NEWSನಮ್ಮರಾಜ್ಯಮೈಸೂರು

ಗಡೀಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ ರಿಲೀಫ್ ನೀಡಿದ ಹೈಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ (ಒಸಿಐ) ಮಾನ್ಯತೆ ರದ್ದು ಹಿನ್ನೆಲೆಯಲ್ಲಿ ಗಡೀಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ ಹೈಕೋರ್ಟ್‌ ಷರತ್ತುಬದ್ಧ ಪರಿಹಾರ ಸೂಚಿಸಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದ್ದು, ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವೀಟ್ ಮಾಡುವಂತಿಲ್ಲ. ವಿಚಾರಣೆಗೆ ಬಾಕಿಯಿರುವ ಕೇಸ್‍ಗಳ ಬಗ್ಗೆಯೂ ಟ್ವೀಟ್ ಮಾಡುವಂತಿಲ್ಲ ಎಂದ ಕೋರ್ಟ್ ಜೂ. 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ತಿಳಿಸಿದೆ.

ಇನ್ನು ನಟ ಚೇತನ್‍ಗೆ 2018ರಲ್ಲಿ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಚೇತನ್ ಮೇಲೆ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲ ಎಂದು ಕೇಂದ್ರ ಸರ್ಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು.

ಆದರೆ ಚೇತನ್ ಪರ ವಕೀಲರು, ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದವು.

ಅಲ್ಲದೆ ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡಬೇಕು ಎಂದು ಕೇಂದ್ರ, ರಾಜ್ಯ ಸರ್ಕಾರದ ಪರ ವಕೀಲರಾದ ಎಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದ ಮಂಡಿಸಿದ್ದರು.

ಎರಡು ಕಡೆಯ ವಕೀಲರ ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ನಟ ಚೇತನ್‍ಗೆ ಷರತ್ತುಬದ್ಧ ರಿಲೀಫ್ ನೀಡಿದೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ