NEWS

ಕೋವಿಡ್ ಸೋಂಕು ಹಿನ್ನೆಲೆ: ಕೊಳಚೆ ಪ್ರದೇಶಗಳಲ್ಲಿ ಉಚಿತ ಹಾಲು ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಿಸಿರುವುದರಿಂದ ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಅಧಿಸೂಚಿತ ಹಾಗೂ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳಲ್ಲಿ ಉಚಿತವಾಗಿ ಹಾಲು ವಿತರಿಸುವ ಕಾರ್ಯಕ್ಕೆ ಧಾರವಾಡ ಶ್ರೀನಗರದ ಭಾವಿಕಟ್ಟಿ ಪ್ಲಾಟಿನಲ್ಲಿ ಬೃಹತ್ ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು.

ಅವಳಿನಗರದಲ್ಲಿ ಸುಮಾರು 37  ಸಾವಿರ ಕೊಳಚೆ ಪ್ರದೇಶಗಳ ಕುಟುಂಬಗಳು ,ಸುಮಾರು 5 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರಿಗೆ , ಇಟ್ಟಿಗೆ ಭಟ್ಟಿ ಕಾರ್ಮಿಕರಿಗೆ  ಹಾಲು ವಿತರಿಸಲಾಗುತ್ತಿದೆ. ಧಾರವಾಡ ಹಾಲು ಒಕ್ಕೂಟ ಪ್ರತಿನಿತ್ಯ 25 ಸಾವಿರ ಲೀಟರ್ ಹಾಲು ಪೂರೈಸಲಿದೆ.

ಸಾಂಕೇತಿಕವಾಗಿ ಹಾಲು ವಿತರಿಸಿದ ಸಚಿವರು ನಾಗರಿಕರು ಲಾಕ್‍ಡೌನ್ ಅವಧಿಯಲ್ಲಿ ಮನೆಯಲ್ಲಿಯೇ ಇದ್ದು ಸಹಕರಿಸಬೇಕು. ವಸತಿ ಪ್ರದೇಶಗಳಿಗೆ ಕಾಯಿಪಲ್ಯ, ಕಿರಾಣಿ ಮಾರಾಟಗಾರರು ಬರುತ್ತಿರುವ ಬಗ್ಗೆ ಜನರಿಂದ ಮಾಹಿತಿ ಪಡೆದರು.

ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ದೀಪಾ ಚೋಳನ್, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ,ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಸುರೇಶ ನಾಯಕ, ಜಂಟಿ ನಿರ್ದೇಶಕ ಡಿ.ಟಿ.ಕಳಸದ, ಉಪವ್ಯವಸ್ಥಾಪಕ ಆನಂದ ಬಬಲೇಶ್ವರ, ನೋಡಲ್ ಅಧಿಕಾರಿ ನಂದೀಶ ಪ್ಯಾಟಿಮಠ ಇತರರು ಇದ್ದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ