಹ ವೈಯಕ್ತಿಕ ಕಾಮಗಾಗಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ.
ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ಕೈ ತೊಳೆಯಲು ನೀರು ಹಾಗೂ ಸಾಬೂನು, ನೆರಳು, ಸ್ಯಾನಿಟೈಸರ್ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಕೂಲಿ ಕಾರ್ಮಿಕರಲ್ಲಿ ನೆಗಡಿ, ಕೆಮ್ಮು, ಜ್ವರ ಇತ್ಯಾದಿ ಅನಾರೋಗ್ಯ ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಯೋಜನೆಯ ಕೂಲಿಕಾರರನ್ನು “The Building and other Construction workers (Regulation of Employment and conditions of service) Act 1996 ನೋಂದಣಿ ಮಾಡಲು ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
Related
You Might Also Like
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ
ನ್ಯೂಡೆಲ್ಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ನಿಧನಹೊಂದಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ವಯೋಸಹಜ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್
ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇಗೆ ಕ್ರಮ ಬೆಂ.ಗ್ರಾ.: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ...
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು
ಮುಷ್ಕರಕ್ಕೆ ಕರೆ ಕೊಟ್ಟು ನಿದ್ದೆಕೂಡ ಮಾಡಲಾಗದ ಪರಿಸ್ಥಿತಿ ತಲುಪಿದ ಹೋರಾಟಗಾರರು ಜಂಟಿ ಪದಾಧಿಕಾರಿಗಳು ಡಿಪೋಗಳಿಗೆ ಹೋದರೂ ಮಾತನಾಡಿಸದ ನೌಕರರು ನೌಕರರ ಬೇಡಿಕೆಗೆ ವಿರುದ್ಧವಾದ ಬೇಡಿಕೆ ಇಟ್ಟು ಮುಷ್ಕರಕ್ಕೆ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27, 2024 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ...
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ...
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋಣ
ಬೆಂಗಳೂರು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಬಂದು ಉದ್ಭವವಾಗುವ ಈ ಮಹಾನುಭಾವ ತಮ್ಮ ಸ್ವಾರ್ಥ ಹಾಗೂ ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಹಾಗೂ ಸಾರಿಗೆ ನಿಗಮದ ಆಡಳಿತ ಮಂಡಳಿಯ ಮುಂದೆ...
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದಕ್ಕೆ ಕರೆ ಕೊಡುವುದು...
BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು...
ಡಿ.31 ರಂದು ಇಳಕಲ್ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್ ಸಮಾವೇಶ
ಬಾಗಲಕೋಟೆ: ರಾಷ್ಟ್ರೀಯ ಸಂಘರ್ಷ ಸಮಿತಿಯ NACಯ ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಒದೇ ಡಿ.31 ರಂದು ಇಳಕಲ್ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್...