CrimeNEWSದೇಶ-ವಿದೇಶ

ಗಡಿ ವಿವಾದ: ಕರ್ನಾಟಕ ಬಸ್‌ಗಳಿಗೆ ಕಪ್ಪು ಬಣ್ಣ ಬಳಿದು ಮರಾಠ ಮಹಾಸಂಘ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜಕೀಯ ನಾಯಕರು ಎರಡೂ ರಾಜ್ಯಗಳ ಗಡಿ ವಿವಾದದ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಈ ಗಡಿ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಖಂಡಿಸಿ ಮರಾಠ ಮಹಾಸಂಘ ಪ್ರತಿಭಟನೆ ನಡೆಸಿದೆ. ಜತೆಗೆ ಈ ಸಂಘಟನೆ ಕಾರ್ಯಕರ್ತರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಿಗೆ ಕಪ್ಪು ಬಣ್ಣ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಣೆ ಜಿಲ್ಲೆಯ ದೌಂಡ್ನ ಬಸ್ ನಿಲ್ದಾ ಣದಲ್ಲಿ ನಿಪ್ಪಾ ಣಿ– ಔರಂಗಾಬಾದ್ ಬಸ್ ಮೇಲೆ ಕೇಸರಿ ಹಾಗೂ ಕಪ್ಪು ಬಣ್ಣಗಳಿಂದ ಈ ಖಂಡನಾ ವಾಕ್ಯಗಳನ್ನು ಬರೆದಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು , ಮರಾಠ ಮಹಾಸಂಘದ ಕಾರ್ಯ ವೈಖರಿಗೆ ಖಂಡನೆ ವ್ಯಕ್ತವಾಗಿದೆ.

ಗಡಿ ವಿವಾದ ಕುರಿತು ಇತ್ತೀ ಚೆಗೆ ಸುದ್ದಿಗಾರರೊಂದಿಗೆಮಾತನಾಡಿದ್ದ ಮಹಾರಾಷ್ಟ್ರ ಉಪಮುಖ್ಯ ಮಂತ್ರಿ ದೇವೇಂದ್ರ ಫಡ್ನವೀಸ್, ನಿಪ್ಪಾ ಣಿ, ಬೆಳಗಾವಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಅಕ್ಕಲಕೋಟೆ ಕರ್ನಾಟಕದ ಭಾಗವಾಗಬೇಕು ಎಂಬುದು ನಮ್ಮ ಆಗ್ರಹ ಎಂದು ತಿರುಗೇಟು ನೀಡಿದ್ದರು.

ದೇವೇಂದ್ರ ಫಡ್ನವೀಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು , ಅವರ ಕನಸು ಎಂದಿಗೂ ನನಸಾಗುವುದಿಲ್ಲ. ರಾಜ್ಯದ ನೆಲ, ಜಲ, ಗಡಿ ರಕ್ಷಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ . ಮಹಾರಾಷ್ಟ್ರದಲ್ಲಿ ಕನ್ನಡ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂಬುದು ನಮ್ಮ ಆಗ್ರಹ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ಸರ್ಕಾರವು ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು 2004ರಿಂದಲೂ ದಾವೆಗಳನ್ನು ಹೂಡುತ್ತಿದೆ. ಈವರೆಗೂ ಯಶಸ್ವಿಯಾಗಿಲ್ಲ . ಮುಂದೆಯೂ ಆಗುವುದಿಲ್ಲ ಎಂದು ಖಾರವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ