NEWSನಮ್ಮಜಿಲ್ಲೆ

ಕೋವಿಡ್ ಮೂರನೇ ಹಂತ ತಲುಪಿದಲ್ಲಿ ಎದುರಿಸಲು ಜಿಲ್ಲಾಡಳಿತ ಸಜ್ಜು

ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವಿಶ್ವಾಸದ ನುಡಿ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಕೋವಿಡ್-19 ಸಾಂಕ್ರಾಮಿಕ ರೋಗವು ತೀವ್ರತರವಾಗಿ ಹರಡುತ್ತಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮೂರನೇ ಹಂತ ತಲುಪಿದರೂ ಸಹ ಪರಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡು ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ತೆಗೆದುಕೊಂಡ ಮುಂಜಾಗೃತಾ ಕ್ರಮ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ ಜಿಲ್ಲಾಡಳಿತದಿಂದ ಜಿಲ್ಲೆಯಲ್ಲಿರುವ ನುರಿತ ವೈದ್ಯರು, ನರ್ಸ್‍ಗಳ ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿಗಳು ಹಾಗೂ ಅಗತ್ಯವಿರುವ ಕಟ್ಟಡಗಳು, ಬೆಡ್‍ಗಳ ವ್ಯವಸ್ಥೆ, ತಾಲ್ಲೂಕು ಮಟ್ಟಗಳಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಗುರುತಿಸಿರುವ ಕೋವಿಡ್ ಸೋಂಕಿತರ ನಿಗಾವಣೆ ಪ್ರಥಮ ಹಾಗೂ ದ್ವೀತಿಯ ಹಂತದವರ ಪರೀಕ್ಷೆ ಮುಂತಾದವನ್ನು ಮಾಡಲಾಗುತ್ತಿದೆ ಎಂದರು.

ಎರಡು ಎಪಿಸೆಂಟರ್‍ಗಳಾದ ನಿಜಲಿಂಗಪ್ಪ ಬಡಾವಣೆ ಹಾಗೂ ಜಿಎಂಐಟಿ ಸುತ್ತಲಿನ ಮೂರು ಕಿ.ಮೀ ಪ್ರದೇಶದಲ್ಲಿ ಬರುವ ವಿನೋಬನಗರ, ಎಲ್ಲಮ್ಮನಗರ, ಎಂಸಿಸಿ ಎ ಬ್ಲಾಕ್‍ಗಳು ಕಂಟೈನ್‍ಮೆಂಟ್ ಜೋನ್ ವ್ಯಾಪ್ತಿಯಲ್ಲಿ ಬರಲಿದ್ದು, ಈ ಕಂಟೈನ್‍ಮೆಂಟ್ ಜೋನ್‍ನಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, 5 ಕೀ.ಮಿ ಪ್ರದೇಶವನ್ನು ಬಫರ್ ಜೋನ್ ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.

ಬೇಸಿಗೆ ಕಾಲದಲ್ಲಿ ಮೋಟಾರು ಪಂಪುಗಳು ಸುಟ್ಟುಹೋಗುವ ಕಾರಣ ಜಿಲ್ಲಾದ್ಯಂತ 36 ವೈಂಡಿಂಗ್ ಶಾಪ್‍ಗಳನ್ನು ಗುರುತಿಸಲಾಗಿದೆ. ಹಾಗೂ ಕೊರೊನಾ ಸೋಂಕು ಎದುರಿಸಲು ಜಿಲ್ಲೆಯಲ್ಲಿ ಕಂಟಿನ್‍ಜೆನ್ಸಿ ಪ್ಲಾನ್ ತಯಾರಾಗಿದ್ದು, ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ವಿದ್ಯಾನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಬಾಡಿಗೆ ಇರುವ ಬನಾರಸ್‍ನ ನಿವಾಸಿಯೋರ್ವರು ಬನಾರಸ್‍ಗೆ ಹೋಗಿ ಬಂದ ಕಾರಣ ಅವರ ಮನೆ ಮಾಲೀಕರು ತೊಂದರೆ ಕೊಡುತ್ತಿದ್ದಾರೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಿ ಅವರಿಗೆ ಮಾರ್ಗದರ್ಶನ ಹಾಗೂ ಎಚ್ಚರಿಕೆ ನೀಡಲಾಗಿದೆ ಎಂದು ವಿವರಿಸಿದರು.

ಎಸ್‍ಪಿ ಹನುಮಂತರಾಯ, ಎಸಿ ಮಮತಾ ಹೊಸಗೌಡರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಸ್ಮಾರ್ಟ್‍ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಎಸ್ ಡಾ. ನಾಗರಾಜ್ ಮತ್ತಿತರೆ ಅಧಿಕಾರಿಗಳು ಹಾಜರಿದ್ದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು