NEWS

ಕೊರೊನಾ ಸೋಂಕಿನ ಬಗ್ಗೆ ಸ್ವಯಂ ಸೇವಕರು ಅರಿವು ಮೂಡಿಸಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸಿದ್ದರಾಮಪ್ಪ ಕರೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕೊರೋನಾ ಸೋಂಕು ತಡೆಗಟ್ಟಲು ಮತ್ತು ನಿಯಂತ್ರಿಸುವ ಉದ್ದೇಶ ಹಾಗೂ ಸಾಮಾಜಿಕ ಸೇವೆಯ ಹಿತದೃಷಿಗಾಗಿ ಸ್ವ-ಇಚ್ಚೆಯಿಂದ ಸ್ವಯಂ ಸೇವಕರು ಪಾಲ್ಗೊಂಡು ಜನತೆಯಲ್ಲಿ ಕೊರೊನಾ ಸೋಂಕು ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ ಕರೆ ನೀಡಿದ್ದಾರೆ.

ಇಲಾಖೆಯ ಕಚೇಯಲ್ಲಿ  ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ ಕೊರೋನಾ ಸೋಂಕಿನ ಬಗ್ಗೆ ಜನ ಜಾಗೃತಿ ಮೂಡಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್‌ನ ಬಗ್ಗೆ ಜನ ಸಾಮಾನ್ಯರಲ್ಲಿ ಅದರ ಬಗ್ಗೆ ಆರೋಗ್ಯ ಶಿಕ್ಷಣವನ್ನು ಪ್ರತಿಯೊಬ್ಬ ಸಾರ್ವಜನಿಕರಿಗೂ ಅರಿವು ಮೂಡಿಸುವುದರೊಂದಿಗೆ ಸೋಂಕು ಹರಡದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯ ಸಮಸ್ತ ಜನತೆಯು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಆಗುವ ಲಾಭಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಜನರು ಪಾಲಿಸುವಂತೆ ನೋಡಿಕೊಳ್ಳಬೇಕು ನಿರ್ಗತಿಕರು, ಅಸಹಾಯಕರು, ಹೊರ ಜಿಲ್ಲೆಯ ಕಾರ್ಮಿಕರುಗಳಿಗೆ ಆಹಾರದ ಕೊರತೆ ಉಂಟಾದಲ್ಲಿ ಕೂಡಲೇ ಪ್ರಾಧಿಕಾರದ ಗಮನಕ್ಕೆ ತರುವುದರೊಂದಿಗೆ ಅವರಿಗೆ ನೆರವಾಗಬೇಕು ಸಣ್ಣ ಪುಟ್ಟ ಸಮಸ್ಯೆಗಳಿದ್ದಲ್ಲಿ ಸ್ಥಳೀಯವಾಗಿ ಬಗೆಹರಿಸಬೇಕು ಹೆಚ್ಚಿನ ಸಮಸ್ಯೆ ಇದ್ದಲ್ಲಿ ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ಪ್ರಕರಣಗಳು ಕಂಡು ಬಂದಲ್ಲಿ ಚಿಕಿತ್ಸೆ ನೀಡಲು ಮಧುವನ ಬಡಾವಣೆಯ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದ್ದು ಪ್ರಕರಣಗಳು ಹೆಚ್ಚಾದಲ್ಲಿ ಖಾಸಗಿ ಆಸ್ಪತ್ರೆಯಲ್ಲಿಯೂ ಸಹ ಪ್ರತ್ಯೇಕ ಕೊಠಡಿ ವ್ಯವಸ್ಥೆಗೆ  ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದರು.

ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು, ಸ್ವಯಂ ಸೇವಕರುಗಳು ಸೇರಿದಂತೆ ಮತ್ತಿತ್ತರ ಸಂಘ- ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...