Please assign a menu to the primary menu location under menu

ವಿಡಿಯೋ

ಕೊರೊನಾ ಜಾಗೃತಿ ಮೂಡಿಸಿದ ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕೊರೋನಾ ವೈರಸ್ ರೋಗವನ್ನು ದೂರವಿಡಲು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಶ್ರೀನಗರ-ಬಂಡೇಪಾಳ್ಯ ಬಡಾವಣೆಯ ಜನತೆ ತಮಗೆ ತಾವೇ ಹಾಕಿಕೊಂಡಿರುವ ಈ ನಿರ್ಬಂಧಗಳು ನಿಜವಾಗಿಯೂ ಇತರರಿಗೆ ಮಾದರಿ ಹಾಗೂ ಶ್ಲಾಘನೀಯವಾದುದು ಎಂದು  ಸಿದ್ದಗಂಗಾ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೋನಾ ವೈರಸ್ ರೋಗವು ತಂತ್ರ-ಮಂತ್ರಗಳಿಂದ ತೊಲಗುವಕಾಖಾಯಿಲೆಯಲ್ಲ.  ವೈಯಕ್ತಿಕ ಹಾಗೂ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಂಡಲ್ಲಿ ಈ ರೋಗದಿಂದ ನಮ್ಮನ್ನು ನಾವು ಸಂರಕ್ಷಿಸಿಕೊಳ್ಳಬಹುದು.   ಶ್ರೀನಗರ ಬಡಾವಣೆಯ ನಿವಾಸಿಗಳು ಅನುಸರಿಸುತ್ತಿರುವ ರೀತಿಯಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿರ್ಬಂಧವನ್ನು ತಮಗೆ ತಾವೇ   ಹಾಕಿಕೊಳ್ಳುವುದರಿಂದ ವಿಶ್ವದಾದ್ಯಂತ ಹರಡುತ್ತಿರುವ ಮಾರಣಾಂತಿಕ ಕೋವಿಡ್-19 ವೈರಾಣುವಿನಿಂದ ಮುಕ್ತಿ ಹೊಂದಬಹುದಾಗಿದೆ ಎಂದು ತಿಳಿ ಹೇಳಿದ್ದಾರೆ.

ಸ್ವಯಂ ಸೇವಕರಾಗಿ ಮಹೇಶ್, ಹರೀಶ್, ರೇಣುಕ, ಚೇತನ್, ನಾಗೇಶ್, ನಾರಾಯಣಗೌಡ ಸೇರಿದಂತೆ 40 ಯುವಕರು ಈ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.  ಇದೇ ಬಡಾವಣೆಯ ಸಿಎಫ್‌ಟಿಆರ್‌ಐ.ನ ಬಯೋಟೆಕ್ನಾಲಜಿ ಇಂಜಿನಿಯರ್ ಮತ್ತು ರೀಸರ್ಚರ್ ಆರ್.ವಿ. ಮಹೇಶ್ ಅವರ ಸಲಹೆ ಸೂಚನೆಯನ್ವಯ ಈ ಮಹತ್ವದ ಮುಂದಡಿಯನ್ನು ಇಡಲಾಗಿದೆ ಎಂದು ಶ್ರೀನಗರ ನಾಗರೀಕ ಕ್ಷೇಮಾಭಿವೃದ್ಧಿಸಮಿತಿ ತಿಳಿಸಿದೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...