ಕೊರೊನಾ ವೈರಸ್ ನಿಯಂತ್ರಣಕ್ಕೆ ಹೆಚ್ಚಿನ ಗಮನಕೊಡಿ
ಮುಖ್ಯಮಂತ್ರಿ ಯಡಿಯೂರಪ್ಪಗೆ ಪ್ರಧಾನಿ ಮೋದಿ ಕಟ್ಟುನಿಟ್ಟಿನ ಸಲಹೆ
ಬೆಂಗಳೂರು: ಕೋವಿಡ್-19 ರ ಸೋಂಕು ವ್ಯಾಪಿಸದಂತೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಇಡೀ ದೇಶವೇ ಸ್ತಬ್ದಗೊಂಡಿದೆ. ಆದರೆ, ಕರ್ನಾಟಕದ ಕೆಲವೆಡೆಗಳಲ್ಲಿ ಮಾತ್ರ ಜನರ ಓಡಾಟ ಎಂದಿನಂತೆ ಕಾಣಿಸಿಕೊಂಡಿದೆ. ಈ ಬಗ್ಗೆ ಗಮನಹರಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಶುಕ್ರವಾರ ಬೆಳಗ್ಗೆ ದೂರವಾಣಿ ಮೂಲಕ ಸಲಹೆ ನೀಡಿದ್ದಾರೆ.
ರಾಜ್ಯದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ವಿಧಾನ ಸೌಧದ ಸಂಪುಟ ಸಭಾಂಗಣದ ಬದಲು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆಯನ್ನು ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ವತಃ ಮುಖ್ಯಮಂತ್ರಿಯವರೇ ಪ್ರಕಟಿಸಿದರು.
ಗಾಬರಿ ಬೇಡ !
ರಾಜ್ಯದಲ್ಲಿ ಕೋವಿಡ್-19 ರ ಪೂರಕ ಚಿಕಿತ್ಸೆಗೆ ಅಗತ್ಯವಿರುವ ಯಾವುದೇ ಔಷಧಗಳ ಕೊರತೆ ಇಲ್ಲ. ಕೋವಿಡ್-19 ಸೋಂಕು ಸಕಾರಾತ್ಮಕ ಎಂದು ದೃಢಪಟ್ಟವರೂ ಕೂಡಾ ಸಕಾಲಿಕ ಮತ್ತು ಸೂಕ್ತ ಚಿಕಿತ್ಸೆ ಪಡೆದ ನಂತರ ಶೇ. 98 ರಷ್ಟು ಮಂದಿ ಬದುಕುಳಿದಿದ್ದಾರೆ. ಆದರೆ, ಜನಾರೋಗ್ಯವನ್ನು ಯಾರೂ ನಿರ್ಲಕ್ಷಿಸಬಾರದು. ಏಪ್ರಿಲ್ 14 ರವರೆಗೆ ಎಲ್ಲರೂ ಮನೆಯಲ್ಲೇ ಇದ್ದು ಈ ಸೋಂಕು ಹರಡದಂತೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು.
ಉಚಿತ ಆಹಾರ ವಿತರಣೆ
ಲಾಕ್‍ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಯಾರೂ ಅನ್ನವಿಲ್ಲದೆ ನರಳಾಡಬಾರದು ಎಂಬುದು ಸರ್ಕಾರದ ಸದಾಶಯ. ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‍ಗಳಲ್ಲಿ ಬಡವರಿಗೆ ಪೊಟ್ಟಣಗಳ ಮೂಲಕ ಆಹಾರವನ್ನು ವಿತರಿಸಲು ಕ್ರಮ ವಹಿಸಲಾಗಿದೆ ಅಲ್ಲದೆ, ಅಗತ್ಯ ವಸ್ತುಗಳ ಸಾಗಣೆಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ರೈತರ ಉತ್ಪನ್ನಗಳು ಗೋದಾಮಿಗೆ, ಗೋದಾಮಿನಿಂದ ಮಾರುಕಟ್ಟೆಗೆ, ಮಾರುಕಟ್ಟೆಯಿಂದ ಚಿಲ್ಲರೆ ಅಂಗಡಿಗಳಿಗೆ ಸುಗಮ ಸಾಗಣೆಗೆ ಯಾವುದೇ ಅಡ್ಡಿ ಇಲ್ಲ ಎಂದು ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದರು.
ಸುಲಿಗೆಕೋರರಿಗೆ ಎಚ್ಚರಿಕೆ
ಆಹಾರ ಧಾನ್ಯಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಠಿಸಿ ದುಬಾರಿ ವೆಚ್ಚದಲ್ಲಿ ಮಾರಾಟ ಮಾಡಿ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಳ್ಳುವ ಸುಲಿಗೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಎಚ್ಚರಿಸಿದರು.
ಮುಸಲ್ಮಾನ ಮುಖಂಡರಿಗೆ ಕೃತಜ್ಞತೆ
ಕಂದಾಯ ಸಚಿವ ಆರ್. ಅಶೋಕ್ ಮುಸಲ್ಮಾನ ಮುಖಂಡರ ಜೊತೆಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಲು ಸಮ್ಮತಿಸಿ ಸಾಮಾಜಿಕ ಬದ್ಧತೆ ಪ್ರದರ್ಶಿಸಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಮನವಿಗೆ ಓಗೊಟ್ಟು ಸ್ಪಂದಿಸಿದ ಮುಸಲ್ಮಾನ ಮುಖಂಡರಿಗೆ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿದ್ದಾರೆ.
ಬಡ್ಡಿ ಮನ್ನಾ
ರೈತರ ಬೆಳೆ ಸಾಲ, ಟ್ರಾಕ್ಟರ್ ಸಾಲ, ಟಿಲ್ಲರ್ ಸಾಲ ಹೀಗೆ ಪ್ರಸಕ್ತ ಸಾಲಿನ ಮಾರ್ಚ್ 31 ರ ವರೆಗಿನ ಸುಸ್ತಿ ಬಡ್ಡಿಯ ಮನ್ನಾ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಕಟಿಸಿದರು.
ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಸಕಾಲಿಕ ನೆರವು ಕಲ್ಪಿಸಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಉದಾರ ದೇಣಿಗೆ ನೀಡುವಂತೆ ಉದ್ಯಮಿಗಳಲ್ಲಿ ಮನವಿ ಮಾಡಿದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ, ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
Related
You Might Also Like
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು
ಮುಷ್ಕರಕ್ಕೆ ಕರೆ ಕೊಟ್ಟು ನಿದ್ದೆಕೂಡ ಮಾಡಲಾಗದ ಪರಿಸ್ಥಿತಿ ತಲುಪಿದ ಹೋರಾಟಗಾರರು ಜಂಟಿ ಪದಾಧಿಕಾರಿಗಳು ಡಿಪೋಗಳಿಗೆ ಹೋದರೂ ಮಾತನಾಡಿಸದ ನೌಕರರು ನೌಕರರ ಬೇಡಿಕೆಗೆ ವಿರುದ್ಧವಾದ ಬೇಡಿಕೆ ಇಟ್ಟು ಮುಷ್ಕರಕ್ಕೆ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27, 2024 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ...
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ...
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋಣ
ಬೆಂಗಳೂರು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಬಂದು ಉದ್ಭವವಾಗುವ ಈ ಮಹಾನುಭಾವ ತಮ್ಮ ಸ್ವಾರ್ಥ ಹಾಗೂ ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಹಾಗೂ ಸಾರಿಗೆ ನಿಗಮದ ಆಡಳಿತ ಮಂಡಳಿಯ ಮುಂದೆ...
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದಕ್ಕೆ ಕರೆ ಕೊಡುವುದು...
BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು...
ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್ ಸಮಾವೇಶ
ಬಾಗಲಕೋಟೆ: ರಾಷ್ಟ್ರೀಯ ಸಂಘರ್ಷ ಸಮಿತಿಯ NACಯ ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಒದೇ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್...
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...