ಗದಗ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಟಾಟಾ ಸುಮೋ ನಡುವೆ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯತು ಸೇರಿದಂತೆ ಐವರು ಮೃತಪಟ್ಟಿದ್ದು ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ಮೃತರು ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ. ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಈ ಘಟನೆಯಲ್ಲಿ ಟಾಟಾ ಸುಮೋದಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ಸಾರಿಗೆ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಟಾಟಾ ಸುಮೋದಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದ್ದರಿಂದ ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ.
ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.
ರಸ್ತೆ ಬದಿ ಮನೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್: ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಮನೆಗೆ ನುಗ್ಗಿದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಆಗ್ಗುಂದ ಗ್ರಾಮ ಬಳಿ ನಡೆದಿದೆ. ಅರಸೀಕೆರೆಯಿಂದ ಹುಳಿಯಾರಕ್ಕೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಗ್ಗುಂದ ಗ್ರಾಮದ ಮನಯೊಂದಕ್ಕೆ ನುಗ್ಗಿದೆ. ಘಟನೆಯಲ್ಲಿ ನಾಲ್ಕೈದು ಮಂದಿಗೆ ಸಣ್ಣ ಪುಟ್ಚ ಗಾಯಗಳಾಗಿದ್ದು, ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.