NEWSನಮ್ಮರಾಜ್ಯರಾಜಕೀಯ

ಗೆದ್ದಲು ಹಿಡಿಯುತ್ತಿರುವ ಕಾಂತರಾಜು ವರದಿ ಮಂಡಿಸಿ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಹಿಂದೆ ಎಚ್. ಕಾಂತರಾಜು ಅವರ ನೇತೃತ್ವದಲ್ಲಿ ರಚಿಸಿದ ಆಯೋಗವು 2015 ರಲ್ಲಿ ನಡೆಸಿದ ಸಮೀಕ್ಷೆಯ ವರದಿ ಇನ್ನೂ ಮಂಡನೆಯಾಗಿದೆ ಗೆದ್ದಲು ಹಿಡಿಯುತ್ತಿದೆ. ಹೀಗಾಗಿ ಅದನ್ನು ಗೆದ್ದಲು ಹುಳುಗಳು ತಿಂದು ಮುಗಿಸುವ ಮುನ್ನಾ ಕಾಂತರಾಜು ವರದಿ ಮಂಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನು ನಗರದಲ್ಲಿ ಮಂಗಳವಾರ ಭೇಟಿ ಮಾಡಿದ ಮುಖ್ಯಮಂತ್ರಿ ಚಂದ್ರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರವು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಅನೇಕ ಆಯೋಗಗಳನ್ನು ರಚಿಸಿದೆ. ಈ ಹಿಂದೆ ಎಚ್. ಕಾಂತರಾಜು ಅವರ ನೇತೃತ್ವದಲ್ಲಿ ರಚಿಸಿದ ಆಯೋಗವು 2015 ರಲ್ಲಿ ನಡೆಸಿದ ಸಮೀಕ್ಷೆಯ ವರದಿ ಇನ್ನೂ ಪ್ರಕಟಗೊಳ್ಳದಿರುವುದು ಅಸಮಂಜಸ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಈ ಆಯೋಗದ ವರದಿ ರಾಜ್ಯದ ಪ್ರತಿಯೊಂದು ಜಾತಿ, ಉಪಜಾತಿಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಜನರಿಗೆ ತಿಳಿಸುತ್ತದೆ ಎಂಬ ನಂಬಿಕೆಯನ್ನು ಮೂಡಿಸಿತ್ತು. ಈ ವರದಿ ಇನ್ನೂ ಮಂಡನೆಯಾಗದಿರುವುದು ರಾಜ್ಯದ ಬೊಕ್ಕಸಕ್ಕೆ ಆದ ನಷ್ಟ ಮಾತ್ರವಲ್ಲದೇ, ಹಿಂದುಳಿದ ಜಾತಿಯ ಜನರಿಗೆ ಅನ್ಯಾಯವು ಕೂಡ ಆಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಶೈಕ್ಷಣಿಕ ಸವಲತ್ತುಗಳು ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸ್ಥಿತಿಗೆ ಹೋಲಿಕೆ ಮಾಡುವಂತಿರಬೇಕು ಎಂದು ಕೆ.ಸಿ.ವಸಂತ್‌ಕುಮಾರ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತಿಳಿಸಿದೆ. ಜತೆಗೆ ಇಂದಿರಾ ಸಹಾನಿ ಪ್ರಕರಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರನ್ನು ಗುರುತಿಸಲು ಕೈಗೊಳ್ಳುವ ಸಮೀಕ್ಷೆಗೆ ಇಡೀ ರಾಜ್ಯದ ಜನಸಂಖ್ಯೆಯನ್ನು ಒಳಪಡಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಈ ನಿಟ್ಟಿನಲ್ಲಿ ಸರ್ವೊಚ್ಚ ನ್ಯಾಯಾಲಯದ ನಿಯಮ ಪಾಲನೆ ಯಾಗದಿರುವುದನ್ನು ಆಯೋಗದ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

2015ರಲ್ಲಿ ಇದ್ದ ಕಾಂಗ್ರೆಸ್‌ ಸರ್ಕಾರ, 2018 ರಲ್ಲಿ ರಚನೆಯಾದ ಮೈತ್ರಿ ಸರ್ಕಾರ ಹಾಗೂ ನಂತರದ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ರಾಜಕೀಯ ಹಿತಾಸಕ್ತಿಯಿಂದ ವರದಿ ಮಂಡನೆಯಾಗಿಲ್ಲ. ಇದು ಶ್ರಮಿಕರ, ಹಿಂದುಳಿದ ವರ್ಗದವರ ವಿರುದ್ಧದ ಧೋರಣೆಯಾಗಿದೆ ಎಂದು ಕಿಡಿಕಾರಿದರು.

ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕ ಸಭೆಯಲ್ಲಿ ವರದಿ ಮಂಡನೆ ಮತ್ತು ಅನುಷ್ಠಾನವನ್ನು ಶೀಘ್ರವೇ ಮಾಡುವುದಾಗಿ ಪ್ರಸ್ತಾಪಿಸಿದ್ದಾರೆ. ಆದ ಕಾರಣ, ಈ ವಿಚಾರದಲ್ಲಿ ಯಾವುದೇ ರೀತಿಯ ಕಾರಣಗಳನ್ನು ನೀಡದೇ ರಾಜ್ಯದ ಜಿ.ಪಂ, ತಾ.ಪಂ, ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ವರದಿ ಮಂಡಿಸುವ ಎಲ್ಲ ಪ್ರಕ್ರಿಯೆಗಳು ಮುಗಿಯುವಂತೆ ನೋಡಿಕೊಳ್ಳಬೇಕೆಂದು ಚಂದ್ರು ಆಗ್ರಹಿಸಿದರು.

ಭೇಟಿಯ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಇನ್ನಿತರ ಮುಖಂಡರು ಭಾಗವಹಿಸಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ