NEWSದೇಶ-ವಿದೇಶ

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ 7ವರ್ಷ ಜೈಲು

ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ರಿಂದ ಅಂಕಿತ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ಸೋಂಕಿನ ವಿರುದ್ಧ ದೇಶದಲ್ಲಿ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡುವವರಿಗೆ ಜೈಲು ಶಿಕ್ಷೆ ವಿಧಿಸುವ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ.

ದೇಶಾದ್ಯಂತ ವಿಶ್ವಮಾರಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಅದರ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ಹಲ್ಲೆ ನಡೆಸುತ್ತಿದ್ದು ಅಂಥವರಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸುವ ಸಂಬಂಧ ಕೇಂದ್ರ ಸರ್ಕಾರ ಬುಧವಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಮಹತ್ವದ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿ ಅದನ್ನು ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗಿತ್ತು.

ಈ ಸಾಂಕ್ರಾಮಿಕ ರೋಗದಿಂದ ದೇಶವನ್ನು ರಕ್ಷಿಸಲು ಹಗಲಿರುಳು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಅವರ ಮೇಲೆ ಹಲ್ಲೆ ನಡೆಸುವುದು ಮತ್ತು ಕಿರುಕುಳ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂಬಂಧ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದೆ.

ಅದರಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸುವವರಿಗೆ 6 ತಿಂಗಳಿಂದ 7 ವರ್ಷ ಜೈಲು ಶಿಕ್ಷೆ ನೀಡಲು ಅವಕಾಶವಿದೆ ಎಂದು ಬುಧವಾರ ನಡೆದ ವಸಚಿವ ಸಂಪುಟ ಸಭೆ ಬಳಿಕ ಕೇಂದ್ರ ಸಚಿವ ಪ್ರಕಾಶ್ ಜಾವದೇಕರ್ ಸುದ್ದಿಗಾರರಿಗೆ ತಿಳಿಸಿದ್ದರು.

ಈ ಸುಗ್ರೀವಾಜ್ಞೆ ತಕ್ಷಣದಿಂದಲೇ ಜಾರಿಗೆ ಬರಲಿದ್ದು, 1987ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಹೇಳಿದ್ದರು.

ಕಿಡಿಗೇಡಿಗಳು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಕೇವಲ 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿತ್ತು. ಈಗ ಕೇಂದ್ರ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು 6 ತಿಂಗಳಿಂದ 7 ವರ್ಷಕ್ಕೆ ವಿಸ್ತರಿಸಿ ಆದೇಶಿಸಿದ್ದು, ಈ ಮೂಲಕ ಹಲ್ಲೆಕೋರರ ಹೆಡೆಮುರಿ ಕಟ್ಟಲು ಸನ್ನದ್ಧವಾಗಿದೆ.

1 Comment

  • ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿರುವುದು ಕಿಡಿಗೇಡಿಗಳ ಹೆಡೆಮುರಿ ಕಟ್ಟಲು ಸಿಕ್ಕ ಅಸ್ತ್ರ

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...