ಕೋವಿಡ್-19 ಹತೋಟಿಗೆ ಬಿಬಿಎಂಪಿ ಹರಸಾಹಸ
ಬೆಂಗಳೂರು ಶುಚಿತ್ವಕ್ಕೆ ಸೋಂಕು ನಿವಾರಕ ಔಷಧ ಸಿಂಪಡಣೆ l ತರಕಾರಿ ಮಾರಾಟಕ್ಕೆ ಕ್ರಮ
ಬೆಂಗಳೂರು: ನಗರದಲ್ಲಿ ಕೊರೊನಾ ವೈರೆಸ್ ಸೋಂಕು ಮತ್ತು ಸಾಂಕ್ರಾಮಿಕ ರೋಗಗಳು ಹರಡದಂತೆ ಪಾಲಿಕೆಯು ಈಗಾಗಲೇ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಪಾಲಿಕೆ ಎಲ್ಲಾ ವಾರ್ಡ್ಗಳಲ್ಲಿ ಜಟ್ಟಿಂಗ್ ಯಂತ್ರ, ಅಗ್ನಿಶಾಮಕ ವಾಹನ ಹಾಗೂ ದ್ವಿಚಕ್ರ ವಾಹನ, ಟ್ರ್ಯಾಕ್ಟರ್‌ಗಳಲ್ಲಿ ಡ್ರಮ್‌ಗಳನ್ನಿಟ್ಟು, ಟ್ಯಾಂಕರ್, ಡ್ರೋನ್ ಹಾಗೂ ಸಿಬ್ಬಂದಿ ಸಹಯೋಗದಲ್ಲಿ ಸೋಂಕು ಸಿವಾರಕ ಸಿಂಪಡಣೆ ಮಾಡಲಾಗುತ್ತಿದೆ. ಸೋಂಕು ನಿವಾರಕ ಸಿಂಪಡಿಸಲು ಹೊಸದಾಗಿ 400 ಪವರ್ ಸ್ಪ್ರೇಯರ್ ಯಂತ್ರ ಹಾಗೂ 19 ಮಿಸ್ ಬ್ಲೋವರ್ ಯಂತ್ರಗಳನ್ನು ಕರೀದಿಸಲು ಕ್ರಮವಹಸಿಲಾಗಿದೆ. ಜತೆಗೆ ಸೊಳ್ಳೆಗಳ ನಿಯಂತ್ರಣಕ್ಕೆ ಪಾಗಿಂಗ್ ಕೂಡಾ ಮಾಡಲಾಗುತ್ತಿದೆ.
ನಗರಾದ್ಯಂತ ಸ್ವಚ್ಛತಾ ಕಾರ್ಯ
ನಗರದ ಪ್ರಮುಖ ರಸ್ತೆಗಳನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ಕಸ ಗುಡಿಸುವ ಯಂತ್ರಗಳ ಮೂಲಕ ಶುಚಿತ್ವ ಕಾಪಾಡಲಾಗುತ್ತಿದೆ. ಕೆ.ಆರ್.ಮಾರುಕಟ್ಟೆ ಪ್ರದೇಶದಲ್ಲಿದ್ದ ಸಂಪೂರ್ಣ ಕಸ, ಕಟ್ಟಡ ತ್ಯಾಜ್ಯವನ್ನು ತೆರವುಗಳಿಸಲಾಗಿದೆ. ಮಾರುಕಟ್ಟೆ ಬಳಿಯ ಮೇಲ್ಸೇತುವೆ ಕೆಳಭಾಗದಲ್ಲಿದ್ದ ತ್ಯಾಜ್ಯವನ್ನೆಲ್ಲಾ ತೆರವುಮಾಡಿ ಬ್ಲೀಚಿಂಗ್ ಪುಡಿ ಹಾಕಿ ಸ್ವಚ್ಛಗೊಳಿಸಲಾಗಿದೆ.
ಸೇವಾ ಕೇಂದ್ರ ಹಾಗೂ ನಿರಾಶ್ರಿತರಿಗೆ ಆಶ್ರಯ
ನಾಗರಿಕರಿಗೆ ಅಗತ್ಯ ಸೇವೆಗಳನ್ನು ಕಲ್ಪಿಸುವ ಉದ್ದೇಶದಿಂದ ಹಾಗೂ ಕೊರೊನಾ ವೈರೆಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಮಾಹಿತಿ ಕೇಂದ್ರಗಳನ್ನು ತೆರೆಯಲಾಗಿದೆ. ಪಾಲಿಕೆ ನಡೆಸುತ್ತಿರುವ 9 ನಿರಾಶ್ರಿತ ಕೇಂದ್ರಗ(ಪಶ್ಚಿಮ ವಲಯ – ಗೂಡ್ ಶೆಡ್ ರಸ್ತೆಯಲ್ಲಿ 2 ಕೇಂದ್ರ, ರಾಜಾಜಿನಗರದ ರಾಮಮಂದಿರ ಬಳಿ ಹಾಗೂ ಉಪ್ಪಾರ ಪೇಟೆ ಬಳಿ, ಪೂರ್ವ ವಲಯ – ಮರ್ಫಿಟೌನ್ ಮಾರುಕಟ್ಟೆ ಬಳಿ, ಮಹದೇವಪುರ ವಲಯ – ಊಡಿ ಬಳಿ, ಯಲಹಂಕ ವಲಯ – ಬಾಗಲೂರು ಬಳಿ, ಬೊಮ್ಮನಹಳ್ಳಿ ವಲಯ – ಜಂಬೂ ಸವಾರಿ ದಿಣ್ಣೆ ಬಳಿ, ದಾಸರಹಳ್ಳಿ ವಲಯ – ತುಮಕೂರು ಮುಖ್ಯರಸ್ತೆ) ಳಲ್ಲಿ 380 ನಿರಾಶ್ರಿತರಿಗೆ ಊಟದ ವ್ಯವಸ್ಥೆ ಮಡಲಾಗಿದ್ದು, ಆರೋಗ್ಯ ತಪಾಸಣೆ ಕೂಡ ನಡೆಸಲಾಗುತ್ತಿದೆ.
ಇಂದಿರಾ ಕ್ಯಾಂಟೀನ್ ಮೂಲಕ ಆಹಾರ ಪೊಟ್ಟಣ ಪೂರೈಕೆ
ಜೀವನೋಪಾಯಕ್ಕಾಗಿ ದೈನಂದಿನ ಆದಾಯದ ಮೇಲೆ ಅವಲಂಬಿತರಾಗಿರುವ ಹಾಗೂ ಬಡವರ್ಗದ ಜನರಿಗೆ 91 ಕ್ಯಾಂಟೀನ್‌ಗಳ ಮೂಲಕ ಉಚಿತವಾಗಿ ಊಟದ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ.
ಮೈದಾನಗಳಲ್ಲಿ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ
ವ್ಯಕ್ತಿ ವ್ಯಕ್ತಿಗಳ ನಡುವೆ ಕನಿಷ್ಟ ಅಂತರ(1 ಮೀಟರ್) ಕಾಯ್ದುಕೊಳ್ಳಬೇಕಿರುವುದರಿಂದ, ತಾತ್ಕಾಲಿಕವಾಗಿ ಮಾರುಕಟ್ಟೆಗಳಲ್ಲಿ ತರಕಾರಿ ಮಾರಾಟ ಮಾಡದೆ.
ಮೈದಾನಗಳಲ್ಲಿ ತರಕಾರಿ ಮಾರಾಟ ಮಾಡಲು ಕ್ರಮವಹಿಸಲಾಗುತ್ತಿದ್ದು, ಈಗಾಗಲೇ ವಲಯವಾರು ಮೈದಾನಗಳನ್ನು ಗುರುತಿಸಲಾಗಿದೆ. ಅದರಂತೆ, ದಕ್ಷಿಣ ವಲಯದಲ್ಲಿ ಕಲಾಸಿಪಾಳ್ಯ ಮಾರುಕಟ್ಟೆಯನ್ನು ನ್ಯಾಷನಲ್ ಆಟದ ಮೈದಾನಕ್ಕೆ, ಸಾರಕ್ಕಿ ಮಾರುಕಟ್ಟೆಯನ್ನು ಜರಗನಹಳ್ಳಿ ಮೈದಾನಕ್ಕೆ, ಪೂರ್ವ ವಲಯದಲ್ಲಿ ಪುಲಕೇಶಿ ನಗರದಲ್ಲಿ ಎರಡು ಮೈದಾನಗಳನ್ನು ಗುರುತಿಸಲಾಗಿದೆ.
ಪಶ್ಚಿಮ ವಲಯದಲ್ಲಿ ಸ್ವಾಮಿ ವಿವೇಕಾನಂದ ಮೈದಾನಗಳಲ್ಲಿ ತರಕಾರಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಮೈದಾನಗಳಲ್ಲಿ ವ್ಯಕ್ತಿ-ವ್ಯಕ್ತಿ ನಡುವೆ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಮಾರ್ಕಿಂಗ್ ಮಾಡಲಾಗುತ್ತಿದೆ. ಅಲ್ಲದೆ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಮೈದಾನಗಳಲ್ಲಿ ತರಕಾರಿ ಮಾರಾಟ ಪ್ರಾರಂಭವಾಗಲಿದೆ. ಇದಲ್ಲದೆ ದಿನಸಿ ಮಾರಾಟ ಮಾಡುವ ಮಳಿಗೆಗಳಲ್ಲೂ ಮಾರ್ಕಿಂಗ್ ಮಾಡಿ ಮಾರಾಟ ಮಾಡುವಂತೆ ಸೂಚನೆ ನೀಡಲಾಗಿರುತ್ತದೆ.
ಫೀವರ್ ಕ್ಲೀನಿಕ್ ಮಾಡಲು ಕ್ರಮ
ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವ ನಿಟ್ಟಿನಲ್ಲಿ, ಜ್ವರ ಪ್ರಕರಣ(ಫೀವರ್ ಕ್ಲೀನಿಕ್)ಗಳನ್ನು ತಪಾಸಣೆ ನಡೆಸಲು ಕ್ರಮವಹಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಐ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಲ್ಲಾ ಜ್ವರ ಪ್ರಕರಣಗಳನ್ನು ತಪಾಸಣೆ ನಡೆಸಿ, ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿರುತ್ತದೆ.
ಕೊರೊನಾ ವೈರೆಸ್ ಸೋಂಕಿನಿಂದ ಉಂಟಾಗಬಹುದಾದ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಲವು ಕರ್ತವ್ಯಗಳನ್ನು ನಿಭಾಯಿಸಲು ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ವಲಯಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.
Related
You Might Also Like
4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ
ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ನಾಲ್ಕು ವರ್ಷಕ್ಕೊಮ್ಮೆ ಸರ್ಕಾರದೊಂದಿಗೆ ಚೌಕಾಸಿ ನಡೆಸುವ ಬದಲು ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ...
2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್
ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇಗೆ ಕ್ರಮ ಬೆಂ.ಗ್ರಾ.: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ...
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು
ಮುಷ್ಕರಕ್ಕೆ ಕರೆ ಕೊಟ್ಟು ನಿದ್ದೆಕೂಡ ಮಾಡಲಾಗದ ಪರಿಸ್ಥಿತಿ ತಲುಪಿದ ಹೋರಾಟಗಾರರು ಜಂಟಿ ಪದಾಧಿಕಾರಿಗಳು ಡಿಪೋಗಳಿಗೆ ಹೋದರೂ ಮಾತನಾಡಿಸದ ನೌಕರರು ನೌಕರರ ಬೇಡಿಕೆಗೆ ವಿರುದ್ಧವಾದ ಬೇಡಿಕೆ ಇಟ್ಟು ಮುಷ್ಕರಕ್ಕೆ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27, 2024 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ...
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ...
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋಣ
ಬೆಂಗಳೂರು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಬಂದು ಉದ್ಭವವಾಗುವ ಈ ಮಹಾನುಭಾವ ತಮ್ಮ ಸ್ವಾರ್ಥ ಹಾಗೂ ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಹಾಗೂ ಸಾರಿಗೆ ನಿಗಮದ ಆಡಳಿತ ಮಂಡಳಿಯ ಮುಂದೆ...
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
ಡಿ.31 ರಂದು ಇಳಕಲ್ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್ ಸಮಾವೇಶ
ಬಾಗಲಕೋಟೆ: ರಾಷ್ಟ್ರೀಯ ಸಂಘರ್ಷ ಸಮಿತಿಯ NACಯ ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಒದೇ ಡಿ.31 ರಂದು ಇಳಕಲ್ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್...
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...