NEWSಆರೋಗ್ಯದೇಶ-ವಿದೇಶ

ಕೊರೊನಾ ಅಟ್ಟಹಾಸಕ್ಕೆ ದೇಶದಲ್ಲಿ 7 ಸಾವು

ಕೊರೊನಾ ವೈರಸ್‌ ನಿಯಂತ್ರಣಕ್ಕೆ ಕ್ವಾರಟೈನ್‌ ಒಂದೇ ಸದ್ಯದ ಪರಿಹಾರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ ಪ್ರಪಂಚವನ್ನೇ ಎಡೆಬಿಡದೆ ಕಾಡುತ್ತಿದರುವ ಕೊರೊನಾ ಸೋಂಕಿಗೆ ಭಾರತದಲ್ಲಿ ಇದುವರೆಗೆಗೆ 7 ಬಲಿಯಾಗಿವೆ. ಭಾನುವಾರ ಬೆಳಗ್ಗೆ ಮಹಾರಾಷ್ಟ್ರದಲ್ಲಿ, ಮಧ್ಯಾಹ್ನದ ವೇಳೆಗೆ ಬಿಹಾರ ಮತ್ತು ಗುಜರಾತ್‌ನಲ್ಲಿ ಒಬ್ಬೊಬ್ಬರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಮುಂಬೈನಲ್ಲಿ 65 ವರ್ಷದ ಮಹಿಳೆ, ಬಿಹಾರದ ಪಾಟ್ನಾದಲ್ಲಿ 63ವರ್ಷದ ಮತ್ತು ಗುಜರಾತಿನ ಸೂರತ್ ಮೂಲದ 67ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಇವರು ಕಳೆದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಕೊರೋನಾ ಶಂಕಿತರನ್ನು ಆಸ್ಪತ್ರೆಯಲ್ಲಿರಿಸಿ ನಿಗಾ ವಹಿಸಲು ಸಾಧ್ಯವಾಗದ ಕಾರಣ ಅವರನ್ನು ಮನೆಯಲ್ಲೇ ಇರಿಸಿ, 14 ದಿನಗಳ ಕಾಲ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಮನೆಯಲ್ಲೇ ಸ್ವನಿರ್ಬಂಧಕ್ಕೆ ಆದೇಶಿಸಲಾಗಿರುವ ಕೊರೋನಾ ಶಂಕಿತರ ಕೈ ಮೇಲೆ ಕ್ವಾರಂಟೈನ್ ಸ್ಟಾಂಪ್ ಹಾಕಲು ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾ.22 ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಒಂದು ದಿನ ಜನಸಂಪರ್ಕ ತಡೆಯುವ ಮೂಲಕ ವೈರಸ್‌ ಹರಡುವಿಕೆ ತಡೆಯುವುದು ಜನತಾ ಕರ್ಫ್ಯೂ ಉದ್ದೇಶವಾಗಿತ್ತು.  ಪ್ರಧಾನ ಮಂತ್ರಿಯ ಕರೆಗೆ ಇಡೀ ದೇಶವೇ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದೇಶದಲ್ಲಿ ಇಂದಿನವರೆಗೆ (ಮಾ22) ಮೃತಪಟ್ಟರು

ನ್ಯೂಡೆಲ್ಲಿ–  1

ಕರ್ನಾಟಕ– 1

ಮಹಾರಾಷ್ಟ್ರ– 2

ಪಂಜಾಬ್ –     1

ಗುಜರಾತ್ –    1

ಬಿಹಾರ್–     1

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...