ಬೆಂಗಳೂರು: ಕೊರೊನಾ ವೈರಾಣು ನಿಗ್ರಹಕ್ಕೆ ಸರ್ಕಾರ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ 200 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ವಿಧಾನ ಸೌಧದಲ್ಲಿ ಇಂದು ಕೋರೋನಾ ಕುರಿತು ಹಮ್ಮಿಕೊಂಡಿದ್ದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಮಾತನಾಡಿದ ಅವರು ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು ಅದರಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ. ಈ ಸಮಿತಿ ಪ್ರತಿ ದಿನ ಸಭೆ ಸೇರಿ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗಗೆ ಜನರಿಗೆ ತಿಳಿಸುವುದಲ್ಲದೆ, ದಿನಕ್ಕೆರಡು ಬಾರಿ ಬುಲೆಟಿನ್ ಸಹ ಬಿಡುಗಡೆ ಮಾಡಲಿದೆ ಎಂದರು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬಂದ ಪ್ರಯಾಣಿಕರನ್ನು ಪ್ರತ್ಯೇಖವಾಗಿ ಇರಿಸಲಾಗಿದೆ. ವಿಧಾನ ಸೌಧ, ವಿಕಾಸಸೌಧಕ್ಕೆ ಜನ ಬಾರದಂತೆ ನಿಷೇಧ ಹೇರಲಾಗಿದೆ. ರಾಜ್ಯದಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರ, ಮಂಗನ ಕಾಯಿಲೆ ಹಾಗೂ ಹಂದಿ ಜ್ವರವನ್ನು ಸಹ ನಿಗ್ರಹ ಮಾಡುವುದಾಗಿ ತಿಳಿಸಿ, ಮಾರ್ಚ್ 31ರ ತನಕ ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಜನ ಭಾಗವಹಿಸಬಾರದು. 100ರಿಂದ 150 ಜನ ಒಳಪಟ್ಟು ಮದುವೆ ಸಮಾರಂಭ ಕೈಗೊಳ್ಳಲು ತಿಳಿಸಲಾಗಿದೆ ಎಂದು ತಿಳಿಸಿದರು.
ನಂತರ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಸದಸ್ಯರಾದ ಸಿದ್ದರಾಮಯ್ಯ ಎಲ್ಲಾ ಆಸ್ಪತ್ರೆಗಳಲ್ಲೂ ವೆಂಟಿಲೇಟರ್ ವ್ಯವಸ್ಥೆ ಮಾಡಬೇಕು. ಖಾಸಗಿ ಆಸ್ಪತ್ರಗಳಲ್ಲೂ ಸಹ ಕೋರೋನಾ ಪೀಡಿತ ರೋಗಿಗಳನ್ನು ನಿರಾಕರಿಸದೆ ದಾಖಲಿಸಿಕೊಳ್ಳಬೇಕು. ನೊಂದಾಯಿತ ಸೊಂಕಿತರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ತಿಳಿಸಿದರು.
ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಆರೋಗ್ಯದ ತುರ್ತು ಪರಿಸ್ಥತಿ ಎಂದು ಘೋಷಿಸಿದೆ. ಜನರು ಇದಕ್ಕಾಗಿ ಹೆದರುವ ಬದಲಾಗಿ ಇದನ್ನು ತಡೆಗಟ್ಟಲು ಎಲ್ಲರೂ ಸಮರೋಪಾದಿಯಲ್ಲಿ ಕೈಜೋಡಿಸಬೇಕೆಂದು ತಿಳಿಸದರು.
ಹೊರದೇಶದಿಂದ ಬಂದ ಪ್ರಯಾಣಿಕರನ್ನು ಪ್ರತ್ಯೇಖವಾಗಿ ಇರಿಸಲಾಗಿದೆ. ಇವರನ್ನು ಗುರುತಿಸುವ ನಿಟ್ಟಿನಲ್ಲಿ ಅವರ ಬಲಗೈಗೆ ಠಸ್ಸೆ ಹಾಕಲಾಗಿದೆ. ಚೀನದಲ್ಲಿ 80881 ಕರೋನಾ ದೃಢ ಪ್ರಕರಣಗಳಲ್ಲಿ 68709 ಜನ ಗುಣಮುಖರಾಗಿದ್ದಾರೆ. ಇದರ ಒಟ್ಟು ಸಾವಿನ ಸಂಖ್ಯೆ 0.5 ರಿಂದ 3.4 ರಷ್ಟಿದೆ. ಕೊರೊನಾ ತಗುಲಿದರೆ ಸಾವು ನಿಶ್ಚಿತ ಎಂದು ಜನ ಭಾವಿಸಬಾರದು. ಶಂಕಿತ ಸೊಂಕು ಇರುವವರು ಆದಷ್ಟು ಜನರಿಂದ ದೂರವಿರಬೇಕು. ಸರ್ಕಾರ ಟಾಸ್ಕ್ಪೋರ್ಸ್ ರಚಿಸಿ 200 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯ 104 ಸಂಖ್ಯೆಯ ಸಹಾಯವಾಣಿಯನ್ನು ಸಹ ಸ್ಥಾಪಿಸಲಾಗಿದೆ. ಕೋರೋನಾ ಶಂಕಿತರನ್ನು ಸ್ವಯಂಚಾಲಿತ ದೂರವಾಣಿ ಸಂಪರ್ಕ ಕಲ್ಪಿಸಿ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
Related
You Might Also Like
ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ
ಚನ್ನಪಟ್ಟಣ: ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ಮಾಡಿದ ಬಿಜೆಪಿ ಜೆಡಿಎಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು. ಡಿ.ಕೆ.ಶಿವಕುಮಾರ್ ನೋಟು, ನಿಖಿಲ್ ಕುಮಾರಸ್ವಾಮಿಗೆ ಓಟು...
ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ
ನ್ಯೂಡೆಲ್ಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ (Atishi) ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ...
ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ – ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಬಳ್ಳಾರಿ ಪಾದಯಾತ್ರೆ ನಡೆಸಲು ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಪರಿಷತ್...
ಗಣೇಶ ವಿಸರ್ಜನೆ ವೇಳೆ ಗಲಾಟೆ: ತಪ್ಪಿತಸ್ಥರ ವಿರುದ್ಧ ಕ್ರಮ- ಸಚಿವ ಚಲುವರಾಯಸ್ವಾಮಿ
ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ಮಾಡಿರುವ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು,...
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ
ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ದೇವನಹಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಾಗೂ...
ಸಿಎಂ ಮುಟ್ಟುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ : ಬಿಜೆಪಿ– ಜೆಡಿಎಸ್ ವಿರುದ್ಧ ಡಿಸಿಎಂ ಡಿಕೆಶಿ ಕಿಡಿ
ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ, ನೋಡೋಣ ಮುಟ್ಟಿ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ....
ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ಕೆಳಗಿಳಿಸಲು ರಾಜ್ಯಪಾಲರ ಏಜೆಂಟರಂತೆ ಬಳಸಿಕೊಳ್ಳುತ್ತಿದೆ JDS-BJP: ರಮೇಶ್ ಆರೋಪ
ತಿ. ನರಸೀಪುರ: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಬಿಜೆಪಿ, ಜೆಡಿಎಸ್ ನಾಯಕರು ರಾಜ್ಯಪಾಲರನ್ನು ಏಜೆಂಟ್ ಆಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ವಿಭಾಗದ...
ಮುಡಾ, ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋಗೆ ಚಾಲನೆ
ಬೆಂಗಳೂರು: ಮುಡಾ ಹಗರಣ ಹಾಗೂ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಇಂದು ಬೆಂಗಳೂರಿನ ಮೈಸೂರು ರಸ್ತೆಯ...
ಯಾವುದೇ ಕಾರಣಕ್ಕೂ ಬೆಂಗಳೂರನ್ನು ಮತ್ತಷ್ಟು ವಿಸ್ತರಿಸಲು ಅವಕಾಶ ನೀಡಬೇಡಿ: ಸಿಎಂಗೆ ಮುಖ್ಯಮಂತ್ರಿ ಚಂದ್ರು ಪತ್ರ
ಬೆಂಗಳೂರು: ಸಮಸಮಾಜ ನಿರ್ಮಾಣದ ಸದುದ್ದೇಶ ಹೊಂದಿರುವುದಾಗಿ ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಂತಹ ಅಸಮಾನ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ...
ಇಂಧನ ಬೆಲೆ ಏರಿಸಿ ಶ್ರೀಸಾಮಾನ್ಯರ ಜೀವನದ ಜತೆ ಚೆಲ್ಲಾಟ: ಬಿಜೆಪಿ ಪ್ರತಿಭಟನೆ
ಕೆ.ಆರ್.ಪೇಟೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏಕಾಏಕಿ ಏರಿಸಿ ಶ್ರೀಸಾಮಾನ್ಯರ ಜೀವನದ ಜತೆ ಚೆಲ್ಲಾಟವಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಾಜಿ ಸಚಿವ ಡಾ....
ಬಿಡಿಎ, ಬಿಬಿಎಂಪಿ ನಿಷ್ಕ್ರಿಯತೆಗೆ ಸಣ್ಣ ಮಳೆಗೂ ನಗರ ಜಲಾವೃತ: ಎಎಪಿ ಕಿಡಿ
ಬೆಂಗಳೂರು: ಪ್ರತಿವರ್ಷವೂ ಒಂದು ಸಣ್ಣ ಮಳೆ ಬಂದರೂ ಬೆಂಗಳೂರು ಜಲಾವೃತ್ತವಾಗುತ್ತಿದೆ ಈ ಪರಿಸ್ಥಿತಿಗೆ ಬಿಡಿಎ ಮತ್ತು ಬಿಬಿಎಂಪಿ ನಿಷ್ಕ್ರಿಯತೆಯೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ಬೆಂಗಳೂರು...
ಎಲ್ಲಿದ್ದರೂ ಬಂದು ಪೊಲೀಸರಿಗೆ ಶರಣಾಗಿ, ವಿಚಾರಣೆ ಎದುರಿಸು: ಪ್ರಜ್ವಲ್ಗೆ ಎಚ್ಡಿಡಿ ಆದೇಶ
ಬೆಂಗಳೂರು: ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಪೊಲೀಸ ಬಳಿ ಶರಣಾಗಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತಾಕೀತು ಮಾಡಿದ್ದು, ಪ್ರಜ್ವಲ್ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ....