Please assign a menu to the primary menu location under menu

NEWSಕೃಷಿನಮ್ಮರಾಜ್ಯರಾಜಕೀಯ

 ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  

 ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೇಕಾರರಿಗೆ ನೇಕಾರಿಕೆ ಉದ್ದೇಶಕ್ಕಾಗಿ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ,  ರಾಷ್ಟ್ರೀಕೃತ ಬ್ಯಾಂಕುಗಳಿಂದ ನೀಡಲಾದ ಸಾಲದ ಕುರಿತಾಗಿ ಜಿಲ್ಲಾವಾರು ಮಾಹಿತಿ ಪಡೆದು ಸಾಲಮನ್ನಾ ಮಾಡಲು ಸರ್ಕಾರ ಕ್ರವಹಿಸಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಎಚ್.ಎಂ. ರೇವಣ್ಣ (ವಿಧಾನ ಸಭೆಯಿಂದ ಚುನಾಯಿತರಾದವರು)  ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2019-20ನೇ ಸಾಲಿಗೆ ಸರ್ಕಾರದಿಂದ ನೇಕಾರರ ಸಾಲದ ಮೇಲೆ 227.86 ಲಕ್ಷ ರೂ.ಗಳ ಬಡ್ಡಿ ಮನ್ನಾ ಮಾಡಲಾಗಿದೆ. 9765 ಫಲಾನುಭವಿಗಳಿಗೆ ಸಾಲದ ಮೇಲಿನ ಬಡ್ಡಿ ಮನ್ನಾ ಅನುಕೂಲವಾಗಿದೆ ಎಂದು   ತಿಳಿಸಿದರು.

ಜವಳಿ ಉದ್ಯಮವನ್ನು ಉತ್ತೇಜಿಸುವ ಸಂಬಂಧ ಬೇರೆ ಬೇರೆ ರಾಜ್ಯಗಳು ರೂಪಿಸಿಕೊಂಡಿರುವ ಜವಳಿ ನೀತಿಯನ್ನು ಅಧ್ಯಯನ ಮಾಡಿ  ಹೊಸ ಟೆಕ್ಸ್‍ಟೈಲ್ ಪಾಲಿಸಿ ಜಾರಿಗೆ ತರಲಾಗುವುದು. ಜವಳಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪನೆ ಮಾಡಲು ಕ್ರಮ ವಹಿಸಲಾಗುವುದು. ಜವಳಿ ಉದ್ಯಮದ ಮೇಲೆ ಹೂಡಿಕೆ ಮಾಡಿದ ಬಂಡವಾಳದ ಮೇಲೆ ಶೇಕಡ 30 ರಷ್ಟು ಸಹಾಯಧನ ನೀಡಲು ಕ್ರಮವಹಿಸಲಾಗುವುದು ಅಲ್ಲದೆ ನೇಕಾರರಿಗೆ ಪ್ರತಿ ತಿಂಗಳು ಒಂದು ಸಾವಿರದಂತೆ 5ವರ್ಷ ನೀಡಲು ಚಿಂತಿಸಲಾಗಿದೆ ಎಂದು  ತಿಳಿಸಿದರು.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ