VIJAYAPATHA.IN > ವಿಜಯಪಥ > NEWS > Crime > ಗುಂಡು ಹಾರಿಸಿಕೊಂಡು ಕರ್ನಾಟಕದ ಯೋಧ ಆತ್ಮಹತ್ಯೆ
ದಾವಣಗೆರೆ: ದೇಶಕಾಯುತ್ತಿದ ಕರ್ನಾಟಕದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ದಾವಣಗೆರೆಯ ಸಮೀಪದ ಹದಡಿ ಗ್ರಾಮದ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ಯೋಧರು. ಕೆಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್ ಭಾನುವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಯೋಧ ನಾಗರಾಜ್ ತಮ್ಮ ಊರಿಗೆ ಬರಲು ಫ್ಲೈಟ್ ಟಿಕೆಟ್ ಬುಕ್ ಮಾಡಿದ್ದರು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಗ್ರಾಮಕ್ಕೆ ಬಂದು ಹೋಗಿದ್ದರು. 12 ವರ್ಷಗಳಿಂದ ಪಂಜಾಬ್, ಹರಿಯಾಣದಲ್ಲಿ ಸೇವೆ ಸಲ್ಲಿಸಿದ್ದರು.
ನಾಗರಾಜ್ ಅವರು, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ. ಯೋಧನ ಪಾರ್ಥಿವ ಶರೀರ ಇಂದು ಸ್ವಗ್ರಾಮ ಹದಡಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
Related
admin.savhn