ಕೊರೊನಾ ನಿಯಂತ್ರಣದಲ್ಲಿ ಬೆಂಗಳೂರು-ತುಮಕೂರು ನಗರಗಳು ದೇಶಕ್ಕೇ ಮಾದರಿ
ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್ ವಾಲ್ ಹೇಳಿಕೆ
ನ್ಯೂಡೆಲ್ಲಿ: ಕೋವಿಡ್ 19 ಸೋಂಕು ನಿಯಂತ್ರಣ ಕ್ರಮಗಳ ಅಂಗವಾಗಿ ಬೆಂಗಳೂರು ಮತ್ತು ತುಮಕೂರು ನಗರಗಳು ಮಾದರಿಯಾಗಿದ್ದು, ಸ್ಮಾರ್ಟ್ ಸಿಟಿ ಅಭಿಯಾನದಡಿ ಕ್ವಾರೆಂಟೇನ್ ನಲ್ಲಿರುವವರ ಮೇಲೆ ಕಣ್ಗಾವಲು ಹಾಕುವ, ಅವರ ಚಟುವಟಿಕೆಗಳನ್ನು ಸಮಗ್ರವಾಗಿ ಪರಿಶೀಲಿಸುವ ಸ್ಮಾರ್ಟ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್ ವಾಲ್ ಹೇಳಿದ್ದಾರೆ.
ನ್ಯೂಡೆಲ್ಲಿಯಲ್ಲಿ ಮಾತನಾಡುತ್ತಿದ್ದ ಅವರು ಸ್ಮಾರ್ಟ್ ಸಿಟಿ ಯೋಜನೆಗೆ ಒಳಪಡುವ ಸೂರತ್ ಮತ್ತು ಪುಣೆ ನಗರಗಳು ಸಹ ಇದೇ ತಂತ್ರಜ್ಞಾನವನ್ನು ಅಡಕಗೊಳಿಸಿಕೊಂಡಿವೆ. ಹೋಮ್ ಕ್ವಾರೆಂಟೇನ್ ನಲ್ಲಿರುವವರ ನಿರ್ವಹಣೆ, ನಿಗಾ, ಪತ್ತೆ ಹಚ್ಚುವ, ಮಾಹಿತಿ ಪ್ರಸರಣ, ತರಬೇತಿ ನೀಡುವ, ವಿಶ್ಲೇಷಣೆ ಮಾಡುವ, ಕೌನ್ಸಿಲಿಂಗ್ ಸೌಲಭ್ಯ ಮತ್ತಿತರ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ದಿಗ್ಭಂಧನದಲ್ಲಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಕೋವಿಡ್ 19 ಪ್ರಕರಣಗಳನ್ನು ದೇಶದಲ್ಲಿ ಮೂರು ಹಂತಗಳನ್ನಾಗಿ ವಿಂಗಡಿಸಲಾಗಿದೆ. ವಸತಿ ನಿಲಯಗಳು, ಕ್ರೀಡಾಂಗಣಗಳಂತಹ ಪ್ರದೇಶಗಳಲ್ಲಿ ಮೊದಲ ಹಂತದ ಪ್ರಕರಣಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಎರಡನೇ ಹಂತದ ಕೇಂದ್ರಗಳು ಸಂಪೂರ್ಣವಾಗಿ ಉನ್ನತ ಚಿಕಿತ್ಸೆಗೆ ಮೀಸಲಾಗಿದ್ದು, ಇದಕ್ಕಾಗಿ. ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ತೀವ್ರ ಸಂಕಿರ್ಣ ಪರಿಸ್ಥಿತಿಯಲ್ಲಿರುವವರಿಗೆ ವೆಂಟಿಲೇಟರ್ ಸೇರಿದಂತೆ ಉನ್ನತ ತಂತ್ರಜ್ಞಾನದ ಮೂಲಕ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಲವ ಅಗರ್ ವಾಲ್ ಸ್ಪಷ್ಟಪಡಿಸಿದರು.
ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತಂತೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ
ದೇಶದಲ್ಲಿ ಏಪ್ರಿಲ್ 14 ರ ನಂತರ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತಂತೆ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಖಚಿತ ಇಲ್ಲದೇ ಇರುವ ಸುದ್ದಿಗಳು ಪ್ರಸಾರವಾಗುತ್ತಿದ್ದು, ಇವುಗಳನ್ನು ಜನತೆ ನಂಬಬಾರರದು. ಯಾವುದೇ ಮಾಧ್ಯಮಗಳು ಊಹಾಪೋಹಗಳನ್ನು ಹರಡಬಾರದು ಎಂದರು.
ಸಾಮಾಜಿಕ ಅಂತರ ಮತ್ತು ಲಾಕ್ ಡೌನ್ ಬಗ್ಗೆ ಅಧ್ಯಯನ ಮಾಡಲಾಗಿದ್ದು, ಈ ಸಂಬಂಧ ಐಸಿಎಂಆರ್ ವರದಿ ಸಿದ್ಧಪಡಿಸಿದೆ. ಒಬ್ಬ ವ್ಯಕ್ತಿ 405 ಮಂದಿಗೆ ಸೋಂಕು ಹರಡುವ ಸಾಮರ್ಥ್ಯ ಹೊಂದಿರುತ್ತಾನೆ. ಹೀಗಾಗಿ ಸಾಮಾಜಿಕ ಅಂತರ ಸಾಮಾಜಿಕ ಲಸಿಕೆಯಾಗಿದೆ ಎಂದು ಲವ ಅಗರ್ ವಾಲ್ ಹೇಳಿದರು.
ಎನ್ 95 ಮಾಸ್ಕ್ ಗಳು ಸೇರಿದಂತೆ ವೈದ್ಯಕೀಯ ಪರಿಕರಗಳಿಗೆ ಗುಣಮಟ್ಟ ನಿಗದಿಪಡಿಸಿದ್ದು, ಯಾವುದೇ ದೇಶ, ಯಾವುದೇ ಭಾಗದಿಂದ ಇವುಗಳನ್ನು ಖರೀದಿ ಅಥವಾ ಆಮದು ಮಾಡಿಕೊಂಡರೂ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾತ್ಸವ್ ಮಾತನಾಡಿ, ಲಾಕ್ ಡೌನ್ ಪಾಲನೆಗೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ಟ್ರಕ್ ಗಳ ಮೂಲಕ ಔಷಧಗಳನ್ನು ಸಾಗಾಟ ಮಾಡಲಾಗುತ್ತಿದೆ. ಈವರೆಗೆ 152 ವಿಮಾನಗಳನ್ನು ಇದಕ್ಕಾಗಿ ಬಳಕೆ ಮಾಡಿಕೊಳ್ಳಲಾಗಿದೆ. ಕಾಳಸಂತೆಕೋರರ ಸಮಸ್ಯೆ ನಿಯಂತ್ರಿಸುವಂತೆಯೂ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ ಎಂದರು.
ಐಸಿಎಂಆರ್ ನ ಪ್ರಧಾನ ವಿಜ್ಞಾನಿ ಡಾ. ಗಂಗಾ ಖೇಡ್ಕರ್ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳ ಮೂಲಕ ಒಂದು ಲಕ್ಷ ಮಾದರಿಗಳನ್ನು ಈವರೆಗೆ ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ಪತ್ತೆಗೆ ಖಾಸಗಿ ಮತ್ತು ಸಾರ್ವಜನಿಕ ವಲಯದಿಂದ ಹೆಚ್ಚು ಪ್ರಯೋಗಾಲಯಗಳನ್ನು ತೆರೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು.
Related
You Might Also Like
ಬ್ಯಾಟರಿ ಚಾಲಿತ ವ್ಹೀಲ್‌ಚೇರ್ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ
ದೇವನಹಳ್ಳಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ಚೇರ್ಗಳನ್ನು ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (77) ಇಂದು ಬಾರದ ಲೋಕಕ್ಕೆ ಪಯಾಣ ಬೆಳೆಸಿದ್ದಾರೆ. ಇತ್ತೀಚೆಗಷ್ಟೇ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4...
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ
ಬೆಳಗಾವಿ: ಕಾರಿಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ...
BMTC ಕಂಡಕ್ಟರ್: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ – ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನುತ್ತಿರುವ ಕಿರಾತಕ
ಬೆಂಗಳೂರು: ಎಂ.ಎಸ್.ಪಾಳ್ಯದಿಂದ-ಯಲಹಂಕ ಮಾರ್ಗದಲ್ಲಿ ಟಿಕೆಟ್ ಕೊಡುತ್ತಲೇ ಮುಗ್ದ ಯುವತಿಯನ್ನು ಕಂಡಕ್ಟರ್ ಪಟಾಯಿಸಿದ್ದು, ಮದುವೆಯಾದ ಮೂರೇ ತಿಂಗಳಿಗೆ ಾತನ ಅಸಲಿ ಮುಖ ಬಯಲಾಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ....
KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ, ಅಂದರೆ ಚಾಲಕ ನಿರ್ವಾಹಕರು ಪ್ರಾಮಾಣಿಕತೆ ಮೆರೆಯು ಮೂಲಕ ಇತರರಿಗೆ ಮಾದರಿಯಾಗುತ್ತಿರುವುದು ನಿರಂತರವಾಗಿದೆ. ಇದು ಒಂದು ರೀತಿ...
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬಂಧನ
ಮೈಸೂರು: ರೈತ ವಿರೋಧಿ ಕೇಂದ್ರ ಸರ್ಕಾರದ ವರ್ತನೆ ಖಂಡಿಸಿ ದಲೈವಾಲ ಹೋರಾಟವನ್ನು ಬೆಂಬಲಿಸಿ ಪ್ರಧಾನ ಮಂತ್ರಿ ಹಾಗೂ ಕೃಷಿ ಮಂತ್ರಿಗಳ ಪ್ರತಿಕೃತಿ ದಹನ ಮಾಡಲು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ...
ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್
ಬೆಂಗಳೂರು: ಯುವ ದಿನ, ಜನವರಿ 12 ರಂದು, ಸ್ವಾಮಿ ವಿವೇಕಾನಂದರ ಪ್ರೇರಣಾದಾಯಕ ಜೀವನ ಮತ್ತು ಉಪದೇಶಗಳನ್ನು ಆಚರಿಸುತ್ತದೆ. ಅವರ ಉಪದೇಶಗಳು ಪೀಳಿಗೆಗಳನ್ನು ಪ್ರೇರೇಪಿಸುತ್ತಿವೆ ಎಂದು ಏಮ್ಸ್ ಮತ್ತು...
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ
ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ...
“ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್ಆರ್ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವುದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹಿಸಲು ಮೂವರು ಅಧಿಕಾರಿಗಳನ್ನೊಳಗಂಡ ಮೇಲ್ವಿಚಾರಣೆ ತಂಡಗಳನ್ನು ರಚಿಸಿ ವ್ಯವಸ್ಥಾಪಕ...