NEWS

ಕೋವಿಡ್‌-19 ಮೊಬೈಲ್ ಫೀವರ್ ಕ್ಲಿನಿಕ್ ಬಸ್‌ಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು  ಗ್ರಾಮಾಂತರ ವಿಭಾಗದ ವತಿಯಿಂದ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೊವೀಡ್-19 ಮೊಬೈಲ್ ಫೀವರ್ ಕ್ಲಿನಿಕ್ ಬಸ್ಸಂಚಾರಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಚಾಲನೆ ನೀಡಿದರು.

ಕೆಎಸ್‌ಆರ್‌ಟಿಸಿ ವತಿಯಿಂದ ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಕೋವಿಡ್‌-19 ಮೊಬೈಲ್ ಫೀವರ್ ಕ್ಲಿನಿಕ್ ಬಸ್ ಆರಂಭಿಸಿದ್ದು, ಮೈಸೂರು ಗ್ರಾಮಾಂತರ ಹಾಗೂ ನಗರ ವಿಭಾಗದ ಅಧಿಕಾರಿಗಳು ಬಹಳ ಕಡಿಮೆ ಅವಧಿಯಲ್ಲಿ ನಿರ್ಮಿಸಿದ್ದಾರೆ. ನಮ್ಮ ವೈದ್ಯರ ತಂಡವು ಕೂಡಾ ಬಸ್ ಪರಿಶೀಲಿಸಿ ಚಿಕಿತ್ಸೆ ನೀಡಲು ಯೋಗ್ಯವಾಗಿದೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಡಿಸಿ ತಿಳಿಸಿದರು.

ಬಸ್ ಸಂಚಾರವು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಲಿದ್ದು, ಅಲ್ಲಿನ ಜನರಿಗೆ ಹೆಚ್ಚು ಉಪಯೋಗವಾಗಲಿದೆ. ನಗರ ಪ್ರದೇಶದ ಜನರಿಗೆ ಸಮೀಪದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಜಿಲ್ಲಾಸ್ಪತ್ರೆ ಇರುವುದರಿಂದ ಅವರಿಗೆ ಇದರ ಅಗತ್ಯ ಕಡಿಮೆ. ಅದರಂತೆ ಈಗಾಗಲೇ ಸೋಂಕು ಕಂಡುಬಂದಿರುವ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಬಸ್ ಸಂಚರಿಸಿ ತಪಾಸಣೆ ನಡೆಸಲಿದೆ ಎಂದು ಮಾಹಿತಿ ನೀಡಿದರು.

ಬಸ್ಸಿನಲ್ಲಿ ಒಬ್ಬರು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೂ ಇರುತ್ತಾರೆ. ಪ್ರಾಥಮಿಕವಾಗಿ ಕಂಡುಬರುವ ಜ್ವರ, ನೆಗಡಿ, ಕೆಮ್ಮು ಹಾಗೂ ಮದುಮೇಹಕ್ಕೆ ಮಾತ್ರ ಚಿಕಿತ್ಸೆ ನೀಡುತ್ತಾರೆ. ಇಲ್ಲಿ ಸ್ವಾಬಿಂಗ್ ತಪಾಸಣೆ ಮಾಡುವುದಿಲ್ಲ. ಅಗತ್ಯವಿದ್ದರೆ ಸ್ಥಳೀಯ ಅಂಬುಲೆನ್ಸ್ ಮೂಲಕ ಸಮೀಪವಿರುವ ಸ್ವಾಬಿಂಗ್ ಸೆಂಟರ್ ಒಳಗೊಂಡಿರುವ ಆಸ್ಪತ್ರೆಗೆ ಕಳುಹಿಸಿಕೊಡುತ್ತಾರೆ ಎಂದು ತಿಳಿಸಿದರು.

ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾಡಿಎಚ್‌ಒ ಡಾ.ವೆಂಕಟೇಶ್, ಕೆ.ಎಸ್.ಆರ್.ಟಿ.ಸಿ ಮೈಸೂರು ಗ್ರಾಮಾಂತರ ವಿಭಾಗದ ಅಧಿಕಾರಿ ಆರ್.ಆಶೋಕ್ ಕುಮಾರ್, ನಗರ ವಿಭಾಗದ ಅಧಿಕಾರಿ ಎಸ್.ಪಿ.ನಾಗರಾಜು ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು