Please assign a menu to the primary menu location under menu

NEWSಶಿಕ್ಷಣ-

ಕೊರೊನಾ ಜಾಗೃತಿಗೆ ಗ್ರಾಮ ಮಟ್ಟದ ಕಾರ್ಯಪಡೆ ಸಜ್ಜು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಕೋವಿಡ್-19 (ಕೊರೊನಾ ವೈರಸ್) ಕಾಯಿಲೆಯು ಸಾಂಕ್ರಾಮಿಕ ರೋಗವಾಗಿದ್ದು, ಇದು ಹರಡದಂತೆ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಕಾರ್ಯಪಡೆ ಸಜ್ಜುಗೊಂಡಿದೆ.

ಸಾರ್ವಜನಿಕ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಮಟ್ಟದ ಕಾರ್ಯಪಡೆ ಸಮಿತಿಯನ್ನು ರಚನೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎಸ್.ಎ.ಅಶ್ರಫುಲ್ ಹಸನ್  ಆದೇಶಿಸಿದ್ದಾರೆ.

ಗ್ರಾಮ ಮಟ್ಟದ ಕಾರ್ಯಪಡೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಅಧ್ಯಕ್ಷರಾಗಿರುತ್ತಾರೆ.  ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಲೆಕ್ಕಾಧಿಕಾರಿ, ಗ್ರಾಮದ ಬೀಟ್ ಪೊಲೀಸ್, ಗ್ರಾಮದ ಆರೋಗ್ಯ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನೋಂದಾಯಿತ ಸ್ಥಳೀಯ ವೈದ್ಯರು ಸದಸ್ಯರಾಗಿರುತ್ತಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಕಾರ್ಯಪಡೆಯ ಜವಾಬ್ದಾರಿಗಳು 

65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರ ಸಮೀಕ್ಷೆಯನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ನಿಯಮಿತವಾಗಿ ಅವರ ಆರೋಗ್ಯವನ್ನು ಗಮನಿಸಬೇಕು. ಗರ್ಭಿಣಿ ಮತ್ತು ಬಾಣಂತಿಯರನ್ನು ಮಹಿಳಾ ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿಯಮಿತವಾಗಿ ಭೇಟಿ ನೀಡಿ ಇವರುಗಳ ಆರೋಗ್ಯ ಮೇಲ್ವಿಚಾರಣೆ ಮಾಡಬೇಕು. ಕೆಮ್ಮು, ನೆಗಡಿ, ತಲೆನೋವು, ಜ್ವರ, ಗಂಟಲಲ್ಲಿ ಉರಿತ ಲಕ್ಷಣಗಳು ಕಾಣಿಸುವಂತಹ ಜನರನ್ನು ತಕ್ಷಣ ಗುರುತಿಸಿ ಸಮೀಪದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಕೊರೊನಾ ಬಾಧಿತ ವಿದೇಶದಿಂದ ಬರುವ ಭಾರತೀಯರನ್ನು ಗುರುತಿಸಿ ಅವರನ್ನು ತಪಾಸಣೆಗೆ ಒಳಪಡಿಸಬೇಕು ಮತ್ತು ಅಂತಹ ಗುರುತಿಸಿದವರನ್ನು 14 ದಿನಗಳವರೆಗೆ ಪ್ರತ್ಯೇಕವಾದ ಕೊಠಡಿಗಳಲ್ಲಿ ಇರಿಸಿ ಹೊರಗೆ ಬಾರದಂತೆ ನೋಡಿಕೊಂಡು ಚಿಕಿತ್ಸೆ ನೀಡಬೇಕು.  ಸಾರ್ವಜನಿಕರೊಂದಿಗೆ ಬೆರೆಯದಂತೆ ನೋಡಿಕೊಳ್ಳಬೇಕು ಸೂಚಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಮದುವೆ ಜಾತ್ರೆ, ಮೆರವಣಿಗೆ, ಸಂತೆ ಹಾಗೂ ಗುಂಪು ಚಟುವಟಿಕೆಗಳನ್ನು ಗ್ರಾಮೀಣ ಕಾರ್ಯಪಡೆ ನಿಯಂತ್ರಿಸಬೇಕು. ಸ್ವಚ್ಛತಾಗಾರರು ಮತ್ತು ಘನತ್ಯಾಜ್ಯ ನಿರ್ವಹಣೆ ಮಾಡುವ ಸಿಬ್ಬಂದಿಗೆ ಮಾಸ್ಕ್, ಗ್ಲೌಸ್ ಮತ್ತು ಬೂಟ್ಸ್‍ಗಳನ್ನು ಒದಗಿಸಬೇಕು. ಕೊರೊನಾ ವೈರಸ್ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ