NEWSಉದ್ಯೋಗನಮ್ಮಜಿಲ್ಲೆ

ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಸಮರ್ಥ ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನರು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು 25.10.2023 ರೊಳಗೆ ಜಿಲ್ಲಾ ಅಂಗನಿಕಲರ ಕಲ್ಯಾಣಾಧಿಕಾರಿಯವರ ಕಷರಿ ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ನೇಮಕಾತಿ ಮಾಡಬೇಕಾದ ಗ್ರಾಮ ಪಂಚಾಯಿತಿಗಳ ನಗರಸಭೆಯ ಹೆಸರು ಹೊಸಕೋಟೆ- ಶಿವನಾಪುರ ಮತ್ತು ಸೂಲಿಬೆಲೆ ಹೊಸಕೋಟೆ ನಗರಸಭೆ-02 ಹುದ್ದೆ.

ಷರತ್ತುಗಳು: 1) ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.) 2) ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುರ್ತ್ತೀರಾದವರನ್ನು
ಪರಿಗಣಿಸಲಾಗುವುದು. 3) 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು.

4) ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.

5) ಈ ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ. 6) ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಕಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.

7, ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ಏಕಲಚೇತನರಾಗಿರಬಾರದು. 8) ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು. 9). ಮಾಹೆಯಾನ ಗೌರವಧನ ರೂ.9,000 ನೀಡಲಾಗುವುದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ. ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು