NEWSನಮ್ಮರಾಜ್ಯ

ಕೊರೊನಾ ಸಂಬಂಧ ನಾಳೆ ಸಿಎಂ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ  

45ಸಾವಿರ‌ ಕುಟುಂಬಗಳಿಗೆ ರೇಷನ್‌ಕಿಟ್ ವಿತರಣೆ ವೇಳೆ ಸಚಿವ ಶ್ರೀರಾಮುಲು ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ರಾಜ್ಯದಲ್ಲಿ ಕೊವೀಡ್ 19- ತಡೆಗಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಾಳೆ(ಏ.19) ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಬಳ್ಳಾರಿಯ ರೂಪನಗುಡಿ ರಸ್ತೆಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಅವರು ಹಾಗೂ ದಾನಿಗಳಿಂದ 45ಸಾವಿರ‌ ಕುಟುಂಬಗಳಿಗೆ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಬಳ್ಳಾರಿಯಲ್ಲಿ 45 ಸಾವಿರ ಕುಟುಂಬಗಳಿಗೆ ಶಾಸಕ ಸೋಮಶೇಖರ್ ರೆಡ್ಡಿ ಮತ್ತು ದಾನಿಗಳು ರೇಷನ್ ಮುಟ್ಟಿಸೋ ಕೆಲಸ ಮಾಡುತ್ತಿದ್ದಾರೆ.ದಾನಿಗಳಿಗೆ ಭಗವಂತ ಮತ್ತಷ್ಟು ಶಕ್ತಿ ಕೊಡಲಿ ಎಂದು ಬೇಡುವೆ ಎಂದರು.

ನಿನ್ನೆ ಯಡಿಯೂರಪ್ಪ ನಮ್ಮ ಸಭೆ ಕರೆದು, ಮಾಹಿತಿ ಪಡೆದಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳನ್ನು ಎಬಿಸಿ ಅಂತ ವಿಂಗಡಣೆ ಮಾಡಲಾಗಿದೆ. ಏಪ್ರಿಲ್ 20ರ ನಂತರ ನಿಯಮ ಸಡಲಿಕೆಗಳ ಕುರಿತು ಚರ್ಚೆ ಮಾಡಲಾಗುತ್ತದೆ. ಜನರು ಕೂಡ ಬಹಳ ದಿನಗಳಾಯ್ತು ಒಂದೇ ಕಡೆ ಇದ್ದಾರೆ. ಕೆಲವೆಡೆ ದಿನದಿಂದ ದಿನಕ್ಕೆ ಕೇಸ್ ಹೆಚ್ಚಾಗುತ್ತಿವೆ. ಜನರು ಕೂಡ ಸಹಕಾರ ಕೊಡಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.

ಆರೆಂಜ್ ಝೋನ್ ನಲ್ಲಿ‌ ಲಾಕ್ ಡೌನ್ ಸಡಲಿಕೆ ವಿಚಾರವಾಗಿ ಸಿಎಂ ಯಡಿಯೂರಪ್ಪ ಬಳಿ ನಮ್ಮ ಸಲಹೆ ನೀಡಿದ್ದೇನೆ ಎಂದು ವಿವರಿಸಿದ ಅವರು ಹೊಸಪೇಟೆಯಲ್ಲಿ 11 ಪಾಸಿಟಿವ್ ಪ್ರಕರಣ ವಿಚಾರದ ಕುರಿತ ಸೀಲ್ ಡೌನ್ ಆದ ಪ್ರದೇಶಗಳು ಮಾತ್ರ ಕಟ್ಟುನಿಟ್ಟಾಗಿ ಮಾಡಿ, ಉಳಿದ ಕಡೆ ಸಡಲಿಕೆ ನೀಡೋದು ಒಳ್ಳೇಯದು ಎಂದು ಅಭಿಪ್ರಾಯಪಟ್ಟರು.

ಶಾಸಕ ಜಿ.ಸೋಮಶೇಖರ್ ರೆಡ್ಡಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಸಾವಿರ ವರ್ಷಗಳ ಇತಿಹಾಸವಿರುವ ಈಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಚಾಲನೆ: ನೇಮಿರಾಜ್ ಕೃಷಿ ಸಚಿವರ ತವರು ನೆಲದಲ್ಲೇ ಕೊಬ್ಬರಿ ಮಾರಿದ ರೈತರ ಪರದಾಟ : ರೈತ ಸಂಘ ಕಿಡಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿಗಾರರ ಬೃಹತ್ ಪ್ರತಿಭಟನೆ- ಆಕ್ರೋಶ ಮಳೆ ನೀರ ನೇರವಾಗಿ ಒಳಚರಂಡಿಗೆ ಬಿಡುವವರ ವಿರುದ್ಧ ಜಲಮಂಡಳಿ ಕ್ರಮಕ್ಕೆ ಆಕ್ಷೇಪ: ಡಿಸಿಎಂ ಡಿಕೆಶಿಗೆ ಎಎಪಿ ಬಹಿರಂಗ ಪತ್ರ ಕಿಟಕಿ ಮೂಲಕ ನುಸುಳಿ ಹಣ ದೋಚುತ್ತಿದ್ದ ಖತರ್ನಾಕ್‌ ಅಕ್ಕ-ತಮ್ಮ ಅಂದರ್‌ KSRTC: ನೌಕರರ ಸಮಸ್ಯೆ ನೀಗಿಸುವ ಸಮರ್ಥ ಪಡೆಯೂ ಇಲ್ಲ ಸಮರ್ಥ ನಾಯಕನೂ ಇಲ್ಲ! ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಮಹರ್ಷಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ: ಸಚಿವ ನಾಗೇಂದ್ರ ಸ್ಪಷ್... ಪಿ.ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಮಂತ್ರಿಯ ಸಂಪುಟದಿಂದ ಕಿತ್ತುಹಾಕಿ: ಎಎಪಿ KKRTC: ಡಬಲ್ ಡ್ಯೂಟಿ, ದೂರದ ಪ್ರಯಾಣಕ್ಕೆ ವಿಶ್ರಾಂತಿ ಕಡ್ಡಾಯ ಆದರೆ ದೇವದುರ್ಗ ಘಟಕದ ನೌಕರರಿಗೆ ಮರೀಚಿಕೆ!