NEWS

ಕೊರೊನಾ ಚಿಕಿತ್ಸೆಗೆ  2 ಸಾವಿರ ವೆಂಟಿಲೆಟರ್‌ಗಳ ಖರೀದಿ

ಕೋವಿಡ್-19 ಚಿಕಿತ್ಸೆಗೆ ಗುರುತಿಸಲಾದ ಆಸ್ಪತ್ರೆಗಳಲ್ಲಿ ತುರ್ತು ವ್ಯವಸ್ಥೆ ಕಲ್ಪಿಸಿ : ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಕೋವಿಡ್-19 ಸೊಂಕಿತರ ಚಿಕಿತ್ಸೆ ಪ್ರಮಾಣ ಜಿಲ್ಲೆಯಲ್ಲಿ ಹೆಚ್ಚಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆ, ವಿಮ್ಸ್ ಮತ್ತು ಟ್ರಾಮಾಕೇರ್ ಸೆಂಟರ್‌ಗಳನ್ನು ಗುರುತಿಸಲಾಗಿದ್ದು, ಈ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೇರಿದಂತೆ ಇನ್ನಿತರ ಅಗತ್ಯ ವ್ಯವಸ್ಥೆಗಳನ್ನು ತುರ್ತಾಗಿ ಕೈಗೊಳ್ಳುವಂತೆ ಆರೋಗ್ಯ  ಸಚಿವ ಬಿ.ಶ್ರೀರಾಮುಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸುದೈವದಿಂದ ಇದುವರೆಗೆ  ಕೋವಿಡ್-19 ಸೊಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಅನೇಕ ಸಭೆಗಳನ್ನು ನಡೆಸುವುದರ ಮುಖಾಂತರ ಎಲ್ಲ ಸಿದ್ಧತೆಗಳನ್ನು ಬಳ್ಳಾರಿ ಜಿಲ್ಲಾಡಳಿತ ಕೈಗೊಂಡಿರುವುದು ಪ್ರಶಂಸನೀಯ ಎಂದು ಹೇಳಿದರು.

ಖಾಸಗಿ ವೈದ್ಯರ,ಆಸ್ಪತ್ರೆಗಳ ಸಹಕಾರ ಕೋರಿದ ಸಚಿವರು

ಜಿಲ್ಲೆಯಲ್ಲಿರುವ ಎಲ್ಲ ಖಾಸಗಿ ವೈದ್ಯರು ಹಾಗೂ ಆಸ್ಪತ್ರೆಗಳು ಕೋವಿಡ್-19 ವಿರುದ್ಧ ಸರಕಾರ ನಡೆಸುತ್ತಿರುವ ಈ ಸವಾಲಿನ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದ ಸಚಿವ ಶ್ರೀರಾಮುಲು, ಕೋವಿಡ್-19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯೊಂದು ಮೀಸಲಿರಿಸುವ ಮತ್ತು ಖಾಸಗಿ ವೈದ್ಯರು ಈ ಹೋರಾಟದಲ್ಲಿ ಸಹಕರಿಸುವಂತೆ ಅವರು ಮನವಿ ಮಾಡಿದರು. ಇದಕ್ಕೆ ಐಎಂಎ ಜಿಲ್ಲಾಧ್ಯಕ್ಷ ಡಾ.ಅರುಣ ಹಾಗೂ ಡಾ.ಬಿ.ಕೆ.ಎಸ್.ಸುಂದರ್ ಅವರು ಈ ಹೋರಾಟದಲ್ಲಿ ನಮ್ಮ ಸಹಕಾರ ಸದಾ ಇರುತ್ತದೆ ಎಂದು ಸಮ್ಮತಿ ವ್ಯಕ್ತಪಡಿಸಿದರು.

2ಸಾವಿರ ವೆಂಟಿಲೆಟರ್‌ಗಳು

ಕೋವಿಡ್-19 ಹಿನ್ನೆಲೆಯಲ್ಲಿ 2 ಸಾವಿರ ವೆಂಟಿಲೆಟರ್‌ಗಳನ್ನು ಖರೀದಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಶೀಘ್ರದಲ್ಲಿ ಅವುಗಳನ್ನು ವಿದೇಶದಿಂದ ಖರೀದಿಸಿ ತರಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರಕಾರವು ವೆಂಟಿಲೆಟರ್‍ಗಳನ್ನು ಖರೀದಿಸಿ ನೀಡಲಾಗುವುದು ಎಂದು ತಿಳಿಸಿದೆ ಮತ್ತು ಈ ಕೋವಿಡ್-19 ವಿರುದ್ಧದ ಹೋರಾಟಕ್ಕೆ ಸಾಕಷ್ಟು ಪ್ರಮಾಣದಲ್ಲಿ ಹಣ ಮೀಸಲಿರಿಸಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಕೋವಿಡ್-19 ಚಿಕಿತ್ಸಗೆ ಸಂಬಂಧಿಸಿದಂತೆ ವೆಂಟಿಲೆಟರ್ ಸೇರಿದಂತೆ ಅಗತ್ಯ ಪರಿಕರಗಳನ್ನು ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಟಾಸ್ಕ್‍ಪೋರ್ಸ್ ಸಮಿತಿ ಸಭೆಯಲ್ಲಿ ಸೂಚಿಸಿದ್ದಾರೆ ಎಂದು ವಿವರಿಸಿದ ಅವರು, ದೇಶಕ್ಕೆ ಕೋವಿಡ್-19 ರೂಪದಲ್ಲಿ ಸಂಕಷ್ಟದ ಸ್ಥಿತಿ ಎದುರಾಗಿದ್ದು, ಈ ಹೋರಾಟದಲ್ಲಿ ವೈದ್ಯರು,ಪೊಲೀಸರು,ಜಿಲ್ಲಾಡಳಿತ,ಮಾಧ್ಯಮ ಸೇರಿದಂತೆ ಎಲ್ಲರ ಪಾತ್ರ ಶ್ಲಾಘನೀಯ ಎಂದರು.

ಪ್ರಧಾನಮಂತ್ರಿ ಹೇಳಿದಂತೆ 21 ದಿನಗಳ ಕಾಲ ಮನೆಯಲ್ಲಿಯೇ ಇರುವುದಕ್ಕೆ ಲಕ್ಷ್ಮಣರೇಖೆ ಹಾಕಿಕೊಳ್ಳುವುದರ ಮೂಲಕ ಈ ಸರಪಳಿಯನ್ನು ನಾವು ಮುರಿಯಬೇಕು ಮತ್ತು ಈ ಸವಾಲನ್ನು ಗೆಲ್ಲಬೇಕು ಎಂದು ಅವರು ಮನವಿ ಮಾಡಿದರು.

ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ 

ತುರ್ತುಚಿಕಿತ್ಸೆಗೆ ಮಾತ್ರ ಚಿಕಿತ್ಸೆ ಎಂದು ಹೇಳಿ ತಮ್ಮ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡುತ್ತಿರುವ ಐಎಂಎ ನಿರ್ಧಾರಕ್ಕೆ ಅಮ್ಮತಿ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು ಅವರು ಇಂತಹ ಸಂದರ್ಭದಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಒಪನ್ ಮಾಡಿ ಜನರಿಗೆ ಚಿಕಿತ್ಸೆ ಕೊಡುವ ಕೆಲಸ ಮಾಡಿ ಎಂದು ಸೂಚನೆ ನೀಡಿದರು.

ಜಿಂದಾಲ್‍ನಲ್ಲಿ 35396 ಕಾರ್ಮಿಕರು 

ಇತ್ತೀಚೆಗೆ ಅವರಿಗೆ ಕರೆದು ಸಭೆ ಮಾಡಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ 16850 ಜನ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅಂದರೇ ಶೇ.50ರಷ್ಟು ಪ್ರಮಾಣ ಕಾರ್ಮಿಕರನ್ನು ಕಡಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ವಿವರಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಇದುವರೆಗೆ ಜಿಲ್ಲಾಡಳತದಿಂದ ಕೈಗೊಳ್ಳಲಾದ ಕ್ರಮಗಳು, ಇದುವರೆಗೆ ಎಷ್ಟು ಜನರಿಗೆ ಮಾಡಲಾಗಿರುವ ತಪಾಸಣೆ, ಇದುವರೆಗೆ ಪಾಸಿಟಿವ್ ಪ್ರಕರಣ ಬರದಿರುವುದು. 28 ರ್ಯಾಪಿಡ್ ರಿಸ್ಪಾನ್ಸ್ ತಂಡಗಳ ರಚನೆ, 17 ವಿವಿಧ ಸಮಿತಿಗಳ ಕಾರ್ಯನಿರ್ವಹಣೆ ಸೇರಿದಂತೆ ಕೈಗೊಳ್ಳಲಾಗಿರುವ ಅಗತ್ಯ ಕ್ರಮಗಳನ್ನು ಸಭೆಗೆ ವಿವರಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ