ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಬಳಿ ಶನಿವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಅಸುನೀಗಿರುವ ಘಟನೆ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿ ಆಂಧ್ರ ಪ್ರದೇಶ ಮೂಲದ ನಾಗರಾಜ್ ಅವರ ಪತ್ನಿ ಪ್ರತ್ಯುಷಾ ಹಾಗೂ ಎರಡು ವರ್ಷದ ಮಗು ಮೃತರು. ಕಾರ್ಕಳ ಬಜಗೋಳಿ ಸಮೀಪ ನೆಲ್ಲಿಕಾರು ಎಂಬಲ್ಲಿ ಈ ಅವಘಡ
ಘಟನೆ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)