NEWSದೇಶ-ವಿದೇಶ

ಕೊರೊನಾ ಸೋಂಕಿಗಿಂತ ಹಸಿವಿನಿಂದ ಸಾಯುತ್ತಿರುವವರೇ ಹೆಚ್ಚು

ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋ ಬಿಡುಗಡೆ ಮಾಡಿದ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್

ವಿಜಯಪಥ ಸಮಗ್ರ ಸುದ್ದಿ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಜನ ಕೊರೊನಾ ವೈರಸ್ ಗಿಂತ ಹೆಚ್ಚಾಗಿ ಹಸಿವಿನಿಂದ ಸಾಯುತ್ತಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಈ ಕುರಿತಂತೆ ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಅವರು, ಕೊರೊನಾ ವೈರಸ್ ನಿಂದಾಗಿ ವಿಶ್ವಾದ್ಯಂತ ಆರ್ಥಿಕತೆ ಸ್ಥಗಿತಗೊಂಡಿದ್ದು, ಇದರಿಂದ ದಿಕ್ಕೂ ಕಾಣದಂತಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇನ್ನೊದೆಡೆ ಕೊರೊನಾವೈರಸ್‌ನಿಂದಾಗಿ ವಿಶ್ವದಾದ್ಯಂತದ ನಿತ್ಯ ಸಹಸ್ರಾರು ಜನ ಹಸುನೀಗುತ್ತಿದ್ದಾರೆ. ಜತೆಗೆ ಕೊರೊನಾವೈರಸ್ ವಿರುದ್ಧ ಹೋರಾಡುವ ಸವಾಲುಗಳು ಎದುರಾಗಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಂದು ಆರ್ಥಿಕತೆಯನ್ನು ನಿರ್ವಹಿಸುವುದು ಕಠಿಣವಾಗಿದ್ದು, ಒಂದು ರೀತಿಯ ಸವಾಲೇ ಎದುರಾಗಿದೆ. ಪಾಕಿಸ್ತಾನದ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಜನರು ಹಸಿವಿನಿಂದ ಸಾಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ನೀವು ದಯಮಾಡಿ ಸಹಾಯ ಮಾಡಿ. ಸಾಲದ ರೂಪದಲ್ಲಿ ಪರಿಹಾರ ನೀಡಿ ಎಂದು ವಿಶ್ವ ಸಮುದಾಯಕ್ಕೆ ಮನವಿ ಮಾಡಿದ್ದಾರೆ.

Leave a Reply

error: Content is protected !!