ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿ
ಕರ್ನಾಟಕದಲ್ಲಿ 55ಕ್ಕೇರಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ: ಆತಂಕ ವ್ಯಕ್ತಪಡಿಸಿದ ಸಚಿವ ಸುಧಾಕರ್
ಮೈಸೂರು: ವಿಶ್ವಮಾರಿ ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಜೀವ ಬಲಿಯಾಗಿದ್ದು, ಇದು ಎರಡನೇ ಸಾವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನಲ್ಲಿ ಓರ್ವ ವೃದ್ಧೆ ಇಂದು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆಯನ್ನು ಜಾಗರೂಕವಾಗಿ ಮಾಡಲಾಗಿದೆ.
ಇನ್ನು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ಹರಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆ ಆದಂತಾಗಿದೆ.
ರಾಜ್ಜದಲ್ಲಿ ದಿನದಿಂದ ದಿನಕ್ಕೆ ಸೋಂಕು ಪೀಡಿತರಸಂಖ್ಯೆ ಹೆಚ್ಚಾಗುತಿದ್ದು ಇಲ್ಲಿಯವರೆಗೆ 55 ಜನರಿಗೆ ಸೋಂಕು ತಗುಲಿದೆ. ಆದರೂ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು ಜನರಲ್ಲಿ ಇನ್ನಷ್ಟು ಭೀತಿಯನ್ನು ಉಂಟುಮಾಡಿದೆ ಮತ್ತೊಂದೆಡೆ ಜನರು ಗುಂಪು ಗುಂಪಾಗಿ ಸೇರುವ ಮೂಲಕ ವೈರಸ್‌ಅನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.
ಇನ್ನಾದರೂ ಈ ಮಹಾಮಾರಿಯನ್ನು ದೂರವಿರಿಸಲು ಪ್ರತಿಯೊಬ್ಬರೂ ಎಚ್ಚೆತ್ತುಕೊಳ್ಳಬೇಕಿದೆ ಜತೆಗೆ ತಮ್ಮ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಲ್ಲೂ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಜಾಗೃತಿ ಮೂಡಿಸಬೆಕಿದೆ.
ಆತಂಕ ಮೂಡಿಸಿದ ಸಚಿವ ಸುಧಾಕರ್ ಹೇಳಿಕೆ
ಕಳೆದ ಮೂರು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಹರಡುವ ವೇಗ ಹೆಚ್ಚಾಗಿದೆ. ಈಗ ನಮಗೂ ಆತಂಕ ಶುರುವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ನೀಡಿರುವ ಹೇಳಿಕೆ ಆತಂಕ ಸೃಷ್ಟಿಸುವಂತಿದೆ.
10 ವರ್ಷದ ಒಳಗಿನ ಮಕ್ಕಳು ಹಾಗೂ 60 ದಾಟಿದವರಲ್ಲಿ ಹೆಚ್ಚಿನ ಸೋಂಕು ಕಾಣುತ್ತಿದೆ. 60 ವರ್ಷ ಮೇಲ್ಪಟ್ಟ ಹಿರಿಯರು ಮನೆಯಿಂದ ಹೊರ ಬಾರದಂತೆ ನೋಡಿಕೊಳ್ಳಬೇಕಿದೆ. ಸೋಂಕಿನ ಪ್ರಮಾಣ ಇನ್ನೂ ಎಷ್ಟಾಗುತ್ತೋ ಎಂದು ಆತಂಕವನ್ನು ಸಚಿವರು ಹೊರ ಹಾಕಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 55ಕ್ಕೆ ಏರಿದೆ. ಇಬ್ಬರು ಮೃತರಾಗಿದ್ದಾರೆ. ಗೌರಿಬಿದನೂರಿನಲ್ಲಿ ಒಂದು ಸಾವು ಆಗಿದೆ, ಅದನ್ನ ನಾವು ಕೋವಿಡ್-19, ಅಂತಾನೇ ಭಾವಿಸಿದ್ದೇವೆ. ಅಂತಿಮ ರಿಪೋರ್ಟ್ ಬಾರದಿದ್ದರು ಕೆಲವು ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಹರಡುತ್ತಿರುವುದನ್ನು ನೋಡಿ ಇಟಲಿ ಸರ್ಕಾರ ಕೈ ಚೆಲ್ಲಿ ಕುಳಿತಿದೆ. ರಾಜ್ಯದಲ್ಲೂ ಏರಿಕೆಯಾಗುತ್ತಿದೆ. 1.25 ಲಕ್ಷದಷ್ಟು ಅಂತಾರಾಷ್ಟ್ರೀಯ ವ್ಯಕ್ತಿಗಳನ್ನ ಕ್ವಾರಂಟೈನ್ ಮಾಡ್ತಿದ್ದೇವೆ. ಪತ್ತೆ, ಪರೀಕ್ಷೆ ಮತ್ತು ಚಿಕಿತ್ಸೆ ರೂಪದಲ್ಲಿ ಕಾರ್ಯ ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.
Related
You Might Also Like
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು
ಮುಷ್ಕರಕ್ಕೆ ಕರೆ ಕೊಟ್ಟು ನಿದ್ದೆಕೂಡ ಮಾಡಲಾಗದ ಪರಿಸ್ಥಿತಿ ತಲುಪಿದ ಹೋರಾಟಗಾರರು ಜಂಟಿ ಪದಾಧಿಕಾರಿಗಳು ಡಿಪೋಗಳಿಗೆ ಹೋದರೂ ಮಾತನಾಡಿಸದ ನೌಕರರು ನೌಕರರ ಬೇಡಿಕೆಗೆ ವಿರುದ್ಧವಾದ ಬೇಡಿಕೆ ಇಟ್ಟು ಮುಷ್ಕರಕ್ಕೆ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27, 2024 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ...
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ...
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋಣ
ಬೆಂಗಳೂರು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಬಂದು ಉದ್ಭವವಾಗುವ ಈ ಮಹಾನುಭಾವ ತಮ್ಮ ಸ್ವಾರ್ಥ ಹಾಗೂ ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಹಾಗೂ ಸಾರಿಗೆ ನಿಗಮದ ಆಡಳಿತ ಮಂಡಳಿಯ ಮುಂದೆ...
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದಕ್ಕೆ ಕರೆ ಕೊಡುವುದು...
BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು...
ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್ ಸಮಾವೇಶ
ಬಾಗಲಕೋಟೆ: ರಾಷ್ಟ್ರೀಯ ಸಂಘರ್ಷ ಸಮಿತಿಯ NACಯ ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಒದೇ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್...
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...