NEWSನಮ್ಮರಾಜ್ಯ

ಕೊರೊನಾ ವೈರಸ್‌ ನಿಯಂತ್ರಣ ನಮ್ಮ ಆದ್ಯ ಕರ್ತವ್ಯ

ದಾವಣಗೆರೆ ಸ್ವಚ್ಛತೆಗಾಗಿ ರಾಸಾಯನಿಕ ಔಷಧ ಸಿಂಪಡಣೆ l ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಕೊರೊನಾ ವೈರಸ್ ಹರಡುವುದದನ್ನು ನಿಯಂತ್ರಿಸಲು ಹಾಗೂ ನಗರದ ಸ್ವಚ್ಛತೆಯ ದೃಷ್ಟಿಯಿಂದ ಔಷಧ ಸಿಂಪಡಿಸುವ ಕಾರ್ಯ ಮಾಡಲಾಗುತ್ತಿದೆ. ವಿಶೇಷವಾಗಿ ಹಳೆ ದಾವಣಗೆರೆಯಲ್ಲಿ ಸ್ವಚ್ಛತೆ ಕಡಿಮೆ ಎಂಬ ಮಾತಿನಂತೆ ನಾವು ಮೊದಲು ಹಳೇ ದಾವಣಗೆರೆಯಿಂದ ಆರಂಭಿಸಿ ನಗರದ 45 ವಾರ್ಡ್‍ಗಳಲ್ಲಿಯೂ ಔಷಧ ಸಿಂಪಡಣೆ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲೆಯ ಅಗ್ನಿಶಾಮಕ ಇಲಾಖೆಯ ಜಿಲ್ಲಾ ಅಧಿಕಾರಿ ಬಸವ ಪ್ರಭು ಶರ್ಮ ಇವರ ನೇತೃತ್ವದಲ್ಲಿ ಈ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಔಷಧ ಸಿಂಪಡಣೆಗಾಗಿ ಅಗ್ನಿ ಶಾಮಕ ಇಲಾಖೆಯ ಎರಡು ವಾಹನಗಳನ್ನು ನಿಯೋಜಿಸಲಾಗಿದೆ. ಈ ವಾಹನಗಳು 4,000 ಮತ್ತು 500 ಲೀಟರ್ ಸಾಮಾರ್ಥವನ್ನು ಹೊಂದಿದ್ದು, ಇಡೀ ನಗರವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಪ್ರತಿದಿನ ನಡೆಸಲಾಗುವುದು ಎಂದರು.

ಸಿವಿಲ್ ಸೊಸೈಟಿಯಿಂದ ಹಲವಾರು ಜನ ಕರೆ ಮಾಡಿ ತಾವು ಕೊರೊನಾ ಸೈನಿಕರಾಗಿ ಕೆಲಸ ಮಾಡಲು ಸಿದ್ದರಿದ್ದೇವೆ. ನಮ್ಮನ್ನು ನಿಮ್ಮೊಂದಿಗೆ ಸೇರಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ. ಈ ವಿಷಯದ ಬಗ್ಗೆ ಸಿವಿಲ್ ಸೊಸೈಟಿ ಮಿತ್ರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಹಕ್ಕಿಜ್ವರ

ಹಕ್ಕಿಜ್ವರದಿಂದಾಗಿ ಜಿಲ್ಲೆಯ ಎರಡು ಗ್ರಾಮ, ಫಾರಂಗಳಲ್ಲಿ ಹಕ್ಕಿಗಳು ಸಾಯುತ್ತಿವೆ ಎಂಬ ಸುದ್ದಿ ಮಾಧ್ಯಮಗಳಿಂದ ತಿಳಿದು ಬಂದಿದ್ದು, ಇಂದೇ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ತಂಡವನ್ನು ಕಳುಹಿಸಲಾಗಿದೆ. ಅವರಿಂದ ವರದಿ ಬಂದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದರು.

ಚಿತ್ರದುರ್ಗದ ಕೊರೊನಾ ಸೋಂಕಿತ ಮಹಿಳೆಯನ್ನು ದಾವಣಗೆರೆಯ ಎಸ್‍ಎಸ್ ಆಸ್ಪತ್ರೆಯ ಕೋವಿಡ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಜಿಲ್ಲೆಯ ಜನತೆ ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ. ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಆಯುಕ್ತರೊಂದಿಗೆ ಚರ್ಚೆ ಮಾಡಿ, ಚಿತ್ರದುರ್ಗ ಜಿಲ್ಲಾಧಿಕಾರಿಯ ಅನುಮತಿ ಪಡೆದ ನಂತರ ಆ ಮಹಿಳೆಯನ್ನು ಸುರಕ್ಷಿತವಾಗಿ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರತ್ಯೇಕ ಕೋವಿಡ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಯಾವುದೇ ರೀತಿಯ ಆತಂಕ ಮತ್ತು ಭಯ ಪಡುವ ಅವಶ್ಯಕತೆ ಇಲ್ಲ ಎಂದರು.

ಭಾರತ ಸರ್ಕಾರದ ಆದೇಶ ಬಂದ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಾಮಾನ್ಯ ಜನರ ಜೀವನ ನಿರ್ವಹಣೆಗೆ ಯಾವುದೇ ಅನಾನುಕೂಲವಾಗದಂತೆ ಕ್ರಮ ವಹಿಸಲಾಗುವುದು. ಜಿಲ್ಲೆಯಲ್ಲಿನ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಲು ಸಿದ್ದರಿದ್ದೇವೆ ಎಂದರು.

ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯಪ್ಪ ಮಾತನಾಡಿ,  ಭಾರತ ಲಾಕ್‍ಡೌನ್ ವಿಷಯ ತಿಳಿದ್ದಿದ್ದರೂ ಜನ ಹೊರಗಡೆ ಓಡಾಡುತ್ತಿದ್ದಾರೆ. ಜನರ ಆರೋಗ್ಯದ ಹಿತರಕ್ಷಣೆಯಿಂದಾಗಿ ಜನತೆ ಮನೆಯಿಂದ ಹೊರಗೆ ಬಾರದೇ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದರು.

ಮಹಾನಗರಪಾಲಿಕೆ ಮೇಯರ್ ಅಜಯ್‍ಕುಮಾರ್ ಮಾತನಾಡಿ, ಸೋಡಿಯಂ ಹೈಕ್ಲೋಪ್ಲೋರೆಡ್ ಎಂಬ ರಾಸಾಯನಿಕ ಔಷಧಿಯನ್ನು ಮಹಾನಗರಪಾಲಿಕೆಯವರು ಅಗ್ನಿಶಾಮಕ ಇಲಾಖೆಯ ಮತ್ತು ಆರೋಗ್ಯ ಇಲಾಖೆಯ ಸಹಕಾರ, ಜಿಲ್ಲಾಡಳಿತ ಮತ್ತು ಎಸ್‍ಪಿಯವರ ಸಹಯೋಗದೊಂದಿಗೆ ದಾವಣಗೆರೆ ನಗರವನ್ನು ಸ್ವಚ್ಚವಾಗಿಡಬೇಕು ಎಂಬ ಉದ್ದೇಶದಿಂದ ಈ ಔಷಧಿ ಸಿಂಪಡಿಸುವ ಕೆಲಸ ಮಾಡುತ್ತಿದ್ದೇವೆ. ನಗರದ 45 ವಾರ್ಡ್‍ಗಳು ಮುಗುಯುವರೆಗೂ ಪ್ರತಿದಿನ ಈ ಕಾರ್ಯ ನಿರ್ವಹಿಸಲಾಗುವುದು ಎಂದರು.

ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಡಿವೈಎಸ್‍ಪಿ ನಾಗೇಶ್ ಐತಾಳ್, ಪೊಲೀಸ್, ಅಗ್ನಿಶಾಮಕ ಇಲಾಖೆಯ, ಮಹಾನಗರಪಾಲಿಕೆ ಸಿಬ್ಬಂದಿ  ಇದ್ದರು.

 

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ