NEWSಸಿನಿಪಥ

ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನು ನೆನಪು ಮಾತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ (51) ಅವರು ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿದ್ದ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಅನಾರೋಗ್ಯದಿಂದ ಬಳಲುತ್ತಿದ್ದು ಅತ್ಯಂತ ಕಿರಿಯ ವಯಸ್ಸಿಗೆ ತಮ್ಮ ಜೀವನ ಪಯಣವನ್ನು ಮುಗಿಸಿ ಬಾರದ ಲೋಕಕ್ಕೆ ತೆರಳಿದ್ದಾರೆ.

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಆಘಾತ ತಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರು  ಚಿಕಿತ್ಸೆ ಫಲಿಸದೇ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ಅಪರ್ಣಾ ಅವರು ರಾತ್ರಿ 9.15 ಸುಮಾರಿಗೆ ನಿಧನರಾಗಿದ್ದಾರೆ.   ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ  ಅವರು  ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಅಪರ್ಣಾ ಅವರ ನಿವಾಸದತ್ತ ಚಿತ್ರರಂಗದ ಹಲವಾರು ಗಣ್ಯರು ಆಗಮಿಸುತ್ತಿದ್ದಾರೆ.

ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಪರ್ಣಾ ಎಂದರೆ..?: ಅಪರ್ಣಾ 1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. ಇವರು 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್​ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದವರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು