ಆರೋಗ್ಯ

ಕೊರೊನಾ ತಡೆಗೆ ಮುಂಜಾಗ್ರತರಾಗಿ: ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ಸಲಹೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕೊರೊನಾ 3ನೇ ಹಂತದ ಹರಡುವಿಕೆಯು ಬಹಳ ತೀವ್ರ ಮತ್ತು ವ್ಯಾಪ್ತಿಯನ್ನು ವೇಗವಾಗಿ ಕ್ರಮಿಸುವುದನ್ನು ತಡೆಯಲು ಎಲ್ಲಾ ರೀತಿಯಲ್ಲೂ ಮುಂಜಾಗ್ರತಾ ಕ್ರಮವಹಿಸಬೇಕೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೊವಿಡ್-19 ಕುರಿತಂತೆ ನಡೆದ ಮುಂಜಾಗ್ರತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಸೋಂಕಿತ ವ್ಯಕ್ತಿಗೆ ಪ್ರಥಮ ಹಂತದಲ್ಲಿ ಸಮೀಪವಿರುವ ಕುಟುಂಬಸ್ಥರು, ಬಂಧುಗಳು ಹಾಗೂ ೨ನೇ ಹಂತದಲ್ಲಿ ಅವರ ನಿಕಟವರ್ತಿಗಳಿಗೆ ಹರಡುವ ಸಾಧ್ಯತೆಯಿದ್ದು, ೩ನೇ ಹಂತದಲ್ಲಿ ಅವರು ಓಡಾಡಿರುವ, ಸಂಪರ್ಕದಲ್ಲಿರುವ ಎಲ್ಲಾ ಪ್ರದೇಶಗಳ ವ್ಯಕ್ತಿಗಳಿಗೆ ತೀವ್ರವಾಗಿ ಹಾಗೂ ವಿಶಾಲವ್ಯಾಪ್ತಿಯಲ್ಲಿ ಸೋಂಕು ಹರಡುವುದರಿಂದ ಮಾರ್ಚ್ 31ರವರೆಗೆ ತೀವ್ರ ನಿಗಾವಹಿಸಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವುದರ ಜೊತೆಗೆ ಅರೆ ವೈದ್ಯ ಸಿಬ್ಬಂದಿ/ ವೈದ್ಯರಿಗೆ ಸೂಕ್ತ ತರಬೇತಿ ನೀಡಿ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಸಿದ್ಧರಾಗಿರುವಂತೆ ಅಣಿಗೊಳಿಸಲು ತಿಳಿಸಿದರು.

ಅಂಗನವಾಡಿ, ಆಶಾಕಾರ್ಯಕರ್ತೆಯರು ಹಾಗೂ ಅಧಿಕಾರಿಗಳು ಕೊರೋನಾ ಸೋಂಕಿನ  ಬಗ್ಗೆ  ಜನಜಾಗೃತಿ ಮೂಡಿಸಬೇಕು.  ಆದರೆ ಭಯ ಹುಟ್ಟಿಸಬಾರದೆಂದು ತಿಳಿಸಿದ ಅವರು,  ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು ಹಾಗೂ ಕ್ಲಬ್, ಪಬ್‌ಗಳಲ್ಲಿ ಜನಸಂದಣಿ ನಿಷೇಧಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮಾಂಸ ಮಾರಾಟ, ಕತ್ತರಿಸಿದ ಹಣ್ಣುಗಳನ್ನು ಬೀದಿ ಬದಿಯಲ್ಲಿ ಮಾರಾಟ ಮಾಡುವ ಬಗ್ಗೆ ನಿರ್ಬಂಧವಿಧಿಸಬೇಕು. ಕೊರೋನಾ ವೈರಸ್‌ನಿಂದ ಜನರು ಸಾಯುವ ಪ್ರಮಾಣ ಕಡಿಮೆ ಇದ್ದರೂ ಈ ಸೋಂಕು ಹರಡುವ ಪ್ರಮಾಣ ತೀವ್ರವಾಗಿರುವುದರಿಂದ ಸಾರ್ವಜನಿಕರು ಮುಂಜಾಗ್ರತರಾಗಿ ಇರುವುದು ಒಳ್ಳೆಯದು ಎಂದು ಸಲಹೆ ಮಾಡಿದರು.

ಅದಕ್ಕೂ ಮುನ್ನ ಈವರೆವಿಗೂ ಕೊರೋನಾ ವೈರಸ್ ತಡೆಯುವ ಬಗ್ಗೆ ಜಿಲ್ಲಾಡಳಿತ ಕೈಗೊಂಡಿರುವ ಮಾಹಿತಿಯನ್ನು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಿಕಾ ಅವರಿಂದ  ಪಡೆದರು ಹಾಗೂ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್‌ಗಳನ್ನು ಸ್ಥಾಪಿಸುವಂತೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಇದೇ ಕ್ರಮ ಅನುಸರಿಸುವಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ಕಲ್ಪಿಸಲು ಅವಕಾಶವಿಲ್ಲದ ಗ್ರಾಮೀಣ ಭಾಗದಲ್ಲಿ ಖಾಸಗಿ ಮನೆಗಳನ್ನು ಸಹ ಪಡೆದು ಐಸೋಲೇಷನ್ ವಾರ್ಡ್‌ಗಳಾಗಿ ಪರಿವರ್ತಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯ ನಂತರ ಸಚಿವರು ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಐಸೋಲೇಷನ್ ವಾರ್ಡ್‌ಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...