NEWSಬೆಂಗಳೂರುರಾಜಕೀಯ

ಚಾಮರಾಜನಗರ, ವರುಣಾ ಎರಡೂ ಕ್ಷೇತ್ರದಲ್ಲಿ ಸೋತ ಸೋಮಣ್ಣ: ಲಿಂಗಾಯತ ನಾಯಕನಿಗೆ ಬಿಜೆಪಿ ಕೊನೆ ಮೊಳೆ ಹೊಡೆಯಿತಾ?

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ತೀವ್ರ ಕುತೂಹಲ ಮೂಡಿಸಿರುವ ಚಾಮರಾಜನಗರ ವಿಧಾನಸಭಾ ಚುನಾವಣೆ ಫಲಿತಾಂಶದ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸಿ.ಪುಟ್ಟರಂಗ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿಯಾಗಿದ್ದ  ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸೋಲು ಅನುಭವಿಸುವ ಮೂಲಕ ತೀವ್ರ ಮುಖಭಂಗವಾಗಿದೆ.   ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸೋಲು ಕಂಡಿದ್ದು, ಈ ಮೂಲಕ ಲಿಂಗಾಯತ ನಾಯಕನಿಗೆ ಬಿಜೆಪಿ ಕೊನೆ ಮೊಳೆ ಹೊಡೆಯಿತಾ ಎಂಬ ಪ್ರಶ್ನೆ ಕಾಡುತ್ತಿದೆ.

ಕಾಂಗ್ರೆಸ್‌ ಅಭ್ಯರ್ಥಿ ಸಿ.ಪುಟ್ಟರಂಗ ಶೆಟ್ಟಿ ಹತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ವಿ.ಸೋಮಣ್ಣ ಚಾಮರಾಜನಗರ ಹಾಗೂ ವರುಣಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣಗೆ ಮುಖಭಂಗವಾಗಿದೆ.

ಇನ್ನು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಮುನ್ನಡೆ ಸಾಧಿಸಿದ್ದು, ವಿ.ಸೋಮಣ್ಣ ಹಿನ್ನಡೆಯಲ್ಲಿದ್ದಾರೆ.

ಚಾಮರಾಜನಗರದಲ್ಲಿ ನಿರಂತರ 4 ಬಾರಿ ಶಾಸಕನಾದ ಮೊದಲಿಗರಾದ ಸಿ.ಪುಟ್ಟರಂಗಶೆಟ್ಟಿ ತಾವು ಸೋಲಿಲ್ಲದ ಸರದಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಸುಮಾರು ಹತ್ತೊಂಬತ್ತು ಹಂತದಲ್ಲಿ ನಡೆದ ಮತ ಎಣಿಕೆಯಲ್ಲಿ 7,383 ಮತ ಅಂತರದಲ್ಲಿ ಸಿ‌.ಪುಟ್ಟರಂಗಶೆಟ್ಟಿಗೆ ಜಯ ಸಾಧಿಸಿದ್ದು, ಸಿ.ಪುಟ್ಟರಂಗಶೆಟ್ಟಿ 83,136 ಮತಗಳನ್ನು ಪಡೆದಿದ್ದರೆ, ವಿ.ಸೋಮಣ್ಣ 75,753 ಮತಗಳನ್ನು ಪಡೆದಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ