NEWSನಮ್ಮರಾಜ್ಯ

ಕೊರೊನಾ ಸೋಂಕಿಗೆ ದಾವಣಗೆರೆಯಲ್ಲಿ ಮೊದಲ ಬಲಿ

ಕರ್ನಾಟಕದಲ್ಲಿ 23ಕ್ಕೆ ಏರಿದ ಸಾವಿನ ಸಂಖ್ಯೆ l ಆತಂಕ ಮೂಡಿಸುತ್ತಿದೆ ಕೋವಿಡ್‌-19

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಮಾರಕ ಕೊರೋನಾ ವೈರಸ್ ಗೆ ಮೊದಲ ಬಲಿಯಾಗಿದ್ದು, 69 ವರ್ಷದ ವೃದ್ಧರೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ(ರೋಗಿ ಸಂಖ್ಯೆ 556) ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೋನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.

ಈ ವ್ಯಕ್ತಿಯಿಂದ 1 ವರ್ಷದ  ಮಗು ಸೇರಿದಂತೆ 5 ಮಂದಿಗೆ ಕೊರೋನಾ ಹರಡಿದೆ. ವೃದ್ಧನ ಮೂರು ಮಂದಿ ಸೊಸೆಯಂದಿರು, ಓರ್ವ ಪುತ್ರ ಸೇರಿ ಒಂದು ವರ್ಷದ ಮೊಮ್ಮಗನಿಗೂ ಕೂಡ ಸೋಂಕು ತಗುಲಿದ್ದು ಎಲ್ಲರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ದಾವಣಗೆರೆ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ.

ಈ ನಡುವೆ ಜಿಲ್ಲೆಯಲ್ಲಿ ಸೋಂಕು ಪೀಡಿತರ ಸಂಪರ್ಕ ಹೊಂದಿದ್ದ ಸುಮಾರು 82 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಶನಿವಾರ ಅವರ ವರದಿ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ. ಇಲ್ಲಿಯವರೆಗೆ ದಾವಣಗೆರೆಯಲ್ಲಿ 10 ಮಂದಿಗೆ ಕೊರೋನಾ ಬಂದಿದ್ದು, ಇಬ್ಬರು  ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ