ದೇಶ-ವಿದೇಶ

ಕೊರೋನಾ ವೈರಸ್ ತಡೆಗಟ್ಟಲು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ: ತಹಸೀಲ್ದಾರ್‌ ವೆಂಕಟೇಶಯ್ಯ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕೊರೋನಾ ವೈರಸ್ (ಕೋವಿಡ್-19) ಸೋಂಕು ಹರಡದಂತೆ ತಡೆಗಟ್ಟಲು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು, ಅಲ್ಲದೆ ಇತರೆ ರೋಗಗಳು ಹರಡದಂತೆ ತಡೆಗಟ್ಟಲು ಒಳಚರಂಡಿ ಸ್ವಚ್ಛತೆ,  ಔಷಧಿ ಸಿಂಪಡಣೆ ಮಾಡಬೇಕು.  ಸ್ವಚ್ಛತೆ ಕುರಿತು ಕೈಗೊಂಡ ಕ್ರಮಗಳ ಕುರಿತು ನಿತ್ಯವೂ ವರದಿ ಸಲ್ಲಿಸುವಂತೆ ತಹಸೀಲ್ದಾರ್ ವೆಂಕಟೇಶಯ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಕೊರೋನಾ ವೈರಸ್ ಸೋಂಕು ತಡೆ ಕುರಿತು ಬುಧವಾರ ಏರ್ಪಡಿಸಿದ ಮುಂಜಾಗ್ರತಾ ಕ್ರಮಗಳ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ಕೊರೋನಾ ವೈರಸ್ ಸೋಂಕು ಹರಡದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು, ಅಲ್ಲದೆ ಇತರೆ ರೋಗಗಳು ಹರಡದಂತೆ ತಡೆಗಟ್ಟಲು ಒಳಚರಂಡಿ ಸ್ವಚ್ಛತೆ,  ಔಷಧಿ ಸಿಂಪಡಣೆ ಮಾಡಬೇಕು.  ಕೊಳಚೆ ಪ್ರದೇಶಗಳಲ್ಲಿ ಸೊಳ್ಳೆಗಳು ಹೆಚ್ಚಾಗಿರುವುದರಿಂದ ಪ್ರತಿನಿತ್ಯವೂ ಸ್ವಚ್ಛಗೊಳಿಸಿ  ಕೈಗೊಂಡ ಕ್ರಮಗಳ ಕುರಿತು ನಿತ್ಯವೂ ವರದಿ ಸಲ್ಲಿಸಬೇಕು.  ವಿದೇಶದಿಂದ ಯಾರಾದರೂ ತಾಲೂಕಿನ ವಿವಿಧ ಗ್ರಾಮಗಳಿಗೆ ಬಂದಿರುವ ಜನರ ಬಗ್ಗೆ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪ್ರತಿದಿನವೂ ವರದಿ ಮಾಡಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದರು. ಗ್ರಾಮಮಟ್ಟದಲ್ಲಿ ಪಿಡಿಒ, ಗ್ರಾಮಲೆಕ್ಕಾಧಿಕಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಕಂದಾಯ ನಿರೀಕ್ಷಕರು ತಂಡ ರಚಿಸಲಾಗಿದ್ದು, ತಂಡವು ನಿತ್ಯವೂ ವರದಿ ನೀಡಬೇಕು ಎಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ.ಗಿರೀಶ್ ಮಾತನಾಡಿ, ಕೊರೋನಾ ವೈರಸ್ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ. ನೆಗಡಿ, ಕೆಮ್ಮ, ಜ್ವರದಿಂದ ಬಳಲುತ್ತಿರುವವರು ಮಾತ್ರ ಮಾಸ್ಕ್ ಧರಿಸಬಹುದು ಎಂದು ಹೇಳಿದರು.

ಕೊರೋನಾ ಶಂಕಿತ ಪ್ರಕರಣಗಳು ಪತ್ತೆಯಾದಲ್ಲಿ ರಾಜ್ಯದ ಬೆಂಗಳೂರು, ಶಿವಮೊಗ್ಗ, ಹಾಸನ, ಮೈಸೂರು ಸೇರಿದಂತೆ ಐದು ಭಾಗಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ.  ಜಿಲ್ಲೆಯಲ್ಲಿ ಕೊರೋನ ವೈರಸ್ ಲಕ್ಷಣ ಕಂಡುಬಂದರೆ ಅಂತವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ 10 ಹಾಸಿಗೆಯ ಐಸೊಲೆಶನ್ ವಾರ್ಡ್, ಬಸವೇಶ್ವರ ಆಸ್ಪತ್ರೆಯಲ್ಲಿ 15 ಬೆಡ್‍ನ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ಡಾ. ಭಾಗ್ಯಶ್ರೀ, ತಾಪಂ ಇಒ ಕೃಷ್ಣನಾಯ್ಕ್, ನಗರಸಭೆ ಪೌರಯುಕ್ತ ಜೆ.ಟಿ. ಹನುಮಂತರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್ ಮಂಜುನಾಥ್, ಬಸವೇಶ್ವರ ವೈದ್ಯಕೀಯ ಕಾಲೇಜ್‍ನ ಸಿಬ್ಬಂದಿಗಳು, ಸಮುದಾಯ ಔಷಧ ವಿಭಾಗದವರು,  ಪಿಡಿಒ ಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...