NEWSನಮ್ಮಜಿಲ್ಲೆ

ಗುರುತಿನ ಚೀಟಿ ಹೊಂದಿರುವ ವ್ಯಕ್ತಿಗಳಿಗೆ ವಿನಾಯಿತಿ

 ಕೊರೊನಾ ತಡೆಗೆ ಲಾಕ್ ಡೌನ್ l  ಅಗತ್ಯ ಸೇವೆಗಳ ವಾಹನ ಸಂಚಾರ ಮುಕ್ತ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ:  ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಜಿಲ್ಲೆಯಾದ್ಯಂತ 144 ಜಾರಿಗೊಳಿಸಿ, ಸಾರ್ವಜನಿಕರಿಗೆ ಮನೆಯಿಂದ ಹೊರಬಂದಂತೆ ಆದೇಶಿಸಲಾಗಿದೆ.

ಆದರೆ ತರಕಾರಿ, ಹಾಲು, ಕಿರಾಣಿ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ ಪೂರೈಕೆ ಮಾಡಲು ಹಾಗೂ ಕೋವಿಡ್ 19 ತಡೆಗಟ್ಟುವ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿ, ಖಾಸಗಿ ಸಂಸ್ಥೆಯ ವಾಹನಗಳಿಗೆ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರದ ಇಲಾಖೆ, ಕಚೇರಿಗಳಿಂದ ನೀಡಲ್ಪಟ್ಟ ಗುರುತಿನ ಚೀಟಿಗಳನ್ನು ಹೊಂದಿರುವ ಕರ್ತವ್ಯ ನಿರತರಿಗೆ ಅವರ ಕಾರ್ಯಕ್ಷೇತ್ರದಲ್ಲಿ ವಿನಾಯಿತಿ ನೀಡಲಾಗಿದೆ. ಎಲ್ಲಾ ಸರ್ಕಾರಿ ವಾಹನಗಳಿಗೆ ವಿನಾಯಿತಿ ಇದೆ. ಸರ್ಕಾರ ಹೊರಗುತ್ತಿಗೆ ಮೂಲಕ ಪಡೆದುಕೊಂಡ ಖಾಸಗಿ ವಾಹನಗಳಿಗೆ ಜಿಲ್ಲಾಡಳಿತ ವಾಹನ ಪಾಸುಗಳನ್ನು ನೀಡಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಅಗತ್ಯ ವಸ್ತುಗಳ ಮಾರಾಟ ಮಾಡುವ ಅಂಗಡಿಯವರು ಮತ್ತು ಸಿಬ್ಬಂದಿ ವಾಹನಗಳಿಗೆ , ಸರ್ಕಾರಿ ಮತ್ತು ಖಾಸಗಿ ವೈದ್ಯರು, ನರ್ಸ್ ಗಳು, ಅರೆ ವೈದ್ಯಕೀಯ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಿಬ್ಬಂದಿ , ಪತ್ರಿಕಾ ವಿತರಣೆ ವಾಹನಗಳು, ಪತ್ರಿಕೆ ಹಂಚುವವರು, ಅವಶ್ಯ ಸರಕು ಸೇವೆಗಳ ಸಾಗಾಣಿಕೆ ವಾಹನಗಳು, ಅವಶ್ಯಕ ಸಾಮಗ್ರಿಗಳ ಉತ್ಪಾದನಾ ಕಾರ್ಖಾನೆಗಳ ಕಾರ್ಮಿಕರಿಗೆ ಸರ್ಕಾರದ ಸುತ್ತೋಲೆಯ ನಿರ್ಬಂಧದಂತೆ ಅವರ ವಾಸ ಸ್ಥಳದಿಂದ ಕಾರ್ಖಾನೆಯ ಸ್ಥಳಕ್ಕೆ ಹೋಗಿ ಬರಲು ಹಾಗೂ ಜಿಲ್ಲಾಡಳಿತ ಕೋವಿಡ್ 19 ಸೇವೆಯಲ್ಲಿ ನಿರತರಾದವರಿಗೆ ನೀಡಿದ ಗುರುತಿನ ಚೀಟಿ ಹೊಂದಿರುವ ವ್ಯಕ್ತಿಗಳು ಮತ್ತು ವಾಹನಗಳಿಗೆ ಸಂಚರಿಸಲು ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಆಗಸದಲ್ಲೇ ಡಿಕ್ಕಿ ಹೊಡೆದುಕೊಂಡ ನೌಕಾಪಡೆಯ 2 ಹೆಲಿಕಾಪ್ಟರ್‌ಗಳು ನೋಡ ನೋಡುತ್ತಿದ್ದಂತೆ ಪತನ: 10 ಮಂದಿ ಮೃತ KSRTC: ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ಅವಕಾಶ ನೀಡುತ್ತಿದೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವಾಲಯ KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು