NEWS

ಕೊರೊನಾ ಚಿಕಿತ್ಸೆ ವೆಚ್ಚ ಭರಿಸಲಿದೆ ಸರ್ಕಾರ

ಶೀಘ್ರವಾಗಿ ಕಿಮ್ಸ್ ನಲ್ಲಿ ಕೊರೊನಾ ಪತ್ತೆ ಪರೀಕ್ಷಾ ಕೇಂದ್ರ ಆರಂಭ l ಸಚಿವ ಜಗದೀಶ್ ಶೆಟ್ಟರ್

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೊರೊನಾ ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಧಾರವಾಡ ಜಿಲ್ಲೆಯಲ್ಲಿ ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಎಲ್ಲಾ ಅಗತ್ಯ ನೆರವನ್ನು ನೀಡಲಾಗುವುದು ಎಂದು  ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ಕೋವಿಡ್-19 ತುರ್ತು ಪರಿಸ್ಥಿತಿ ಎದುರಿಸುವ ಸಲುವಾಗಿ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಶೀಘ್ರವಾಗಿ ಹುಬ್ಬಳ್ಳಿಯ ಕಿಮ್ಸ್‌ಲ್ಲಿ ಕೊರೊನಾ ಪರೀಕ್ಷಾ ಕೇಂದ್ರವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. ಸರ್ಕಾರದ ನಿರ್ದೇಶನದಂತೆ ಫೀವರ್ ಕ್ಲಿನಿಕ್, ಕ್ವಾರಟೈನ್ ಸೆಂಟರ್ ಹಾಗೂ ಕೋವಿಡ್ ಆಸ್ಪತ್ರೆಗಳನ್ನು ಅಗತ್ಯ ಇರುವ ಎಲ್ಲಾ ಉಪಕರಣಗಳೊಂದಿಗೆ ಸನ್ನದ್ಧವಾಗಿರಿಸಿ. ವೈದ್ಯಕೀಯ ಹಾಗೂ ಪೊಲೀಸ್ ಇಲಾಖೆಯ ಪಾತ್ರ ದೊಡ್ಡದಿದೆ. ಪ್ರಧಾನ ಮಂತ್ರಿಗಳು 21 ದಿನ ದೇಶಾದ್ಯಂತ ಸಂಪೂರ್ಣ ಬಂದ್ ಕರೆ ನೀಡಿ, ಸಾರ್ವಜನಿಕರು ಮನೆಯಲ್ಲೇ ಇರುವಂತೆ ಮನವಿ ಮಾಡಿದ್ದಾರೆ ಅದರಂತೆ ಎಲ್ಲರೂ ಸಹಕರಿಸಿ ಎಂದು ತಿಳಿಸಿದರು.

ಜನರಿಗೆ ಅಗತ್ಯವಾದ ದಿನಸಿ ಹಾಗೂ ತರಕಾರಿಗಳು ಸುಲಭವಾಗಿ ಸಿಗುವಂತೆ ಜಿಲ್ಲಾಡಳತ ಕ್ರಮ ಕೈಗೊಳ್ಳಬೇಕು. ವರ್ತಕರು ಹಾಗೂ ತರಕಾರಿ ಮಾರುವ ಸಂಘಗಳೊಂದಿಗೆ ಮಾತನಾಡಿ, ನಗರದ ಏರಿಯಾಗಳಿಗೆ ತೆರಳಿ ಮಾರಾಟ ಮಾಡುವಂತೆ ಮನ ಒಲಿಸಿ. ಜನರ ಮನೆ ಬಾಗಿಲಿಗೆ ತರಕಾರಿ ಹಾಗೂ ದಿನಸಿಗಳು ಲಭ್ಯವಾದರೆ, ಜನರು ಅನಗತ್ಯವಾಗಿ ಮನೆಯಿಂದ ಹೊರ ಬರುವುದು ತಪ್ಪುತ್ತದೆ. ಸರ್ಕಾರದಿಂದ ಎರಡು ತಿಂಗಳ ಪಡಿತರವನ್ನು ವಿತರಿಸಲು ನಿರ್ದೇಶನ ನೀಡಲಾಗಿದೆ. ಎರಡು ತಿಂಗಳ ವೃದ್ಧಾಪ್ಯ ವೇತನ ಸೇರಿದಂತೆ ಇತರೆ ಸೌಲಭ್ಯಗಳನ್ನು ಸಹ ಪಲಾನುಭವಿಗಳಿಗೆ ನೀಡಲಾಗುವುದು ಎಂದು ಹೇಳಿದರು.

ವಿದೇಶದಿಂದ ಬಂದ 378 ಜನರ ಮೇಲೆ ನಿಗಾ ಇರಿಸಿ ಅವರನ್ನು ಹೊಮ್ ಕ್ವಾರಂಟೈನ್ ಮಾಡಲಾಗಿದೆ. ಇದರಲ್ಲಿ 133 ಜನ 14 ದಿನಗಳ ಪ್ರತ್ಯೇಕವಾಸವನ್ನು ಪೂರ್ಣಗೊಳಿಸಿದ್ದಾರೆ. ಇನ್ನೂ 14 ದಿನಗಳ ಕಾಲ ಪ್ರತ್ಯೇಕವಾಸವನ್ನು ಪೂರ್ಣಗೊಳಿಸಬೇಕಿದೆ. ಪ್ರತಿದಿನ ಕರೆ ಮಾಡಿ ಕ್ವಾರಟೈನ್ ಅದವರ ಆರೋಗ್ಯದ ಸ್ಥಿತಿಗತಿಗಳನ್ನು ತಿಳಿದುಕೊಳ್ಳಲಾಗುತ್ತಿದೆ ಎಂದರು.

ಒಟ್ಟು 10 ಜನರಿದಂದ ಕಫ ಮಾದರಿಯನ್ನು ಸಂಗ್ರಹಿಸಿ ಕೊರೊನಾ ಪರೀಕ್ಷೆ ಕಳುಹಿಸಿಕೊಡಲಾಗಿತ್ತು. ಇದರಲ್ಲಿ 8 ವರದಿಗಳು ನೆಗೆಟಿವ್ ಬಂದಿವೆ. ಧಾರವಾಡ ಹೊಸೆಲ್ಲಾಪುರದ ನಿವಾಸಿಯ ವರದಿ ಪಾಸಿಟಿವ್ ಬಂದಿದೆ. ಒಂದು ಪರೀಕ್ಷಾ ವರದಿ ಬರುವುದು ಬಾಕಿ ಇದೆ ಎಂದು ತಿಳಿಸಿದರು.

ಪಾಸಿಟಿವ್ ಇರುವ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡುಬಂದಿರುವುದಿಲ್ಲ. ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಒಟ್ಟು 14 ಫೀವರ್ ಕ್ಲಿನಿಕ್, 11 ಕ್ವಾರಟೈನ್ ಸೆಂಟರ್ ಹಾಗೂ ಕಿಮ್ಸ್ ನಲ್ಲಿ ಕೊವಿಡ್ -19 ಆಸ್ಪತ್ರೆಯನ್ನು ತರೆಯಲಾಗಿದೆ.

ಕಿಮ್ಸ್‌ ನಲ್ಲಿ 250 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯಾಗಿ ಬದಲಾಯಿಸಲಾಗಿದೆ. 35 ವೆಂಟಿಲೇಟರ್‍ಗಳು ಇವೆ. ಇತರೆ ಖಾಸಗಿ ಆಸ್ಪತ್ರೆಗಳಲ್ಲಿ 80 ವೆಂಟಿಲೇಟರ್‍ಗಳು ಲಭ್ಯವಿದ್ದು, ಅಗತ್ಯ ಬಿದ್ದರೆ ಅವುಗಳನ್ನು ಸಹ ಪಡೆದು ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ